ಪೊಲೀಸರು ಆಂತರಿಕ ಭದ್ರತೆ ಮತ್ತು ಶಾಂತಿ ಸುವ್ಯವಸ್ಥೆಗಾಗಿ ನಿರಂತರವಾಗಿ ಶ್ರಮಿಸುತ್ತಾರೆ. ಈ ಕರ್ತವ್ಯ ನಿರ್ವಹಣೆಯಲ್ಲಿ ಹಲವು ಪೊಲೀಸರು ಪ್ರಾಣತ್ಯಾಗ ಮಾಡಿದ್ದರೆ, ಇನ್ನು ಹಲವರು ಗಂಭೀರ ಗಾಯಗೊಂಡಿದ್ದಾರೆ. ಹುತಾತ್ಮರ ದಿನ ಆಚರಿಸುವುದರಿಂದ ಆಚರಣೆಯ ಉದ್ದೇಶ ಈಡೇರುವುದಿಲ್ಲ. ಹುತಾತ್ಮರ ಕುಟುಂಬಗಳಿಗೆ ನಾವು ಸೂಕ್ತ ಸಹಕಾರ ನೀಡಬೇಕು. ಪೊಲೀಸ್ ಇಲಾಖೆ ಹುತಾತ್ಮರ ಮತ್ತು ಕರ್ತವ್ಯದಲ್ಲಿ ಗಾಯಗೊಂಡ ಸಿಬ್ಬಂದಿಯ ಕುಟುಂಬದ ಅಗತ್ಯಗಳನ್ನು ಪೂರೈಸಬೇಕು ಎಂದು ದ.ಕ. ಜಿಲ್ಲಾ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಗದೀಶ್ ವಿ.ಎನ್. ಹೇಳಿದರು.
ಮಂಗಳೂರು : ಪೊಲೀಸರು ಆಂತರಿಕ ಭದ್ರತೆ ಮತ್ತು ಶಾಂತಿ ಸುವ್ಯವಸ್ಥೆಗಾಗಿ ನಿರಂತರವಾಗಿ ಶ್ರಮಿಸುತ್ತಾರೆ. ಈ ಕರ್ತವ್ಯ ನಿರ್ವಹಣೆಯಲ್ಲಿ ಹಲವು ಪೊಲೀಸರು ಪ್ರಾಣತ್ಯಾಗ ಮಾಡಿದ್ದರೆ, ಇನ್ನು ಹಲವರು ಗಂಭೀರ ಗಾಯಗೊಂಡಿದ್ದಾರೆ. ಹುತಾತ್ಮರ ದಿನ ಆಚರಿಸುವುದರಿಂದ ಆಚರಣೆಯ ಉದ್ದೇಶ ಈಡೇರುವುದಿಲ್ಲ. ಹುತಾತ್ಮರ ಕುಟುಂಬಗಳಿಗೆ ನಾವು ಸೂಕ್ತ ಸಹಕಾರ ನೀಡಬೇಕು. ಪೊಲೀಸ್ ಇಲಾಖೆ ಹುತಾತ್ಮರ ಮತ್ತು ಕರ್ತವ್ಯದಲ್ಲಿ ಗಾಯಗೊಂಡ ಸಿಬ್ಬಂದಿಯ ಕುಟುಂಬದ ಅಗತ್ಯಗಳನ್ನು ಪೂರೈಸಬೇಕು ಎಂದು ದ.ಕ. ಜಿಲ್ಲಾ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಗದೀಶ್ ವಿ.ಎನ್. ಹೇಳಿದರು.ಮಂಗಳೂರು ನಗರ ಪೊಲೀಸ್ ಕಮಿಷನರೇಟ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಕರ್ನಾಟಕ ರಾಜ್ಯ ಮೀಸಲು ಪೋಲಿಸ್ (ಕೆ.ಎಸ್.ಆರ್.ಪಿ) 7ನೇ ಪಡೆ ಹಾಗೂ ವಿಶೇಷ ಕ್ರಿಯಾ ಪಡೆ ಘಟಕಗಳ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ಬುಧವಾರ ನಡೆದ ಪೊಲೀಸ್ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
2025ರ ಸೆಪ್ಟೆಂಬರ್ನಿಂದ 2026ರ ಆಗಸ್ಟ್ ವರೆಗೆ ದೇಶಾದ್ಯಂತ ಹುತಾತ್ಮರಾದ 154 ಪೋಲಿಸ್ ಸಿಬಂದಿಯ ಹೆಸರುಗಳನ್ನು ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸ್ಯಾಮ್ ವರ್ಗೀಸ್ ಅವರು ವಾಚಿಸಿದರು. ಹುತಾತ್ಮರಿಗೆ ಪಥಸಂಚಲನದ ಮೂಲಕ ಗೌರವ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಪಶ್ಚಿಮ ವಲಯ ಪೊಲೀಸ್ ಉಪ ಮಹಾನಿರೀಕ್ಷಕರು ಆರ್. ಚೇತನ್, ಮಂಗಳೂರು ಮಹಾನಗರ ಪಾಲಿಕೆ ಕಮಿಷನರ್ ರಾಹುಲ್ ರತ್ನಂ ಪಾಂಡೆ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು, ಗಣ್ಯರು ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.