ಪಠ್ಯೇತರ ಚಟುವಟಿಕೆಗಳು ಅತಿ ಮುಖ್ಯ: ಮೋನಾರೋತ್

KannadaprabhaNewsNetwork | Published : May 7, 2025 12:49 AM
Follow Us

ಸಾರಾಂಶ

ಚಾಮರಾಜನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಸಾಂಸ್ಕೃತಿಕ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಹಬ್ಬ ಸಮಾರಂಭವನ್ನು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಮೋನಾ ರೋತ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅತಿ ಮುಖ್ಯ ಎಂದು ಜಿಪಂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಮೋನಾ ರೋತ್ ಹೇಳಿದರು.ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಸಾಂಸ್ಕೃತಿಕ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಹಬ್ಬ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಕಾಲೇಜಿನ ಸಾಂಸ್ಕೃತಿಕ ಸಮಿತಿ ವತಿಯಿಂದ ಆಹಾರ ಮೇಳ, ಪರಂಪರೆಗಳ ವಸ್ತುಗಳ ಸಂಗ್ರಹ ಸೇರಿದಂತೆ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಿರುವುದು ಸುಪ್ತ ಪ್ರತಿಭೆಯನ್ನು ಹೊರ ಸೂಸಲು ಉತ್ತ ವೇದಿಕೆಯಾಗಿದೆ ಎಂದರು.

ಮೊದಲು ಶೈಕ್ಷಣಿಕ ಕೇತ್ರದಲ್ಲಿ ಮಾತ್ರ ಅವಕಾಶವಿತ್ತು, ಈಗ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಸಾಂಸ್ಕೃತಿಕ, ಕಲೆ ಕ್ಷೇತ್ರಗಳಲ್ಲೂ ಉನ್ನತ ಅವಕಾಶಗಳಿವೆ, ಇಂತಹ ಸಾಂಸ್ಕೃತಿಕ ವೇದಿಕೆಗಳ ಮೂಲಕ ತಮ್ಮ ಪ್ರತಿಭೆಗಳನ್ನುಸ ಹೊರ ಸೂಸುವ ಮೂಲಕ ಉತ್ತಮ ಅವಕಾಶಗಳನ್ನು ಪಡೆದುಕೊಳ್ಳಿ ಎಂದು ಶುಭ ಹಾರ್‍ಯಸಿದರು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಚಾಮರಾಜನಗರ ವಿಶ್ವವಿದ್ಯಾನಿಲಯ ಕುಲಪತಿ ಡಾ.ಎಂ.ಆರ್.ಗಂಗಾಧರ್ ಮಾತನಾಡಿ, ಜೆಎಸ್‌ಎಸ್ ಸಂಸ್ಥೆ ಶೈಕ್ಷಣಿಕ ಬೆಳವಣಿಗೆ ಜೊತೆ ಸಾಂಸ್ಕೃತಿಕ ಬೆಳವಣಿಗೆಯನ್ನು ಪ್ರೋತ್ಸಾಹಿಸುವ ಕೇಂದ್ರವಾಗಿದೆ ಎಂದರು. ಸಾಂಸ್ಕೃತಿಕ ವೇದಿಕೆ ಸುಪ್ತ ಪ್ರತಿಭೆಯನ್ನು ಹೊರ ಸೂಸಲು ಒಂದು ಉತ್ತಮ ವೇದಿಕೆ, ಸಾಂಸ್ಕೃತಿಕ ಚಟುವಟಿಕೆಗಳು ಒಂದು ಗೂಡಿಸುವ ಸಮಾನತೆಯನ್ನು ಸಾರುತ್ತವೆ, ವಿವಿಧ ಸಂಸ್ಕೃತಿ ಪರಂಪರೆಗಳು ಒಂದುಗೂಡಿದಾಗ ಮಾನವೀಯ ಮೌಲ್ಯಗಳ ಜೊತೆಗೆ ಅದು ಸಮಾನತೆ ಹಾಗೂ ಏಕತೆಯನ್ನು ಸಾರುತ್ತದೆ ಎಂದರು. ಸಾಂಸ್ಕೃತಿಕ ಚಟುವಟಿಕೆಗಳನ್ನು ಪೋಷಕರು ಸಹ ಪ್ರೋತ್ಸಾಹಿಸುವುದರ ಜೊತೆಗೆ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸಬೇಕಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಸಚಿವ ಆರ್.ಲೋಕನಾಥ್ ಮಾತನಾಡಿ, ವಿದ್ಯಾಭ್ಯಾಸದ ಜೊತೆಗೆ ಕ್ರಿಯಾಶೀಲತೆಯ ಚಟುವಟಿಕೆಗಳು ಮುಖ್ಯ ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಂಶುಪಾಲ ಡಾ.ಎನ್ ಮಹದೇವಸ್ವಾಮಿ ೫೮ ವರ್ಷಗಳ ಕಾಲೇಜಿನ ಇತಿಹಾಸದಲ್ಲಿ ವಿದ್ಯಾಭ್ಯಾಸ ಮಾಡಿದ ಹಲವರು ದೇಶ ವಿದೇಶಗಳಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ ಎಂದರು. ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಸಾಂಸ್ಕೃತಿಕ ಹಬ್ಬ ಆಯೋಜಿಲಸಾಗಿದೆ, ವಿಭಿನ್ಯ ಕೌಶಲ್ಯಗಳು, ಸದೃಢ ವ್ಯಕ್ತಿತ್ವನ್ನು ಕಲಿಸುವ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗಿದೆ ಎಂದರು. ಸಮಾರಂಭದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದೇವರಾಜಮೂರ್ತಿ, ಸಾಂಸ್ಕೃತಿಕ ಸಮಿತಿ ಸಂಚಾಲಕಿ ಜಮುನಾ ಇದ್ದರು.