ಸರ್ಕಾರ ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ: ಶಾಸಕ

KannadaprabhaNewsNetwork |  
Published : May 25, 2025, 02:24 AM IST
ಚಿತ್ರಶೀರ್ಷಿಕ24ಎಂಎಲ್ ಕೆ3ಮೊಳಕಾಲ್ಮುರು ತಾಲೂಕಿನ ಹಾನಗಲ್ ಪ್ರವಾಸಿ ಮಂದಿರದಲ್ಲಿ  ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪಂಪು ಮೋಟಾರ್ ಹಾಗು ಪೂರಕ ಸಾಮಾಗ್ರಿಗಳನ್ನು  ಶಾಸಕ ಎನ್.ವೈ.ಗೋಪಾಲಕೃಷ್ಣ ವಿತರಿಸಿದರು.  | Kannada Prabha

ಸಾರಾಂಶ

ಮೊಳಕಾಲ್ಮುರು: ಬಡ ಜನರ ಕಲ್ಯಾಣಕ್ಕಾಗಿ ಸರ್ಕಾರ ನೀಡುವ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.

ಮೊಳಕಾಲ್ಮುರು: ಬಡ ಜನರ ಕಲ್ಯಾಣಕ್ಕಾಗಿ ಸರ್ಕಾರ ನೀಡುವ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.ತಾಲೂಕಿನ ಹಾನಗಲ್ ಗ್ರಾಮದ ಪ್ರವಾಸಿ ಮಂದಿರದ ಆವರಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪಂಪು ಮೋಟಾರ್ ಹಾಗೂ ಪೂರಕ ಸಾಮಾಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು.ರೈತರ ಸಬಲತೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಅದರಲ್ಲಿ ಗಂಗಾ ಕಲ್ಯಾಣ ಯೋಜನೆ ಮಹತ್ವದ್ದಾಗಿದೆ. ರೈತರು ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸರ್ಕಾರ ಉಚಿತವಾಗಿ ಪಂಪು ಮೋಟಾರ್ ನೀಡುತ್ತಿದೆ. ಅವುಗಳನ್ನು ಉತ್ತಮವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.ಇದೇ ವೇಳೆ ಕ್ಷೇತ್ರ ವ್ಯಾಪ್ತಿಯ 20 ಫಲಾನುಭವಿಗಳಿಗೆ ಪಂಪು ಮೋಟಾರ್ ಹಾಗೂ ಪೂರಕ ಸಾಮಾಗ್ರಿಗಳನ್ನು ವಿತರಿಸಿದರು.ಈ ಸಂದರ್ಭದಲ್ಲಿ ಪರಿಶಿಷ್ಟ ಪಂಗಡ ಇಲಾಖೆಯ ಗೌತಮ್, ಶ್ರೀಕಾಂತ್, ಭರತ್ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಪ್ರಕಾಶ, ಉಜ್ಜಿನಪ್ಪ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ