ಕನ್ನಡಪ್ರಭ ವಾರ್ತೆ ರಾಮನಗರ
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಸದಸ್ಯ ಫೈರೋಜ್ ಪಾಷ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನಗರಸಭೆ ಸಭಾಂಗಣದಲ್ಲಿ ಬುಧವಾರ ನಡೆದ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಫೈರೋಜ್ ಪಾಷ ಅವರನ್ನು ಹೊರತುಪಡಿಸಿ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯನ್ನು ಘೋಷಿಸಲಾಯಿತು.
ನಂತರ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಫೈರೋಜ್ ಪಾಷ, ನನ್ನ ಪೋಷಕರು ಮತ್ತು ವಾರ್ಡಿನ ಹಿರಿಯ, ಕಿರಿಯ ಮುಖಂಡರು, ಜನರ ಆಶೀರ್ವಾದದಿಂದಾಗಿ ನಗರಸಭೆ ಸದಸ್ಯನಾಗಿ, ಈಗ ಸ್ಥಾಯಿ ಸಮಿತಿ ಅಧ್ಯಕ್ಷನಾಗಲು ಸಾಧ್ಯವಾಯಿತು. ಡಿಸಿಎಂ ಡಿ.ಕೆ.ಶಿವಕುಮಾರ್, ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್, ಶಾಸಕ ಎಚ್.ಎ.ಇಕ್ಬಾಲ್ ಹುಸೇನ್, ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ, ಉಪಾಧ್ಯಕ್ಷೆ ಆಯಿಷಾ ಭಾನು ಹಾಗೂ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.ನಗರದ ಎಲ್ಲ ವಾರ್ಡುಗಳ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಶಾಸಕರ ಮಾರ್ಗದರ್ಶನದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಎಲ್ಲ ಸದಸ್ಯರ ಸಹಕಾರದಲ್ಲಿ ಪ್ರಥಮ ಆದ್ಯತೆ ನೀಡಲಾಗುವುದು. ಕುಡಿಯುವ ನೀರು, ಯುಜಿಡಿ ಸೇರಿದಂತೆ ನಗರ ವಾಸಿಗಳಿಗೆ ಅವರ ಸ್ವತ್ತುಗಳಿಗೆ ಇ- ಖಾತಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ನಮೂನೆ 3 ಎ (ಬಿ- ಖಾತಾ) ಗೆ ಅವಕಾಶ ನೀಡಿರುವುದರಿಂದ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಹಕ್ಕನ್ನು ಸೃಜಿಸಿಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ನನಗೆ ಸಿಕ್ಕಿರುವ ಜವಾಬ್ದಾರಿಯನ್ನು ಎಲ್ಲರ ಸಹಕಾರದಲ್ಲಿ ಜನಪರವಾದ ಕಾರ್ಯಗಳನ್ನು ಮಾಡುವ ಮೂಲಕ ಎಲ್ಲರ ವಿಶ್ವಾಸ ಉಳಿಸಿಕೊಳ್ಳುತ್ತೇನೆ ಎಂದರು.ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಪಾಷ ಅವರನ್ನು ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ , ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್, ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ (ಶಶಿ), ಉಪಾಧ್ಯಕ್ಷೆ ಅಯಿಷಾಬಾನು, ಸದಸ್ಯರಾದ ಬಿ.ಸಿ.ಪಾರ್ವತಮ್ಮ, ಮುತ್ತುರಾಜು, ನರಸಿಂಹ, ಸೋಮಶೇಖರ್, ಗಿರಿಜಮ್ಮ, ವಿಜಯಕುಮಾರಿ, ಅಜ್ಮತ್, ನಿಜಾಂ ಷರೀಫ್ , ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ವಿ.ಚಂದ್ರಸಾಗರ್, ರಾಮನಗರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಭೂಷಣ್, ನಗರ ಬ್ಲಾಕ್ ಅಧ್ಯಕ್ಷ ಎಂ. ಮುಶೀರ್, ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಕಾರ್ಯಾಧ್ಯಕ್ಷ ಅನಿಲ್ ಜೋಗೇಂದರ್, ಯುವ ಮುಖಂಡರಾದ ವಸೀಂ, ಶ್ರೀನಿವಾಸ್, ಇನಾಯತ್, ಯೋಗೇಶ್, ವೆಂಕಟೇಶ್, ಪ್ರಭು, ಖದೀರ್ ಪೌರಾಯುಕ್ತ ಡಾ.ಜಯಣ್ಣ ಸೇರಿ ನಗರಸಭೆ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದು ಅಭಿನಂದಿಸಿದರು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಫೈರೋಜ್ ಪಾಷ ಆಯ್ಕೆಯಾಗುತ್ತಿದ್ದಂತೆ ಅವರ ಅಪಾರ ಸ್ನೇಹಿತರು, ವಾರ್ಡಿನ ಮುಖಂಡರು ನಗರಸಭೆ ಮುಂಭಾಗ ಡೋಲು ಬಾರಿಸಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.