ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಖಾಸಗಿ ಶಾಲಾ ಮಕ್ಕಳಿಗಿಂತ ಬುದ್ಧಿವಂತರಿದ್ದಾರೆ. ತಮ್ಮೊಳಗೆ ಅಡಗಿರುವ ಸುಪ್ತ ಪ್ರತಿಭೆ ಹೊರ ಹಾಕುವ ಮೂಲಕ ಅಳಿವಿನ ಹಂಚಿಗೆ ಹೋಗುತ್ತಿರುವ ಗ್ರಾಮೀಣ ಸೊಗಡಿನ ರಂಗ ಕಲೆ, ಜಾನಪದ, ಸಾಹಿತ್ಯ ಸಾಂಸ್ಕೃತಿಕ ಚಟುವಟಿಕೆಗಳನ್ನು ಕಾಪಾಡಬಹುದು ಎಂದರು.ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೆ.ವೈ.ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಅತ್ಯಗತ್ಯ. ವಿದ್ಯೆ ಕಲಿಯುವ ಜೊತೆಗೆ ಮಕ್ಕಳಿಗೆ ಸಮಾಜಮುಖಿ ಬದುಕನ್ನು ಕಟ್ಟಿಕೊಳ್ಳಲು ಗ್ರಾಮೀಣ ಕಲೆಗಳನ್ನೂ ಸಹ ಕಲಿಯಬೇಕಿದೆ ಎಂದರು.
ಸರ್ಕಾರ ಪ್ರತಿಭಾ ಕಾರಂಜಿಯಂತಹ ಸೂಕ್ತ ವೇದಿಕೆ ಕಲ್ಪಿಸಿದ್ದು ಸೋಲು ಗೆಲುವನ್ನು ಲೆಕ್ಕಿಸದೆ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆ ಪ್ರದರ್ಶಿಸುವ ಮೂಲಕ ಮುಂದಿನ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.ನಿವೃತ್ತ ಶಿಕ್ಷಕ ಹಾಗೂ ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಂ.ಪ್ರಕಾಶ್ ಮಾತನಾಡಿ, ನಾಲ್ಕು ಗೋಡೆಗಳ ಮಧ್ಯೆ ಕಲಿಯುವ ವಿದ್ಯೆಯಷ್ಟೇ ಶಿಕ್ಷಣವಲ್ಲ. ಕಲೆ ಸಾಹಿತ್ಯ ಸಂಸ್ಕೃತಿ ನಾಡು ನುಡಿ ಇವೆಲ್ಲವನ್ನು ಕಲಿಯಬೇಕೆಂದರೆ ಹೊರಗಿನ ಶಿಕ್ಷಣವೂ ಮಕ್ಕಳಿಗೆ ಬಹುಮುಖ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಆರ್.ಲೋಕೇಶ್ ಮಾತನಾಡಿ, ಶಾಲಾ ಮತ್ತು ಕ್ಲಸ್ಟರ್ ಹಂತದ ನಂತರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪಾಲ್ಗೊಂಡಿರುವ ಮಕ್ಕಳು ಉತ್ತಮ ಪ್ರದರ್ಶನ ಕೊಟ್ಟು ಜಿಲ್ಲಾ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲೂ ತಾಲೂಕಿನ ಹಿರಿಮೆಯನ್ನು ಹೆಚ್ಚಿಸಬೇಕು ಎಂದು ಶುಭ ಹಾರೈಸಿದರು.ಈ ವೇಳೆ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಮಂಜುನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರುದ್ರೇಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗನ್ನಾಥ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್, ಕಾಲೇಜಿನ ಪ್ರಾಂಶುಪಾಲ ಜಯರಾಮು ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಕೆ.ರವೀಶ್, ಸಾವಿತ್ರಿಬಾಯಿಪುಲೆ ಸಂಘದ ಜಿಲ್ಲಾಧ್ಯಕ್ಷೆ ಸರಸ್ವತಿ, ಶಿಕ್ಷಕರ ವೃಂದ ಸಂಘಗಳ ಪದಾಧಿಕಾರಿಗಳಾದ ರತ್ನಮ್ಮ, ಮಹಮ್ಮದ್ ಜಾಕೀರ್, ಎಂ.ನಾಗೇಶ್, ವಿನಯ್‌ಗೌಡ, ಖರಡ್ಯ ಬಸವೇಗೌಡ, ಶ್ರೀನಿವಾಸ್, ರಾಜಣ್ಣ, ಎಂ.ಎನ್.ಮಂಜುನಾಥ್, ದೇವರಾಜು ಸೇರಿದಂತೆ ಹಲವರು ಇದ್ದರು.