ಸುರಕ್ಷಿತವಾಗಿ ವಾಹನ ಚಾಲನೆಗೆ ಕಣ್ಣುಗಳ ಪಾತ್ರ ಮುಖ್ಯ-ಕಟೋಕರ

KannadaprabhaNewsNetwork |  
Published : Dec 02, 2025, 02:45 AM IST
29ಎಚ್‌ವಿಆರ್‌1 | Kannada Prabha

ಸಾರಾಂಶ

2. ಸುರಕ್ಷಿತವಾಗಿ ವಾಹನ ಚಾಲನೆ ಮಾಡಲು ಕಣ್ಣುಗಳ ಪಾತ್ರ ಬಹಳ ಮುಖ್ಯವಾದದ್ದು. ಆದ್ದರಿಂದ ಎಲ್ಲರೂ 40 ವರ್ಷಗಳ ನಂತರ ಕಣ್ಣುಗಳ ತಪಾಸಣೆ ಮಾಡಿಸುವುದು ಮುಖ್ಯವಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯ ಕಟೋಕರ ಹೇಳಿದರು.

ಹಾವೇರಿ: ಸುರಕ್ಷಿತವಾಗಿ ವಾಹನ ಚಾಲನೆ ಮಾಡಲು ಕಣ್ಣುಗಳ ಪಾತ್ರ ಬಹಳ ಮುಖ್ಯವಾದದ್ದು. ಆದ್ದರಿಂದ ಎಲ್ಲರೂ 40 ವರ್ಷಗಳ ನಂತರ ಕಣ್ಣುಗಳ ತಪಾಸಣೆ ಮಾಡಿಸುವುದು ಮುಖ್ಯವಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯ ಕಟೋಕರ ಹೇಳಿದರು.ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಶನಿವಾರ ಸಾರಿಗೆ ಇಲಾಖೆ ಹಾಗೂ ಆರೋಗ್ಯ ಇಲಾಖೆ ಇವರುಗಳ ಸಹಯೋಗದಲ್ಲಿ ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಕುರಿತು ಆಯೋಜಿಸಲಾದ ನೇತ್ರ ತಪಾಸಣಾ ಶಿಬಿರದ ಉದ್ಘಾಟಿಸಿ ಮಾತನಾಡಿದ ಅವರು, ವಾಹನ ಚಾಲನೆ ಸಮಯದಲ್ಲಿ ಕಣ್ಣುಗಳು ಮಹತ್ತರ ಪಾತ್ರ ವಹಿಸುತ್ತವೆ. ಆದ್ದರಿಂದ ಎಲ್ಲರೂ 40 ವರ್ಷಗಳ ನಂತರ ತಮ್ಮ ಕಣ್ಣುಗಳನ್ನು ತಪಾಸಣೆ ಮಾಡಿಸಿಕೊಂಡು ದೃಷ್ಟಿದೋಷ ಇದ್ದಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಅದರಲ್ಲೂ ಎಲ್ಲಾ ವಾಹನಗಳ ಚಾಲಕರುಗಳು ತಮ್ಮ ಕಣ್ಣುಗಳನ್ನು ತಪಾಸಣೆ ಮಾಡಿಸಿಕೊಂಡು ಅವಶ್ಯವಿದ್ದಲ್ಲಿ ಕನ್ನಡಕ ಧರಿಸಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳನ್ನು ಸಹ ತಡೆಯಬಹುದಾಗಿದೆ ಸಾರ್ವಜನಿಕರು ಸದರಿ ಶಿಬಿರದ ಸದುಪಯೋಗಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಶಿಬಿರದಲ್ಲಿ ನೇತ್ರ ತಪಾಸಣಾಧಿಕಾರಿ ರೇಖಾ ಬಿಶೆಟ್ಟಿ ಶಿಬಿರದ ಕುರಿತು ಮಾತನಾಡಿ, ಗ್ಲುಕೊಮಾ, ಕ್ಯಾಟರಾಕ್ಷ, ಮುಂತಾದವುಗಳನ್ನು ನೇತ್ರ ತಪಾಸಣೆಯನ್ನು ಮಾಡಿ ಪತ್ತೆಹೆಚ್ಚಬಹುದಾಗಿದೆ. ಆದ್ದರಿಂದ ಕಣ್ಣಿನ ಸಮಸ್ಯೆ ಇರುವವರು ಅಲಕ್ಷ್ಯ ಮಾಡದೇ ಕಣ್ಣು ತಪಾಸಣೆ ಮಾಡಿಸಿಕೊಳ್ಳಲು ಕರೆ ನೀಡಿದರು. ಇದೇ ಸಂದಭದಲ್ಲಿ ನೇತ್ರ ತಪಾಸಣಾಧಿಕಾರಿಗಳು, ವಾಹನ ಚಾಲಕರುಗಳ ಹಾಗೂ ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿ ರ‍್ಗದವರು ನೇತ್ರ ತಪಾಸಣೆ ಜರುಗಿಸಿದರು.

ಕಾರ‍್ಯಕ್ರಮದಲ್ಲಿ ಮೋಟಾರು ವಾಹನ ನಿರೀಕ್ಷಕ ಸುನೀಲಕುಮಾರ ಎಚ್, ನೇತ್ರಾಧಿಕಾರಿ ಸುನೀಲ್, ಜ್ಯೋತಿ, ನೇತ್ರಾಧಿಕಾರಿ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!