ಕನ್ನಡಪ್ರಭ ವಾರ್ತೆ ವಿಜಯಪುರ
ಭಾರತೀಯ ಶಿಕ್ಷಣ ಮಂಡಲದ ಅಖಿಲ ಭಾರತೀಯ ಸಹ ಕಾರ್ಯದರ್ಶಿ ಡಾ.ಮೀನಾ ಚಂದಾವರ್ಕರ್ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರೀಯ ಪುನರುತ್ಥಾನದ ಉದ್ದೇಶದಿಂದ ಈ ಸಂಸ್ಥೆಯು ಸಮಗ್ರ ಭಾರತೀಯ ದೃಷ್ಟಿಕೋನದ ಆಧಾರದ ಮೇಲೆ ರಾಷ್ಟ್ರೀಯ ಶಿಕ್ಷಣ ನೀತಿ, ಪಠ್ಯಕ್ರಮ, ವ್ಯವಸ್ಥೆ ಮತ್ತು ವಿಧಾನಗಳನ್ನು ವಿಕಸಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದರು.
ಭಾರತೀಯ ಶಿಕ್ಷಣ ಮಂಡಲದ ಪ್ರಾಂತ ಸಂರಕ್ಷಕರಾದ ಡಾ.ಸತೀಶ ಜಿಗಜಿನ್ನಿ ಮಾತನಾಡಿ, ಭಾರತೀಯ ಸಂಸ್ಕೃತಿಯು ವಿದ್ಯಾರ್ಥಿಗಳ ವ್ಯಕ್ತಿತ್ವದಲ್ಲಿ ಪ್ರತಿಬಿಂಬಿತವಾಗಬೇಕು. ಶಿಕ್ಷಣ ಕ್ಷೇತ್ರದ ಪಾಲುದಾರರಾದ ಶಿಕ್ಷಕರು, ಶಿಕ್ಷಣ ಸಂಸ್ಥೆಗಳು ಮತ್ತು ಪೋಷಕರು ಈ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.ನಾಗಪುರದ ಭಾರತೀಯ ಶಿಕ್ಷಣ ಮಂಡಲದ ಅಖಿಲ ಭಾರತೀಯ ಸಂಘಟನಾ ಮಂತ್ರಿ ಬಿ.ಆರ್.ಶಂಕರಾನಂದ, ಜಿಲ್ಲಾಧ್ಯಕ್ಷ ಬಿ.ಎಸ್.ಬಾಪಗೊಂಡ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಸಿದ್ದು ಮದರಖಂಡಿ ಸಂಘಟನಾ ಮಂತ್ರ ಹೇಳಿದರು. ಸಹ ಕಾರ್ಯದರ್ಶಿ ಸಂತೋಷ ಬಂಡೆ ನಿರ್ವಹಿಸಿದರು. ಡಾ.ಎಸ್.ಟಿ ಬೋಳರೆಡ್ಡಿ ವಂದಿಸಿದರು. ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ಗುಡ್ಡದ, ಪ್ರೊ.ರಾಜಕುಮಾರ ಮಾಲಿಪಾಟೀಲ, ಶೀಲಾ ಬಿರಾದಾರ, ರಾಜಶ್ರೀ ಜುಗತಿ, ಪ್ರೊ.ಅಶೋಕ ಸುರಪುರ, ಪ್ರೊ.ಎ.ಬಿ.ಲಕ್ಕಣ್ಣವರ, ಡಾ.ಎಚ್.ವೆಂಕಟೇಶ ಸೇರಿದಂತೆ ಜಿಲ್ಲೆಯ 200ಕ್ಕೂ ಅಧಿಕ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
--------------------------------------ಕೋಟ್‌ಶಿಕ್ಷಣವು ಜಗತ್ತನ್ನು ಬದಲಾಯಿಸಬಲ್ಲ ಅತ್ಯಂತ ಶಕ್ತಿಶಾಲಿ ಅಸ್ತ್ರವಾಗಿದೆ. ಶಿಕ್ಷಣ ವ್ಯವಸ್ಥೆಯ ರೂಪುರೇಷೆಗಳು ರಚನಾತ್ಮಕ ಬದಲಾವಣೆಯನ್ನು ಕಂಡುಕೊಳ್ಳುವ ಜತೆಗೆ ಶಿಕ್ಷಣದಲ್ಲಿ ಮಾತೃಭಾಷೆ, ಸಂಸ್ಕೃತಿ, ಜ್ಞಾನ, ಕೌಶಲ ಹಾಗೂ ಉದ್ಯೋಗಾವಕಾಶಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ.ಬಸವರಾಜ ಕೌಲಗಿ, ಎಕ್ಸಲಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ