ಕುಶಾಲನಗರ : ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ನೃತ್ಯ, ಸಂಗೀತ ಸೇರಿದಂತೆ ಇನ್ನಿತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಸರ್ವತೋಮುಖ ಬೆಳವಣಿಗೆ ಹೊಂದಬೇಕು ಎಂದು ನಿವೃತ್ತ ಪ್ರಾಂಶುಪಾಲ ಡಾ. ದೇವರಾಜು ಸಲಹೆ ನೀಡಿದರು.
ವಿವೇಕಾನಂದ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ,ವಿ ಶೈಕ್ಷಣಿಕ ಸಾಧನೆಯೊಂದಿಗೆ ಇತರೆ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಏನಾದರೂ ಸಾಧಿಸುವ ಛಲ ಹೊಂದಬೇಕು. ವಿದ್ಯಾರ್ಥಿ ಜೀವನವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕ್ಲಾರ ರೇಷ್ಮ, ಎಂಜಿಎಂ ಪದವಿ ಕಾಲೇಜಿನ ಪ್ರಾಂಶುಪಾಲೆ ಟಿ.ಎ.ಲಿಖಿತಾ , ಉಪನ್ಯಾಸಕ, ಸಿಬ್ಬಂದಿ ವರ್ಗ ಹಾಗೂ ಪೋಷಕರು ಪಾಲ್ಗೊಂಡಿದ್ದರು.