ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಕೂಡಲೇ ನಿಲ್ಲಿಸಿ

KannadaprabhaNewsNetwork |  
Published : May 28, 2025, 11:46 PM IST
ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಕೂಡಲೇ ನಿಲ್ಲಿಸಿ | Kannada Prabha

ಸಾರಾಂಶ

ಮೇ 31ರ ಪ್ರತಿಭಟನೆಯಲ್ಲಿ ತುಮಕೂರು ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ಸಕ್ರಿಯವಾಗಿ ಪಾಲ್ಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತುಮಕೂರು ತಾಲೂಕು ಅಧ್ಯಕ್ಷ ಚಿಕ್ಕಬೋರೇಗೌಡ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ, ತುಮಕೂರುಪೊಲೀಸ್ ಬೆಂಗಾವಲಿನಲ್ಲಿ ನಡೆಯುತ್ತಿರುವ ಹೇಮಾವತಿ ಎಕ್ಸ್ ಪ್ರೆಸ್‌ ಕೆನಾಲ್‌ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ ಹೇಮಾವತಿ ಎಕ್ಸ್ ಪ್ರೆಸ್ ಪೈಪ್‌ಲೈನ್ ಲಿಂಕ್‌ ಕೆನಾಲ್ ವಿರೋಧಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ಮೇ 31ರ ಪ್ರತಿಭಟನೆಯಲ್ಲಿ ತುಮಕೂರು ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ಸಕ್ರಿಯವಾಗಿ ಪಾಲ್ಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತುಮಕೂರು ತಾಲೂಕು ಅಧ್ಯಕ್ಷ ಚಿಕ್ಕಬೋರೇಗೌಡ ತಿಳಿಸಿದ್ದಾರೆ.ಹೆಬ್ಬೂರಿನ ಪುಟ್ಟಣ್ಣಯ್ಯ ರೈತಭವನದಲ್ಲಿ ಆಯೋಜಿಸಿದ್ದ ರಾಜ್ಯರೈತ ಸಂಘದ ಪದಾಧಿಕಾರಿಗಳು, ಸದಸ್ಯರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಳೆದ ಒಂದು ವರ್ಷಗಳಿಂದ ಎಕ್ಸ್ ಪ್ರೆಸ್ ಕೆನಾಲ್ ವಿರೋಧಿಸಿ, ರೈತ ಸಂಘ, ರೈತರು, ಜನಪ್ರತಿನಿಧಿಗಳು ಹೋರಾಟ ನಡೆಸುತ್ತಾ ಬಂದಿದ್ದರೂ ಸಹ ಸರಕಾರ ಗಮನ ಕೊಟ್ಟಿಲ್ಲ. ರೈತರು, ನಾಗರಿಕರ ಪ್ರತಿಭಟನೆಗೆ ಮಣಿದು ರಚಿಸಿದ್ದ ತಾಂತ್ರಿಕ ಸಮಿತಿಯ ವರದಿಯನ್ನು ಸಹ ಬಹಿರಂಗ ಪಡಿಸಿಲ್ಲ.ಇದರ ಹಿಂದೆ ಷಡ್ಯಂತ್ರ ವಿದೆ ಎಂಬ ಅನುಮಾನ ದಟ್ಟವಾಗುತ್ತಿದೆ. ಹಾಗಾಗಿ ಮೇ 31 ರಂದು ರೈತರು, ಕಾರ್ಮಿಕರು, ನಾಗರಿಕರು, ಜನಪ್ರತಿನಿಧಿಗಳು ಆಯೋಜಿಸಿರುವ ಬೃಹತ್ ಪ್ರತಿಭಟನಾ ಚಳವಳಿಯಲ್ಲಿ ಭಾಗವಹಿಸಿ, ಸರಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಾಗುವುದು ಎಂದರು.ತುಮಕೂರು ಜಿಲ್ಲೆಯ ನಾಲ್ಕು ತಾಲೂಕಿಗೆ ಜೀವನಾಡಿ ಹೇಮಾವತಿ ನೀರು ಮಾಗಡಿಯತ್ತ ತೆಗೆದುಕೊಂಡು ಹೋಗಲು ಪ್ರಭಾವಿ ಸಚಿವರ ಹುನ್ನಾರ ರೈತರನ್ನು ಕೆರಳಿಸಿದೆ. ಅವೈಜ್ಞಾನಿಕವಾಗಿ ಪೈಪ್‌ಲೈನ್ ನಿರ್ಮಿಸಿ ನೀರು ಕಳ್ಳತನ ಮಾಡುವ ಬಗ್ಗೆ ಈಗಾಗಲೇ ರೈತರು ಎಚ್ಚರಿಕೆ ನೀಡಿದ್ದರೂ ಕೆಲಸ ಮಾಡಲು ಅಧಿಕಾರಿಗಳು ಬರುತ್ತಿದ್ದಾರೆ. ಮುಂದಿನ ಆಗು ಹೋಗುಗಳಿಗೆ ಅಧಿಕಾರಿಗಳು ಹೊಣೆ ಆಗುತ್ತಾರೆ ಎಂದು ಎಚ್ಚರಿಸಿದರು.ಮುಖ್ಯ ನಾಲೆಯನ್ನು ಅತ್ಯಾಧುನಿಕವಾಗಿ ಮಾರ್ಪಾಡು ಮಾಡಲಾಗಿದೆ. ಕುಣಿಗಲ್ ಗೆ 3 ಟಿಎಂಸಿ ನೀರು ಹಾಗೂ ಮಾಗಡಿಗೆ 66 ಎಂಸಿಟಿಎಫ್ ಮುಖ್ಯ ನಾಲೆಯಲ್ಲಿ ಹರಿಸಿಕೊಳ್ಳಲಿ. ಕಾಂಗ್ರೆಸ್ ಶಾಸಕರು, ಸಚಿವರು ಕೂಡ ತುಟಿ ಬಿಚ್ಚಿಲ್ಲ. ಈ ಮೌನವೇ ಮುಂದಿನ ದಿನಗಳಲ್ಲಿ ಜನರು ತಕ್ಕೆ ಉತ್ತರ ನೀಡಲಿದ್ದಾರೆ ಎಂದು ಚಿಕ್ಕಬೋರೇಗೌಡರು ನುಡಿದರು.ಸಕರಾರ ಈ ಕೂಡಲೇ ಅವೈಜ್ಞಾನಿಕ ಹಾಗೂ ಜಿಲ್ಲೆಗೆ ಮಾರಕವಾಗುವ ಎಕ್ಸ್ ಪ್ರೆಸ್ ಲಿಂಕ್‌ ಕೆನಾಲ್ ಕಾಮಗಾರಿಯನ್ನು ನಿಲ್ಲಿಸಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಈ ಬೃಹತ್ ಪ್ರತಿಭಟನೆಯಲ್ಲಿ ತಾಲೂಕಿನ ಸಮಸ್ತ ರೈತ ಬಾಂಧವರು, ಎಲ್ಲಾ ಮಠಾಧಿಪತಿಗಳು, ನಾಗರೀಕರು, ಎಲ್ಲಾ ರಾಜಕೀಯ ಮುಖಂಡರು, ಎಲ್ಲಾ ರೈತಪರ ಹೋರಾಟ ಸಂಘಟನೆಗಳು, ದಲಿತ ಸಂಘಟನಾ ಸಮಿತಿಗಳು, ಎಲ್ಲಾ ಸಂಘ ಸಂಸ್ಥೆಗಳು, ಮಹಿಳಾ ಸಂಘಟನೆಗಳು, ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.ಸಭೆಯಲ್ಲಿ ಕಾರ್ಯದರ್ಶಿ ತಿಮ್ಮೇಗೌಡ, ಉಪಾಧ್ಯಕ್ಷ ಕೃಷ್ಣಮೂರ್ತಿ, ರಂಗಸ್ವಾಮಯ್ಯ, ರಾಜು, ಸಂಚಾಲಕ ಮಹೇಶ್, ತಾಲೂಕು ಮುಖಂಡರಾದ ಶ್ರೀನಿವಾಸ್, ಸಿದ್ದರಾಜು, ಪುಟ್ಟಸ್ವಾಮಿ, ಸುರೇಶ್, ಈಶಣ್ಣ, ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ