ಕಂದಾಯ ಪಾವತಿಸದಿದ್ದರೆ ಹಲವು ಯೋಜನೆಗಳಿಂದ ವಂಚಿತ: ರಮೇಶ್‌ ಬಂಡಿಸಿದ್ದೇಗೌಡ

KannadaprabhaNewsNetwork |  
Published : Nov 16, 2026, 01:45 AM IST
15ಕೆಎಂಎನ್ ಡಿ17 | Kannada Prabha

ಸಾರಾಂಶ

ಮುಂದಿನ ಒಂದು ತಿಂಗಳಲ್ಲಿ ಸರ್ಕಾರದಿಂದ ಬಿ ಖಾತಾದಿಂದ ಎ ಖಾತೆಗೆ ಪರಿವರ್ತಿಸಿಕೊಳ್ಳಲು ಅರ್ಜಿ ಆಹ್ವಾನಿಸುತ್ತಿದೆ. ಯಾವುದೇ ಮೂಲ ದಾಖಲಾತಿಗಳಿಲ್ಲದೆ ಮನೆ ನಿರ್ಮಿಸಿಕೊಂಡು ವಾಸವಿದ್ದವರು ತಮ್ಮ ಮಾಲೀಕತ್ವದ ಪತ್ರವಾದ ಎ ಖಾತೆ ಮಾಡಿಕೊಳ್ಳಲು ಅರ್ಜಿ ಸಲ್ಲಿಸಿ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಗ್ರಾಮೀಣ ಜನರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ಕಂದಾಯಗಳನ್ನು ಪಾವತಿಸದಿದ್ದರೆ ಸರ್ಕಾರ ಹಲವು ಯೋಜನೆಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ಸಕಾಲದಲ್ಲಿ ಕಂದಾಯ ಪಾವತಿಸುವಂತೆ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ತಿಳಿಸಿದರು.

ತಾಲೂಕಿನ ಮುಂಡುಗದೊರೆ ಗ್ರಾಪಂ ಆವರಣದಲ್ಲಿ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಮಾತನಾಡಿ, ಮುಂದಿನ ಒಂದು ತಿಂಗಳಲ್ಲಿ ಸರ್ಕಾರದಿಂದ ಬಿ ಖಾತಾದಿಂದ ಎ ಖಾತೆಗೆ ಪರಿವರ್ತಿಸಿಕೊಳ್ಳಲು ಅರ್ಜಿ ಆಹ್ವಾನಿಸುತ್ತಿದೆ. ಯಾವುದೇ ಮೂಲ ದಾಖಲಾತಿಗಳಿಲ್ಲದೆ ಮನೆ ನಿರ್ಮಿಸಿಕೊಂಡು ವಾಸವಿದ್ದವರು ತಮ್ಮ ಮಾಲೀಕತ್ವದ ಪತ್ರವಾದ ಎ ಖಾತೆ ಮಾಡಿಕೊಳ್ಳಲು ಅರ್ಜಿ ಸಲ್ಲಿಸುವಂತೆ ತಿಳಿಸಿದರು.

ಗ್ರಾಮದ ರಸ್ತೆ, ಚರಂಡಿ ಸೇರಿದಂತೆ ಇತರೆ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಅಲ್ಲದೇ, ರೈತರು ಈಗಾಗಲೇ ತಮ್ಮ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳಿಗೆ ಕಟ್ಟ ಪದ್ಧತಿಯಲ್ಲಿ ನೀರು ಹರಿಸಿ ಬೆಳೆಗಳನ್ನು ಉಳಿಸಲಾಗುವುದು. ರೈತರು ಭಯ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

ಬಸವನಪುರ ಉಪ ಗ್ರಾಮವನ್ನಾಗಿ ಪರಿವರ್ತಿಸಿ ಅಲ್ಲಿನ ಮನೆಗಳ ನಿವಾಸಿಗಳಿಗೆ ಹಕ್ಕುಪತ್ರದ ಜೊತೆ ಎ ಖಾತೆ ಮಾಡಿಸಿಕೊಡಲಾಗುತ್ತದೆ. ಅಲ್ಲದೇ, ದೊಡ್ಡಪಾಳ್ಯ ಗ್ರಾಮದ ಹಾಲಿನ ಡೈರಿ ಕಟ್ಟಡ ಶಿಥಿಲವಾಗಿದೆ. ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕರ ಅನುದಾನದಲ್ಲಿ ಒಂದು ಕೋಟಿ ಹಣ ನೀಡಿ, ಸುಸರ್ಜಿತ ಕಟ್ಟಡ ನಿರ್ಮಿಸಿಕೊಡುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.

ಈ ವೇಳೆ ದೊಡ್ಡಪಾಳ್ಯ, ಚಿಕ್ಕಪಾಳ್ಯ, ಮುಂಡುಗದೊರೆ, ದೊಡ್ಡಿ, ಅಲ್ಲಾಪಟ್ಟಣ ಸೇರಿದಂತೆ ಇತರೆ ಗ್ರಾಮಗಳ ರೈತರು, ಪಿಂಚಣಿ ಫಲಾನುಭವಿಗಳು, ಹಕ್ಕುಪತ್ರ ಫಲಾನುಭವಿ ಶಾಸಕರಿಗೆ ತಮ್ಮ ಸಮಸ್ಯೆಗಳ ಸಂಬಂಧ ಮನವಿ ಸಲ್ಲಿಸಿ, ಸ್ಥಳದಲ್ಲೇ ಪರಿಹಾರ ಪಡೆದರು.

ಈ ವೇಳೆ ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಚೇತನಯಾದವ್, ತಾಪಂ ಇಒ ಚಂದ್ರು, ಸಹಾಯಕ ಕೃಷಿ ನಿರ್ದೇಶಕಿ ಪ್ರಿಯದರ್ಶಿನಿ, ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಪ್ರವೀಣ್, ತೋಟಗಾರಿಕಾ ಇಲಾಖೆ ಅಧಿಕಾರಿಗಳು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಸಂಪರ್ಕ ಹೆಚ್ಚಳದಿಂದ ಅಭಿವೃದ್ಧಿಗೆ ಪೂರಕ: ಶಾಸಕ ದಿನಕರ ಶೆಟ್ಟಿ
ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ.ಕೆ.ರುದ್ರಪ್ಪ ಆಯ್ಕೆ