ರೋಣ: ನೇತ್ರಗಳು ನಮ್ಮ ದೇಹದ ಪ್ರಮುಖ ಅಂಗಗಳಾಗಿದ್ದು, ಜೀವಿಯು ತನ್ನ ಸುತ್ತಲಿನ ಪರಿಸರದ ಜೊತೆಗೆ ಸಂಪರ್ಕ ಬೆಳೆಸಲು ನೇತ್ರ ಪ್ರಮುಖ ಸಾಧನವಾಗಿದೆ. ಆದ್ದರಿಂದ ನೇತ್ರ ದಾನ ಮಾಡುವ ಮೂಲಕ ಮಹತ್ತರ ಕಾರ್ಯಕ್ಕೆ ಪ್ರತಿಯೊಬ್ಬರು ಮುಂದಾಗಬೇಕು. ನೇತ್ರ ದಾನ ಅತ್ಯಂತ ಶ್ರೇಷ್ಠವಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಿ ಜನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ. ನುಡಿದಂತೆ ನಡೆಯುವ ಪಕ್ಷವಾಗಿದೆ .ಕಾಂಗ್ರೆಸ್ ದಶಗಳ ಇತಿಹಾಸವಿದ್ದು ಸ್ವಾತಂತ್ರ್ಯ ಪೂರ್ವದಿಂದಲೂ ದೇಶದ ಅಭಿವೃದ್ದಿಗಾಗಿ ಶ್ರಮಿಸುತ್ತಾ ಬಂದಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಹಾಗೂ ರಾಹುಲಗಾಂಧಿ ಅವರು ದೇಶದ ಬಡ ಜನರ ಬಗ್ಗೆ ಅಪಾರವಾದ ಕಾಳಜಿಯನ್ನು ಹೊಂದಿದ್ದು, ಜನರ ಕಷ್ಟ ಕಾಲಕ್ಕೆ ಕಾಂಗ್ರೆಸ್ ಯುವ ರಾಜ ರಾಹುಲಗಾಂಧಿ ಅವರು ಶ್ರಮಿಸುತ್ತ ಬಂದಿದ್ದಾರೆ. ಪಕ್ಷವು ಕೆಳ ಮಟ್ಟದ ಕಾರ್ಯಕರ್ತರಿಗೂ ಸಹ ಬೆಲೆ ನೀಡುತ್ತದೆ ಜನರು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡಿದ್ದಾರೆ ಸಿದ್ದರಾಮಯ್ಯನವರ ಅಭಿವೃದ್ದಿ ಕಾರ್ಯವನ್ನು ಜನ ಕೊಂಡಾಡುತ್ತಿದ್ದಾರೆ. ಬಡವರ ದೀನ ದಲಿತರ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ದಿಯೇ ನಮ್ಮ ಪಕ್ಷದ ಗುರಿ ಎಂದರು.
ಕಾಂಗ್ರೆಸ್ ಯುವ ಮುಖಂಡರಾದ ಮಿಥುನ ಜಿ. ಪಾಟೀಲ, ರಾಜ್ಯ ಯುವ ಕಾಂಗ್ರೆಸ್ ಘಟಕದ ಕಾರ್ಯದರ್ಶಿ ಅಕ್ಷಯ ಪಾಟೀಲ, ಎಚ್.ಎಸ್. ಸೊಂಪೂರ ಮಾತನಾಡಿದರು.ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಬಸಮ್ಮ ಕೊಪ್ಪದ, ವ್ಹಿ.ಆರ್. ಗುಡಿಸಾಗರ, ಪಿ.ಬಿ. ಅಳಗವಾಡಿ, ಮಲ್ಲಯ್ಯ ಮಹಾಪುರುಷಮಠ, ಬಸವರಾಜ ನವಲಗುಂದ, ಪಿಕಾರ್ಡ್ ಬ್ಯಾಂಕ್ ಉಪಾಧ್ಯಕ್ಷ ಯಚ್ಚರಗೌಡ ಗೋವಿಂದಗೌಡ್ರ, ಮುತ್ತು ನವಲಗುಂದ, ಬಸವರಾಜ ಹೊಸಳ್ಳಿ, ಸೋಮು ನಾಗರಾಜ, ಕಾಸೀಂಸಾಬ ಪಿಂಜಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.