ಕನ್ನಡಪ್ರಭ ವಾರ್ತೆ ಕೋಲಾರಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂ.ಶ್ರೀನಿವಾಸನ್ ವಿವಿಧ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸುವಂತೆ ಕಿವಿಮಾತು ಹೇಳಿದರು. ಕೋಲಾರ ತಾಲೂಕಿನ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಕೆಂಬೋಡಿ ಗ್ರಾಮದ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಸಾರ್ವಜನಿಕ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಸದರಿ ೨೦೨೪-೨೫ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಎದರಿಸುತ್ತಿರುವ ನಿಲಯದ ವಿದ್ಯಾರ್ಥಿಗಳೊಟ್ಟಿಗೆ ಕೆಲ ಹೊತ್ತು ಸಮಾಲೋಚನೆ ನಡೆಸಿದರು.ಪ್ರಶ್ನೆಗೆ ಉತ್ತರಿಸಲು ಸಿದ್ಧರಾಗಿ
ಊಟದ ಗುಣಮಟ್ಟ ಕಾಪಾಡಿ
ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗಾಗಿ ತಯಾರಿಸಿದ್ದ ಉಟೋಪಚಾರವನ್ನು ಪರಿಶೀಲಿಸಿ ವಿವಿಧ ಆಹಾರ ಉತ್ಪನ್ನಗಳನ್ನು ಗುಣಮಟ್ಟವಾಗಿ ಶೇಖರಿಸಿಡಲು ಅನುಸರಿಸಬೇಕಾದ ಕೆಲವು ಸಾಮಾನ್ಯ ಕ್ರಮಗಳ ಕುರಿತು ನಿಲಯದ ಅಡುಗೆ ಸಿಬ್ಬಂದಿಗೆ ಮಾಹಿತಿ ನೀಡಿದರು. ನಂತರ ಬಯೋ ಮೆಟ್ರಿಕ್ ಹಾಜರಾತಿ ಮತ್ತು ಇನ್ನಿತರೆ ರಿಜಿಸ್ಟರ್ ಗಳ ಸಮರ್ಪಕ ನಿರ್ವಹಣೆ ಕುರಿತು ಮಾಹಿತಿ ನೀಡಲಾಯಿತು.