ಕಾರ್ಖಾನೆಗಳು ಕಬ್ಬಿನ ದರ ನಿಗದಿಪಡಿಸಿ ಘೋಷಿಸಿ

KannadaprabhaNewsNetwork |  
Published : Nov 05, 2025, 03:30 AM IST
ಸಕ್ಕರೆ ಕಾರ್ಖಾನೆಗಳು ದರ ನಿಗದಿಮಾಡಿ ಘೋಷಿಸಿ ಕಾರ್ಖಾನೆ ಆರಂಭಕ್ಕೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿರುವ ಕಬ್ಬು ನುರಿಸುವ ಸಕ್ಕರೆ ಕಾರ್ಖಾನೆಗಳು ಎರಡು ದಿನಗಳಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಸಾಗಾಣಿಕೆ ಮತ್ತು ಕಟಾವು ದರವನ್ನು ಹೊರತುಪಡಿಸಿ ರೈತರಿಗೆ ಪಾವತಿಸಬೇಕಾಗುವ ದರವನ್ನು ನಿಗದಿ ಮಾಡಿ ಘೋಷಿಸಿ ಸಕ್ಕರೆ ಕಾರ್ಖಾನೆ ಆರಂಭಿಸಲು ಕ್ರಮಕೈಗೊಳ್ಳುವಂತೆ ಮಾಲೀಕರಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಯಲ್ಲಿರುವ ಕಬ್ಬು ನುರಿಸುವ ಸಕ್ಕರೆ ಕಾರ್ಖಾನೆಗಳು ಎರಡು ದಿನಗಳಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಸಾಗಾಣಿಕೆ ಮತ್ತು ಕಟಾವು ದರವನ್ನು ಹೊರತುಪಡಿಸಿ ರೈತರಿಗೆ ಪಾವತಿಸಬೇಕಾಗುವ ದರವನ್ನು ನಿಗದಿ ಮಾಡಿ ಘೋಷಿಸಿ ಸಕ್ಕರೆ ಕಾರ್ಖಾನೆ ಆರಂಭಿಸಲು ಕ್ರಮಕೈಗೊಳ್ಳುವಂತೆ ಮಾಲೀಕರಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತರೊಂದಿಗೆ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 10 ಸಕ್ಕರೆ ಕಾರ್ಖಾನೆಗಳಿದ್ದು, ಕೇವಲ ಒಂದು ಕಾರ್ಖಾನೆ ಮಾತ್ರ ದರ ನಿಗದಿಪಡಿಸಿದೆ. ಇನ್ನುಳಿದ ಕಾರ್ಖಾನೆಗಳು ಆದಷ್ಟು ಶೀಘ್ರ ಸಮರ್ಪಕ ದರ ನಿಗದಿಪಡಿಸಿ ಸಕ್ಕರೆ ಕಾರ್ಖಾನೆಗಳನ್ನು ಕಾರ್ಯಾರಂಭಿಸುವಂತೆ ನಿರ್ದೇಶನ ನೀಡಿದರು. ರೈತರಿಗೆ ಪಾವತಿಯಾಗಬೇಕಾದ ಈ ಹಿಂದಿನ ಯಾವುದೇ ಬಿಲ್‌ಗಳನ್ನು ಬಾಕಿ ಉಳಿಸಿಕೊಳ್ಳದೇ ಶೀಘ್ರವಾಗಿ ಇತ್ಯರ್ಥ ಮಾಡಿ ಪಾವತಿಗೆ ಕ್ರಮವಹಿಸಬೇಕು. ಈ ಹಂಗಾಮಿನಲ್ಲಿ ಸರ್ಕಾರದ ಮಾನದಂಡಗಳನ್ನು ಬಳಸಿಕೊಂಡು ತಮ್ಮ ಅಧಿಕೃತ ಕಾರ್ಖಾನೆಯ ಲೆಟರ್ ಹೆಡ್‌ನಲ್ಲಿ ಕಬ್ಬು ನುರಿಸುವ ಕುರಿತು ಪತ್ರ ನೀಡಿ ಕಾರ್ಖಾನೆಗಳನ್ನು ಆರಂಭಿಸುವಂತೆ ಅವರು ತಿಳಿಸಿದರು.

ರೈತ ಮುಖಂಡರು ತಮ್ಮ ಸಮಸ್ಯೆಗಳ ಕುರಿತು ಜಿಲ್ಲಾಡಳಿತದ ಗಮನಕ್ಕೆ ತಂದಿದ್ದು, ಬಹುತೇಕ ಸ್ಥಳೀಯವಾಗಿರುವ ಸಮಸ್ಯೆ ಪರಿಹರಿಸಲಾಗುವುದು. ವಾಯು ಮಾಲಿನ್ಯ ನೈರ್ಮಲ್ಯ ಪರಿಶೀಲನೆ ನಡೆಸಿದ ವರದಿ ಸಲ್ಲಿಸಿ, ಸಕ್ಕರೆ ಕಾರ್ಖಾನೆಗಳು ಕೊಳಚೆ ನೀರು ಹರಿಬಿಡದಂತೆ ನೋಡಿಕೊಂಡು ಪರಿಸರವು ಮಾಲಿನ್ಯವಾಗದಂತೆ ನಿಗಾವಹಿಸಬೇಕು. ಸಕ್ಕರೆ ಕಾರ್ಖಾನೆಗಳಲ್ಲಿ ತೂಕ ಮಾಪನದಲ್ಲಿ ಯಾವುದೇ ದೂರಿಗೆ ಆಸ್ಪದ ನೀಡದಂತೆ ನಿಯಮಾನುಸಾರ ಕ್ರಮವಹಿಸಬೇಕು. ಎಲ್ಲಾ ಕಾರ್ಖಾನೆಗಳಲ್ಲಿ ಡಿಜಿಟಲ್ ತೂಕದ ಯಂತ್ರಗಳನ್ನು ಅಳವಡಿಸಿರಬೇಕು, ಸಕ್ಕರೆ ಕಾರ್ಖಾನೆಗಳು ಅಳವಡಿಸಿಕೊಂಡಿರುವ ಡಿಜಿಟಲ್ ತೂಕದ ಯಂತ್ರವು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಆಹಾರ ಇಲಾಖೆ, ಕಂದಾಯ ಇಲಾಖೆ ಹಾಗೂ ಇಬ್ಬರು ರೈತರನ್ನೊಳಗೊಂಡು ಸಮಿತಿ ರಚಿಸಲಾಗಿದೆ. ಸಮಿತಿಯು ಪ್ರತಿ ಹದಿನೈದು ದಿನಕ್ಕೊಮ್ಮೆ ಜಿಲ್ಲೆಯ ಎಲ್ಲಾ ಕಾರ್ಖಾನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪರಿಶೀಲನೆಯ ಸಮಗ್ರ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಿದೆ. ತೂಕದಲ್ಲಿ ವ್ಯತ್ಯಾಸ ಕಂಡು ಬಂದಲ್ಲಿ ಅಂತಹ ಕಾರ್ಖಾನೆಗಳ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಎಚ್ಚರಿಸಿದರು.ಸಭೆಯಲ್ಲಿ ರೈತ ಮುಖಂಡರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಸಭೆಯಲ್ಲಿ ಜಿಪಂ ಮುಖ್ಯ ಸಿಇಒ ರಿಷಿ ಆನಂದ, ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ, ಉಪವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ, ಅನುರಾಧಾ ವಸ್ತ್ರದ, ಕೃಷಿ ಇಲಾಖೆಯ ಜೆಡಿ ಶಿವನಗೌಡ ಪಾಟೀಲ, ಆಹಾರ ಇಲಾಖೆ ಡಿಡಿ ವಿನಯಕುಮಾರ ಪಾಟೀಲ, ರೈತ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಕಾರ್ಖಾನೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.ಕೋಟ್‌ರೈತರು ಕಬ್ಬು ಪೂರೈಸಿದ ನಿಗದಿತ ಕಾಲಾವಧಿಯೊಳಗೆ ರೈತರಿಗೆ ಕಬ್ಬಿನ ಬಿಲ್‌ ಪಾವತಿಯಾಗುವಂತೆ ನೋಡಿಕೊಳ್ಳಬೇಕು. ಸಕ್ಕರೆ ಕಾರ್ಖಾನೆಗಳಲ್ಲಿ ಪ್ರತಿ ದಿನ ಕಾರ್ಖಾನೆಗೆ ಬರುವ ಕಬ್ಬು ತುಂಬಿದ ವಾಹನಗಳ ಕುರಿತ ಮಾಹಿತಿ ಲಾಗ್ ಬುಕ್‌ನಲ್ಲಿ ದಾಖಲಿಸಬೇಕು. ಕಬ್ಬಿನ ಕಾಸ್ಟ್ ಆಪ್ ಕಲ್ಟಿವೇಶನ್ ಲಾಭಾಂಶ ಕುರಿತು 15 ಅಂಶಗಳ ಕಬ್ಬಿನ ದರ ನಿಗದಿ ಪಡಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಕ್ಕರೆ ಕಾರ್ಖಾನೆಗಳು ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಕಾರ್ಖಾನೆಗಳ ಮಾಲೀಕರು ಒಂದು ನಿಖರತೆಯಿಂದ ದರ ನಿಗದಿಪಡಿಸಿ ಘೋಷಿಸಿ ಕಾರ್ಖಾನೆ ಆರಂಭಿಸಬೇಕು.ಡಾ.ಆನಂದ.ಕೆ, ಜಿಲ್ಲಾಧಿಕಾರಿಗಳು

PREV

Recommended Stories

ಶ್ರೀ ಶ್ರೀ ರವಿಶಂಕರ್‌ಗೆ ವರ್ಲ್ಡ್ ಲೀಡರ್ ಫಾರ್ ಪೀಸ್ ಆ್ಯಂಡ್‌ ಸೆಕ್ಯೂರಿಟಿ ಪ್ರಶಸ್ತಿ
ಹಾಡಹಗಲೇ ಮನೆಗೆ ನುಗ್ಗಿ ಚಹಾ ವ್ಯಾಪಾರಿಯ ಕತ್ತು ಕೊಯ್ದು ಹತ್ಯೆ