ಗ್ರಾಮೀಣ ಭಾಗದಲ್ಲಿ ಬ್ಯಾಂಕಿಂಗ್ ಸೌಲಭ್ಯ ವಿಸ್ತರಣೆ: ಸಚಿವ ಆರ್.ಬಿ. ತಿಮ್ಮಾಪೂರ

KannadaprabhaNewsNetwork |  
Published : Sep 10, 2025, 01:05 AM IST
ರನ್ನ ಬೆಳಗಲಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ  ಅವರು ಬಿಡಿಸಿಸಿ ಬ್ಯಾಂಕಿನ ನೂತನ ಶಾಖೆ ಉದ್ಘಾಟಿಸಿದರು. | Kannada Prabha

ಸಾರಾಂಶ

ಗ್ರಾಮೀಣ ಭಾಗದಲ್ಲಿ ಬ್ಯಾಂಕಿಂಗ್ ಸೌಲಭ್ಯ ವಿಸ್ತರಿಸುವ ನಿಟ್ಟಿನಲ್ಲಿ ಇದು ಮಹತ್ವದ ಮೈಲುಗಲ್ಲಾಗಿದೆ. ಎಲ್ಲಾ ರೈತ ಬಾಂಧವರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಹಕರಿಗೆ ಸಕಲ ಸೌಲಭ್ಯ ನೀಡುವ ಗುರಿಯನ್ನು ಬ್ಯಾಂಕು ಹೊಂದಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಕನ್ನಡಪ್ರಭ ವಾರ್ತೆ ಮಹಾಲಿಂಗಪುರ

ಗ್ರಾಮೀಣ ಭಾಗದಲ್ಲಿ ಬ್ಯಾಂಕಿಂಗ್ ಸೌಲಭ್ಯ ವಿಸ್ತರಿಸುವ ನಿಟ್ಟಿನಲ್ಲಿ ಇದು ಮಹತ್ವದ ಮೈಲುಗಲ್ಲಾಗಿದೆ. ಎಲ್ಲಾ ರೈತ ಬಾಂಧವರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಹಕರಿಗೆ ಸಕಲ ಸೌಲಭ್ಯ ನೀಡುವ ಗುರಿಯನ್ನು ಬ್ಯಾಂಕು ಹೊಂದಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಸಮೀಪದ ರನ್ನ ಬೆಳಗಲಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡದಲ್ಲಿ ಶುಕ್ರವಾರ ಬಿಡಿಸಿಸಿ ಬ್ಯಾಂಕಿನ ನೂತನ ಶಾಖೆ ಉದ್ಘಾಟಿಸಿ ಮಾತನಾಡಿದರು.

ಬಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಆರ್.ಎಸ್. ತಳೆವಾಡ ಮಾತನಾಡಿ, ರನ್ನ ಬೆಳಗಲಿಯ ರೈತ ಬಾಂಧವರ ಬಹುದಿನಗಳ ಬೇಡಿಕೆ ಇಂದು ಈಡೇರಿದೆ. ತಮ್ಮೆಲ್ಲರಿಗೆ ಉತ್ತಮ ಸೌಲಭ್ಯ ನೀಡುತ್ತದೆ ಎಂದು ಭರವಸೆ ಇಟ್ಟಿದ್ದೇನೆ. ಇದು ಎಲ್ಲಾ ರೈತ ಬಾಂಧವರ ಬ್ಯಾಂಕು ಅದರ ಅಭಿವೃದ್ಧಿ ನಿಮ್ಮ ಕೈಯಲ್ಲಿದೆ ಎಂದು ಹೇಳಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರೂಪಾ ಹೊಸಟ್ಟಿ, ಪಿಕೆಪಿಎಸ್ ಅಧ್ಯಕ್ಷರಾದ ಚಿನ್ನಪ್ಪ ಪೂಜೇರಿ, ಪ್ರವೀಣ ಪಾಟೀಲ, ಡಿಸಿಸಿ ಬ್ಯಾಂಕ್ ಎಂಡಿ ಎಸ್.ಎನ್. ನೀಲಪ್ಪನವರ, ಜಿ.ಎಂ. ರುದ್ರಪ್ಪ ಕೋಮಾರ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದ್ದುಗೌಡ ಪಾಟೀಲ, ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಮುಧೋಳ ತಾಲೂಕು ಎಪಿಎಂಸಿ ಅಧ್ಯಕ್ಷ ಸಂಗಪ್ಪ ಇಮ್ಮನ್ನವರ, ಪಿಕೆಪಿಎಸ್ ಮುಖ್ಯ ಕಾರ್ಯನಿರ್ವಾಹಕ ಬಸವರಾಜ ಹಿಕಡಿ, ಆದರ್ಶ ಕುಲಕರ್ಣಿ ಹಾಗೂ ಪಪಂ ಸದಸ್ಯರು, ಪಿಕೆಪಿಎಸ್ ಸದಸ್ಯರು, ಮುಖಂಡರು, ರೈತರು ಉಪಸ್ಥಿತರಿದ್ದರು. ನಿಂಗರಾಜ ಗುಡಿ ಮತ್ತು ರಾಚಣ್ಣ ತೇಲಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕೋಟ್ಸ್ .

ಪಟ್ಟಣ ಸಾಕಷ್ಟು ನೀರಾವರಿ ಜಮೀನು ಹೊಂದಿದ್ದು, ಉತ್ತಮ ಬೇಸಾಯಕ್ಕೆ ವರದಾನವಾಗಿದೆ. ರೈತರ ಕಷ್ಟಗಳಿಗೆ ನಮ್ಮ ಬ್ಯಾಂಕು ಸದಾ ಸ್ಪಂದಿಸುತ್ತದೆ ಮತ್ತು ರಾಜ್ಯ ಕೇಂದ್ರ ಸರ್ಕಾರಗಳ ಎಲ್ಲಾ ಯೋಜನೆಗಳನ್ನು ತಮಗೆ ನೀಡುತ್ತದೆ.

- ಅಜಯಕುಮಾರ ಸರನಾಯಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ