ಮೂಡುಬಿದಿರೆ: ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸುವುದು ಅಗತ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ಹುಟ್ಟುಹಬ್ಬವನ್ನು ಗಿಡ ನೆಡುವ ಮೂಲಕ ಆಚರಿಸಬೇಕು ಎಂದು ಮೂಡುಬಿದಿರೆ ಉಪವಲಯ ಅರಣ್ಯಾಧಿಕಾರಿ ಗುರುಮೂರ್ತಿ ಹೇಳಿದರು. ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಸ್ವಯಂ ನಂಬಿಕೆ, ಅವಕಾಶಗಳ ಸದುಪಯೋಗ ಸಾಧನೆಗೆ ದಾರಿ ಎಂದು ಮೂಡುಬಿದಿರೆ ಸ್ಕೈ ಪೇಂಟ್ಸ್ ಮಾಲೀಕ ಶೈಲೇಂದ್ರ ಕುಮಾರ್ ಜೈನ್ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ , ಹಿರಿಯರಿಗೆ ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಗುರುತಿಸಿಕೊಂಡು ಬೆಳೆಸಿಕೊಳ್ಳಬೇಕು ಎನ್ನುತ ಬಹುಮಾನಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ತಿಳಿಸಿದರು. ದೀಪ ಪ್ರಜ್ವಲಿಸುವ ಮೂಲಕ ಅತಿಥಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮವನ್ನು ಶಿಕ್ಷಕಿ ಸ್ವಾತಿ ನಿರೂಪಿಸಿದರು. ಪ್ರಾಂಶುಪಾಲ ಪ್ರಸಾದ್ ಸ್ವಾಗತಿಸಿದರು. ಶಿಕ್ಷಕಿ ಸ್ವಾತಿ ವಂದಿಸಿದರು.