ಕನ್ನಡಪ್ರಭ ವಾರ್ತೆ ಮೈಸೂರು
ಸೈಕಲ್ ನಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಇರಿಸಿಕೊಂಡು ಬಲೂನ್ ಮಾರುತ್ತಿದ್ದ ವ್ಯಕ್ತಿ ಸ್ಫೋಟದ ತೀವ್ರತೆಗೆ ದೇಹ ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಇನ್ನೂ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ ಎಂಬವರ ಸ್ಥಿತಿ ಗಂಭೀರವಾಗಿದೆ. ನಂಜನಗೂಡು ಮೂಲದ ಮಂಜುಳಾ, ಕೊಲ್ಕತ್ತಾ ಮೂಲದ ಶಾಹಿನಾ ಶಬ್ಬೀರ್ ಹಾಗೂ ರಾಣೆಬೆನ್ನೂರು ಮೂಲದ ಕೊಟ್ರೇಶಿ ಎಂಬವರು ಗಾಯಗೊಂಡಿದ್ದು, ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ.ಕ್ರಿಸ್ಮಸ್ ಮತ್ತು ವರ್ಷಾಂತ್ಯ ಅಂಗವಾಗಿ ಮೈಸೂರು ಅರಮನೆಯಲ್ಲಿ ಮಾಗಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು. ಪ್ರ್ವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಅರಮನೆ ಹೊರ ಭಾಗದಲ್ಲಿ ಹೀಲಿಯಂ ಬಲೂನ್ ಮಾರುವಾತ ಸೈಕಲ್ ನಲ್ಲಿ ಗ್ಯಾಸ್ ಸಿಲಿಂಡರ್ ಇರಿಸಿಕೊಂಡು ಬಲೂನ್ ಗಳಿಗೆ ತುಂಬುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಗ್ಯಾಸ್ ತುಂಬುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿಗಳಾದ ಆರ್.ಎನ್. ಬಿಂದುಮಣಿ, ಕೆ.ಎಸ್. ಸುಂದರ್ ರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.----
ಕೋಟ್...ಮೈಸೂರು ಅರಮನೆ ಜಯಮಾರ್ತಾಂಡ ಗೇಟ್ ಮುಂಭಾಗದ ರಸ್ತೆಯಲ್ಲಿ ಬಲೂನ್ ಗೆ ಹೀಲಿಯಂ ಗ್ಯಾಸ್ ತುಂಬುವಾಗ ಸಿಲಿಂಡರ್ ಸ್ಫೋಟವಾಗಿ ಬಲೂನ್ ಮಾರುತ್ತಿದ್ದ ಓರ್ವ ಮೃತಪಟ್ಟಿದ್ದು, ನಾಲ್ವರಿಗೆ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ.
- ಸೀಮಾ ಲಾಟ್ಕರ್, ನಗರ ಪೊಲೀಸ್ ಆಯುಕ್ತೆ, ಮೈಸೂರು