ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ
ಪಠ್ಯಚಟುವಟಿಕೆಗಳ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೆ ಪಠ್ಯೇತರ ಚಟುವಟಿಕೆಗಳು ಮುಖ್ಯ. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶ್ರೀ ರಾಮಕೃಷ್ಣ ಆಂಗ್ಲಮಾದ್ಯಮ ಪ್ರೌಢಶಾಲೆ ಹಾಗೂ ಬಿಆರ್ ವಿ ಶಾಲೆ ಆಡಳಿತ ಮಂಡಳಿಯ ಎಚ್.ಎಲ್.ತ್ಯಾಗರಾಜ್ ಸಲಹೆ ನೀಡಿದರು.
ಪಟ್ಟಣದ ಶ್ರೀ ರಾಮಕೃಷ್ಣ ಆಂಗ್ಲಮಾದ್ಯಮ ಹಾಗೂ ಬಿಆರ್ ವಿ ಶಾಲಾವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೆಮ್ಮಾರಿನಲ್ಲಿ ನಡೆದಿದ್ದ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ಕ್ರೀಡಾ ಪಟುಗಳಿಗೆ ಅಭಿನಂದಿಸಿ ಮಾತನಾಡಿದರು. ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ದಾರಿ. ವ್ಯಾಸಾಂಗದ ಜೊತೆಗೆ ಕ್ರೀಡೆ, ಸಾಂಸ್ಕೃ ತಿಕ ಚಟುವಟಿಕೆಗಳ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು.ಶಾಲಾ ಮುಖ್ಯ ಶಿಕ್ಷಕ ಮಹೇಶ್ವರಪ್ಪ ಮಾತನಾಡಿ ಕ್ರೀಡಾಕೂಟದಲ್ಲಿ ಶಾಲೆ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಿದ್ದು, ಕಬ್ಬಡ್ಡಿಯಲ್ಲಿ ಬಾಲಕರ ವಿಭಾಗ, ಬಾಲಕಿಯರ ವಿಭಾಗದಲ್ಲಿ ಪ್ರಥಮ, ಥ್ರೋಬಾಲ್ ನಲ್ಲಿ ಬಾಲಕರ, ಬಾಲಕರ,ಬಾಲಕಿಯರ ವಿಭಾಗದಲ್ಲಿ ಪ್ರಥಮ, ವಾಲಿಬಾಲ್ ಬಾಲಕರ ವಿಭಾಗದಲ್ಲಿ ಪ್ರಥಮ, ರಿಲೆಯಲ್ಲಿ ಬಾಲಕರ,ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದೆ ಎಂದರು.
24 ಶ್ರೀ ಚಿತ್ರ 1-