ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

KannadaprabhaNewsNetwork | Published : Dec 18, 2023 2:00 AM

ಸಾರಾಂಶ

ಹಾವೇರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 26ರವರೆಗೆ ಅವಧಿ ವಿಸ್ತರಿಸಲಾಗಿದೆ.ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೂಲ ಜಿಲ್ಲೆಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಮೂಲ ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೇ ಇದ್ದಲ್ಲಿ ಹೊರ ಜಿಲ್ಲೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಕನ್ನಡಪ್ರಭ ವಾರ್ತೆ ಹಾವೇರಿ

ಹಾವೇರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 26ರವರೆಗೆ ಅವಧಿ ವಿಸ್ತರಿಸಲಾಗಿದೆ.

ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೂಲ ಜಿಲ್ಲೆಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಮೂಲ ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ದೊರೆಯದೇ ಇದ್ದಲ್ಲಿ ಹೊರ ಜಿಲ್ಲೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಪಡೆದ ಅಂಕ, ಸಂದರ್ಶನದಲ್ಲಿ ಪಡೆದ ಅಂಕ ಹಾಗೂ ಕಂಪ್ಯೂಟರ್ ಬಳಕೆ ಜ್ಞಾನ ಹಾಗೂ ಕನ್ನಡ ಭಾಷೆ ಬಳಕೆ ಪ್ರಬುದ್ಧತೆ ಆಧಾರದ ಮೇಲೆ ಮೆರಿಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ಮಾಹೆಯಾನ ₹15 ಸಾವಿರ ಸ್ಟೈಫಂಡ್ ನೀಡಲಾಗುವುದು.

ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕರ್ನಾಟಕ ಕಾನೂನಾತ್ಮಕ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. 35 ವರ್ಷದೊಳಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಬೇರೆ ಉದ್ಯೋಗ ಮಾಡುವಂತಿಲ್ಲ. ಇಲಾಖೆಯಲ್ಲಿ ಈ ಹಿಂದೆ ತರಬೇತಿ ಪಡೆದವರು ಪುನಃ ಅರ್ಜಿ ಸಲ್ಲಿಸುವಂತಿಲ್ಲ. ನಿಗದಿತ ಅವಧಿಯ ನಂತರ ಬಂದ ಅರ್ಜಿಯನ್ನು ಮಾನ್ಯ ಮಾಡುವುದಿಲ್ಲ.

ಅರ್ಜಿಯೊಂದಿಗೆ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಕಂಪ್ಯೂಟರ್ ಜ್ಞಾನ ಹೊಂದಿರುವ ಕುರಿತ ಪೂರಕ ದಾಖಲೆಗಳನ್ನು ಲಗತ್ತಿಸಿ ದಿನಾಂಕ 26-12-2023 ರೊಳಗಾಗಿ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ವಿದ್ಯಾನಗರ, ಹಾವೇರಿ ಈ ವಿಳಾಸಕ್ಕೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಾವೇರಿ ಕಚೇರಿ ಸಂಪರ್ಕಿಸಲು ಜಿಲ್ಲಾ ವಾರ್ತಾಧಿಕಾರಿ ಡಾ. ಬಿ.ಆರ್. ರಂಗನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article