ಪಠ್ಯದಷ್ಟೇ, ಪಠ್ಯೇತರವೂ ಚಟುವಟಿಕೆ ಮುಖ್ಯ: ತಮ್ಮಯ್ಯ

KannadaprabhaNewsNetwork |  
Published : Feb 09, 2026, 01:15 AM IST
ಸಸ | Kannada Prabha

ಸಾರಾಂಶ

ಚಿಕ್ಕಮಗಳೂರುಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಅದರಂತೆ ಪಠ್ಯೇತರ ಚಟುವಟಿಕೆಗಳೂ ಅಷ್ಟೇ ಮುಖ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಭಿಪ್ರಾಯ ಪಟ್ಟರು.

ಶ್ರೀ ರೇವಣಸಿದ್ದೇಶ್ವರ ಪ್ರೌಢಶಾಲೆ ಶಾಲಾ ವಾರ್ಷಿಕೋ ತ್ಸವ ಮತ್ತು ಶಾರದಾ ಪೂಜೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಅದರಂತೆ ಪಠ್ಯೇತರ ಚಟುವಟಿಕೆಗಳೂ ಅಷ್ಟೇ ಮುಖ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಭಿಪ್ರಾಯ ಪಟ್ಟರು.

ನಿಡಘಟ್ಟದ ಶ್ರೀ ರೇವಣಸಿದ್ದೇಶ್ವರ ಪ್ರೌಢಶಾಲೆ ಶಾಲಾ ವಾರ್ಷಿಕೋ ತ್ಸವ ಮತ್ತು ಶಾರದಾ ಪೂಜೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಅನಾವರಣಕ್ಕೆ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಮೂಲಕ ಸರ್ವಾಂಗೀಣ ಬೆಳವಣಿಗೆಗೆ ಶಾಲಾ ವಾರ್ಷಿಕೋತ್ಸವ ಅತಿ ಮುಖ್ಯವಾಗಿದೆ ಎಂದು ಹೇಳಿದರು.ಮಕ್ಕಳು ಹೆಚ್ಚಿನ ಸಮಯವನ್ನು ಶಿಕ್ಷಕರೊಂದಿಗೆ ಶಾಲೆಯಲ್ಲಿ ಕಳೆಯುತ್ತಾರೆ. ಅವರ ಮೇಲೆ ಶಿಕ್ಷಕರೇ ಹೆಚ್ಚು ಪ್ರಭಾವ ಬೀರುವುದರಿಂದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ವಿದ್ಯಾರ್ಥಿಗಳಲ್ಲಿ ವಚನ ಪಠಣದ ಮೂಲಕ ಆಧ್ಯಾತ್ಮಿಕ, ನೈತಿಕ ಹಾಗೂ ಮಾನವೀಯ ಮೌಲ್ಯ ಬೆಳೆಯುವಂತೆ ಶಿಕ್ಷಕರು ಮಾಡಬೇಕು. ಬಾಲ್ಯದಿಂದಲೇ ಸಂಸ್ಕಾರ ಶಿಕ್ಷಣ ಬೋಧಿಸಿದರೆ ಸಮಾಜಕ್ಕೆ ಮಾದರಿ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ ಎಂದು ಹೇಳಿದರು. ಶಾಲೆ ಸಲಹಾ ಸಮಿತಿ ಸದಸ್ಯ ದಿನೇಶ್ ಮಾತನಾಡಿ, ವಿದ್ಯಾದೇವಿ ಶಾರದೆಯನ್ನು ಪ್ರತಿಯೊಬ್ಬ ವಿದ್ಯಾರ್ಥಿ ಆರಾಧಿಸಬೇಕು. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಮೊದಲು ಶಾರದಾಂಬೆ ಆರ್ಶೀವಾದಬೇಕು. ಹೀಗಾಗಿ ಶಾಲೆಯಲ್ಲಿ ಶಾರದಾ ಪೂಜೆ ಹಮ್ಮಿಕೊಂಡು ಮಕ್ಕಳಿಗೆ ಜ್ಞಾನ ಸಂಪತ್ತು ತುಂಬುತ್ತಿದೆ ಎಂದರು.

ದಾನಿ ಗೀತಾ ತಿರುಮಲೇಗೌಡ ಮಾತನಾಡಿ, ಹಿಂದಿನ ಕಾಲದಲ್ಲಿ ಮಕ್ಕಳಿಗೆ ಶಿಕ್ಷಣ ಎಂಬುದು ಮರೀಚಿಕೆಯಾಗಿತ್ತು. ಆ ನಂತರ ಹಲವಾರು ಬಸವಾದಿ ಶರಣರು ಯಾವುದೇ ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದೆಂದು ಶಾಲೆ ತೆರೆದು ಮಕ್ಕಳಿಗೆ ಬೋಧನೆಗೆ ಅವಕಾಶ ಮಾಡಿಕೊಟ್ಟಿರುವುದು ಮರೆಯುವಂತಿಲ್ಲ ಎಂದು ಹೇಳಿದರು.

ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮರುಳಸಿದ್ದಪ್ಪ ಮಾತನಾಡಿ, 1972ರಲ್ಲಿ ಚಿತ್ರದುರ್ಗದ ತರಳುಬಾಳು ವಿದ್ಯಾಸಂಸ್ಥೆ ನಿಡಘಟ್ಟ ಗ್ರಾಮದಲ್ಲಿ ಪ್ರೌಢಶಾಲೆ ಆರಂಭಿಸಿ ಹಳ್ಳಿ ಮಕ್ಕಳಿಗೆ ವಿದ್ಯಾದಾನ ಮಾಡಿದ್ದಾರೆ. ಇಲ್ಲಿ ಕಲಿತ ಅನೇಕರು ಸಮಾಜದ ಮುನ್ನೆಲೆಗೆ ಬಂದು ವಿವಿಧ ಸ್ಥರಗಳಲ್ಲಿ ಹೆಸರು ಮಾಡಿದ್ದಾರೆ ಎಂದರು.ಈ ವೇಳೆ ಕ್ಷೇತ್ರ ಶಿಕ್ಷ ಣಾಧಿಕಾರಿ ಬಿ. ಚೋಪ್ದಾರ್, ಮುಖ್ಯ ಶಿಕ್ಷಕ ಟಿ.ಇ. ಕೃಷ್ಣಮೂರ್ತಿ, ವಲಯ ಪ್ರಾದೇಶಿಕ ಅಧಿಕಾರಿ ಡಿ.ಜಿ. ಪ್ರಕಾಶ್, ಡಯಟ್‌ನ ಮೇಘರಾಜ್ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಸವಿತಾ ಶಿವಪ್ಪ, ಮಾಜಿ ಅಧ್ಯಕ್ಷ ಶಂಕರಮೂರ್ತಿ, ಸ್ಥಳೀಯ ಸಲಹಾ ಸಮಿತಿ ಸದಸ್ಯರಾದ ಮಲ್ಲಿಕಾರ್ಜುನ್, ದಿನೇಶ್, ಯೋಗೀಶ್, ಹೇಮರಾಜು, ಹೊನ್ನೇಶಪ್ಪ, ವಸಂತಪ್ಪ, ಬಸವರಾಜಯ್ಯ, ಅರುಣ್ ಕುಮಾರ್, ಸಂತೋಷ್, ಚನ್ನ ಬಸಪ್ಪ, ಮಂಜುನಾಥ್, ಹನುಮಂತಪ್ಪ, ಮುಖಂಡ ಅರುಣ್ ಉಪಸ್ಥಿತರಿದ್ದರು. - ಫೋಟೋ

ನಿಡಘಟ್ಟದ ಶ್ರೀ ರೇವಣಸಿದ್ದೇಶ್ವರ ಪ್ರೌಢಶಾಲೆ ವಾರ್ಷಿಕೋ ತ್ಸವ ಮತ್ತು ಶಾರದಾ ಪೂಜೆಯನ್ನು ಶಾಸಕ ಎಚ್.ಡಿ. ತಮ್ಮಯ್ಯ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮರುಳಸಿದ್ದಪ್ಪ, ಸಲಹಾ ಸಮಿತಿ ಸದಸ್ಯ ದಿನೇಶ್ ಸೇರಿದಂತೆ ಮೊದಲಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಜಾಹೀರಾತಲ್ಲಿ ಗಾಂಧೀಜಿ ಬಳಕೆ ಗಾಂಧೀಜಿಯರ ಮೌಲ್ಯಗಳ ಹತ್ಯೆ’
ಅರೈ ಘಟಕಕ್ಕಾಗಿ ಮಂಡ್ಯದಲ್ಲೇ 100 ಎಕ್ರೆ ಕೊಡಿ: ಎಚ್‌ಡಿಕೆ ಪತ್ರ