ವಿಭಾಗ ಮಟ್ಟದ ಪ್ರಗತಿ ಪರಿಶೀಲನೆಗೆ ಅನುಭವ ಮಂಟಪ ಫಿಕ್ಸ್!

KannadaprabhaNewsNetwork |  
Published : Jul 19, 2026, 02:15 AM IST
ಚಿತ್ರದುರ್ಗ ಮೂರನೇ ಪುಟದ ಲೀಡ್   | Kannada Prabha

ಸಾರಾಂಶ

ಚಿತ್ರದುರ್ಗಜುಲೈ 25 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಗೆ ಜಾಗ ನಿಗದಿ ಮಾಡುವ ರಿಸ್ಕ್‌ನಿಂದ ಅಂತೂ ಅಧಿಕಾರಿಗಳು ಪಾರಾಗಿದ್ದಾರೆ. ಬಸವಕೇಂದ್ರ ಮುರುಘಾ ಮಠದಲ್ಲಿರುವ ಅನುಭವ ಮಂಟಪ ಸಭೆ ನಡೆಸಲು ಫಿಕ್ಸ್ ಆಗಿದೆ. ಸುಮಾರು ಐದು ಸಾವಿರ ಮಂದಿ ಕುಳಿತುಕೊಳ್ಳುವಷ್ಟು ವಿಶಾಲವಾಗಿರುವ ಅನುಭವ ಮಂಟಪ ಸಭೆ ನಡೆಸುವ ಸಭಾಂಗಣವಾಗಿ ರೂಪಾಂತರಗೊಳಿಸುವ ಪ್ರಕ್ರಿಯೆಗೆ ಅಧಿಕಾರಿಗಳು ಚಾಲನೆ ನೀಡಿದ್ದಾರೆ.

-25ರಂದು ಸಿಎಂ ಅಧ್ಯಕ್ಷತೆಯಲ್ಲಿ ಸಭೆ । 9 ಜಿಲ್ಲೆಗಳ ಸಚಿವರು, ಶಾಸಕರು ಸೇರಿ 300 ಮಂದಿ ಭಾಗಿಕನ್ನಡಪ್ರಭ ವಾರ್ತೆ, ಚಿತ್ರದುರ್ಗ

ಜುಲೈ 25 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಗೆ ಜಾಗ ನಿಗದಿ ಮಾಡುವ ರಿಸ್ಕ್‌ನಿಂದ ಅಂತೂ ಅಧಿಕಾರಿಗಳು ಪಾರಾಗಿದ್ದಾರೆ. ಬಸವಕೇಂದ್ರ ಮುರುಘಾ ಮಠದಲ್ಲಿರುವ ಅನುಭವ ಮಂಟಪ ಸಭೆ ನಡೆಸಲು ಫಿಕ್ಸ್ ಆಗಿದೆ. ಸುಮಾರು ಐದು ಸಾವಿರ ಮಂದಿ ಕುಳಿತುಕೊಳ್ಳುವಷ್ಟು ವಿಶಾಲವಾಗಿರುವ ಅನುಭವ ಮಂಟಪ ಸಭೆ ನಡೆಸುವ ಸಭಾಂಗಣವಾಗಿ ರೂಪಾಂತರಗೊಳಿಸುವ ಪ್ರಕ್ರಿಯೆಗೆ ಅಧಿಕಾರಿಗಳು ಚಾಲನೆ ನೀಡಿದ್ದಾರೆ.

ಪ್ರಗತಿ ಪರಿಶೀಲನಾ ಸಭೆ ಸಂಬಂಧ ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಸಿದ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಎಲ್ಲೂ ಲೋಪಗಳಾಗದಂತೆ ಎಚ್ಚರ ವಹಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಎಲ್ಲಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮರ್ಪಕ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಗೆ, ಬೆಂಗಳೂರು ವಿಭಾಗದ 9 ಜಿಲ್ಲೆಗಳ ಸಚಿವರು, ಶಾಸಕರು ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ. ಇದರೊಂದಿಗೆ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು ಹಾಗೂ 9 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒಗಳು, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಮತ್ತು ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಒಟ್ಟು 300ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಈಗಾಗಲೇ ಬೆಳಗಾವಿ ಮತ್ತು ಕಲಬುರ್ಗಿಯಲ್ಲಿ ಇಂತಹ ವಿಭಾಗ ಮಟ್ಟದ ಸಭೆಗಳು ಯಶಸ್ವಿಯಾಗಿ ನಡೆದಿವೆ. ಚಿತ್ರದುರ್ಗ ಜಿಲ್ಲೆಯಲ್ಲೂ ಈ ಸಭೆಯನ್ನು ಯಶಸ್ವಿಯಾಗಿ ನಡೆಸಲು ಮುಖ್ಯಮಂತ್ರಿಗಳು ಜವಾಬ್ದಾರಿ ನೀಡಿದ್ದಾರೆ. ಅಧಿಕಾರಿಗಳು ಯಾವುದೇ ಆತಂಕಕ್ಕೆ ಒಳಗಾಗದೆ, ಸಮನ್ವಯತೆಯಿಂದ ಕೆಲಸ ಮಾಡಿ ಜಿಲ್ಲೆಗೆ ಒಳ್ಳೆಯ ಹೆಸರು ತರಬೇಕು ಎಂದರು.

ಚಿತ್ರದುರ್ಗ ಜಿಲ್ಲೆ ಈ ಬೃಹತ್ ಸಭೆಗೆ ಆತಿಥ್ಯ ವಹಿಸುತ್ತಿರುವುದರಿಂದ, ವ್ಯವಸ್ಥೆಗಳು ಅಚ್ಚುಕಟ್ಟಾಗಿರಬೇಕು. ಜಿಲ್ಲೆಯ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನಾ ವರದಿ ಅತ್ಯಂತ ನಿಖರ ಹಾಗೂ ಉತ್ತಮ ಮಟ್ಟದಲ್ಲಿರಬೇಕು. ಸಭೆಗೆ ಆಗಮಿಸುವ ಸಚಿವರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳ ಶಿಷ್ಠಾಚಾರದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಸಭೆಗೆ ಸಂಬಂಧಿಸಿದ ಎಲ್ಲಾ ಜಿಲ್ಲೆಗಳ ಮಾಹಿತಿಯನ್ನು ಸರ್ಕಾರದ ಮಟ್ಟದಲ್ಲಿಯೇ ಸಂಗ್ರಹಿಸಲಾಗುತ್ತದೆ. ಈ ಬಾರಿ ಬರ ಪರಿಸ್ಥಿತಿ ಎದುರಾಗಿರುವುದಿಂದ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಕುಡಿಯುವ ನೀರು ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ. ಇದಕ್ಕೆ ಸಂಬಂಧಿಸಿದ ನಿಖರ ಅಂಕಿ ಅಂಶಗಳನ್ನು ಅಧಿಕಾರಿಗಳು ನೀಡಬೇಕು. ಇದರೊಂದಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವ ಇಲಾಖೆಗಳು ಯೋಜನೆಗಳ ಸಂಪೂರ್ಣ ಮಾಹಿತಿ ಒದಗಿಸಬೇಕು. ಬೆಂಗಳೂರಿಗೆ ಮಾಹಿತಿಯನ್ನು ಕಳುಹಿಸುವ ಮುನ್ನ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದು ಸೂಚಿಸಿದರು.

ಒಂದು ದಿನ ಮುಂಚಿತವಾಗಿ ಆಗಮಿಸುವ ಸಚಿವರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳಿಗೆ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರ ಹಾಗೂ ನಗರದ ಪ್ರಮುಖ ಹೋಟೆಲ್‍ಗಳಲ್ಲಿ ಕೊಠಡಿಗಳನ್ನು ಕಾಯ್ದಿರಿಸಬೇಕು. ಎಲ್ಲಾ ಇಲಾಖೆ ಅಧಿಕಾರಿಗಳು ಮುಂಚಿತವಾಗಿಯೇ ಬೆಂಗಳೂರಿನ ಕೇಂದ್ರ ಕಚೇರಿಗಳಿಂದ ಆಗಮಿಸುವ ಹಿರಿಯ ಅಧಿಕಾರಿಗಳ ಮಾಹಿತಿ ಪಡೆದು ಜಿಲ್ಲಾಡಳಿತಕ್ಕೆ ನೀಡುವಂತೆ ತಿಳಿಸಿದರು.

ಜಿಪಂ ಸಿಇಓ ಡಾ.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಪಂ ಸಿಪಿಓ ಗಾಯತ್ರಿ, ತೋಟಗಾರಿಕೆ ಜಂಟಿ ನಿರ್ದೇಶಕಿ ಸವಿತಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಎಂ.ಜೆ.ಮಹೇಶ್, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ.ತಿಪ್ಪೇಸ್ವಾಮಿ, ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.---------ಪೋಟೋ ಕ್ಯಾಪ್ಸನ್ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನೆ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಮಾತನಾಡಿದರು.-----------ಫೋಟೋ ಫೈಲ್ ನೇಮ್-18 ಸಿಟಿಡಿ5

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಂಗಾಡಿ- ಕದಿರೇನಹಳ್ಳಿ ಭೂ ವಿವಾದದಲ್ಲಿ ದಲಿತ ಕುಟುಂಬಗಳಿಗೆ ನ್ಯಾಯ ಒದಗಿಸಲು ಆಗ್ರಹ
ನೀಟ್‌ನಲ್ಲೂ ಮುಂದುವರಿದ ಎಸ್.ಆರ್.ಎಸ್ ನಾಗಾಲೋಟ