ದೊಡ್ಡಬಳ್ಳಾಪುರ: ಗುಣಮಟ್ಟದ ಶಿಕ್ಷಣಕ್ಕೆ ಸಾಂಸ್ಕೃತಿಕ ಚಿಂತನೆಗಳು ಪೂರಕವಾಗಿದ್ದು, ಶೈಕ್ಷಣಿಕ ವಾತಾವರಣದಲ್ಲಿ ಪಠ್ಯೇತರ ಚಟುವಟಿಕೆಗಳಿಗೂ ಅಗತ್ಯ ಪ್ರೋತ್ಸಾಹ ನಿರೀಕ್ಷಿತ ಎಂದು ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಹೇಳಿದರು.
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ತರಗತಿಗಳಿಗೆ ಬೆಂಗಳೂರಿನ ಕಾಲೇಜುಗಳತ್ತ ಹೋಗುವ ಪರಿಪಾಠ ಬೆಳೆಯುತ್ತಿದೆ. ಗ್ರಾಮೀಣ ಪ್ರದೇಶದಲ್ಲೇ ದೊರೆಯುತ್ತಿರುವ ಉತ್ತಮ ಸವಲತ್ತುಗಳನ್ನು ಅವರು ಸದುಪಯೋಗ ಪಡಿಸಿಕೊಳ್ಳಲು ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕೆ.ಜಿ.ಹನುಮಂತರಾಜು ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಆಡಳಿತಾಧಿಕಾರಿ ಪ್ರೊ.ಕೃಷ್ಣಪ್ಪ, ಶೈಕ್ಷಣಿಕ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ, ಪ್ರಾಂಶುಪಾಲ ನರಸಿಂಹರೆಡ್ಡಿ, ವಿವಿಧ ಶೈಕ್ಷಣಿಕ ಘಟಕಗಳ ಮುಖ್ಯಸ್ಥರಾದ ಮಹಂತೇಶಪ್ಪ, ಧನಂಜಯ್, ಜಿಯಾವುಲ್ಲಾ ಖಾನ್ ಮತ್ತಿತರರು ಭಾಗವಹಿಸಿದ್ದರು.ಇದೇ ವೇಳೆ ವಿವಿಧ ಶೈಕ್ಷಣಿಕ, ಕ್ರೀಡಾ ಹಾಗೂ ಸಹಪಠ್ಯ ಚಟುವಟಿಕೆಗಳಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.