ಅಣ್ಣಿಗೇರಿ:
ಸಾಹೀರಾಬಾನು ಧಾರವಾಡ (55), ಅವರ ಪುತ್ರರಾದ ಅಬ್ಬಾಸ್ ಅಲಿ ಧಾರವಾಡ (29) ಹಾಗೂ ಹಸನಸಾಬ್ ಧಾರವಾಡ (27) ತೀವ್ರವಾಗಿ ಗಾಯಗೊಂಡಿದ್ದಾರೆ.
ಶುಕ್ರವಾರ ರಾತ್ರಿ ಸಿಲಿಂಡರ್ ಸೋರಿಕೆ ಆಗಿದೆ. ಎಂದಿನಂತೆ ಬೆಳಗ್ಗೆ ಎದ್ದು ಲೈಟ್ ಹಚ್ಚುತ್ತಿದ್ದಂತೆ ಮನೆಯಲ್ಲಿ ಬೆಂಕಿ ಆವರಿಸಿ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಮನೆಯೊಳಗಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮನೆಯಲ್ಲಿ ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿದೆ. ಮಕ್ಕಳ ಮದುವೆಗೆ ಖರೀದಿಸಿದ್ದ ಬಟ್ಟೆ, ಮದುವೆ ಸಾಮಗ್ರಿ ಬೆಂಕಿಗೆ ಆಹುತಿಯಾಗಿವೆ. ಈ ಘಟನೆಯಿಂದ ನೆರೆಹೊರೆಯ ಮನೆಗಳಿಗೆ ಹಾನಿಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸ್ಥಳಕ್ಕೆ ಎಸ್ಪಿ ಗುಂಜನ್ ಆರ್ಯ, ಪಿಎಸ್‌ಐ ಉಮಾದೇವಿ ಹಾಗೂ ತಹಸೀಲ್ದಾರ್ ಮಂಜುನಾಥ ದಾಸಪ್ಪನವರ, ಮುಖ್ಯಾಧಿಕಾರಿ ವೈ.ಜಿ. ಗದ್ದಿಗೌಡರ ಭೇಟಿ ನೀಡಿ ಪರಿಶೀಲಿಸಿದರು.