ನಕಲಿ ಬಿಲ್ ಸೃಷ್ಟಿ ಪ್ರಕರಣ: ತನಿಖೆಗೆ ಸರ್ಕಾರ ಆದೇಶ

KannadaprabhaNewsNetwork |  
Published : Dec 27, 2023, 01:33 AM IST
ಲಕ್ಷ್ಿ | Kannada Prabha

ಸಾರಾಂಶ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದ ಅಡಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಸರ್ಕಾರಕ್ಕೆ ವಂಚಿಸಲಾಗಿದೆ ಎನ್ನುವ ಪ್ರಕರಣದ ಕುರಿತು ನಿವೃತ್ತ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದ ಅಡಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಸರ್ಕಾರಕ್ಕೆ ವಂಚಿಸಲಾಗಿದೆ ಎನ್ನುವ ಪ್ರಕರಣದ ಕುರಿತು ನಿವೃತ್ತ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆ ಮೇರೆಗೆ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ಪ್ರಕರಣದ ಕುರಿತು ಸತ್ಯಾಸತ್ಯತೆ ಅರಿಯಲು ನಿಷ್ಪಕ್ಷಪಾತ ತನಿಖೆ ನಡೆಸಲು ಸಚಿವೆ ಹೆಬ್ಬಾಳಕರ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಡಿ.20ರ ಪತ್ರ ಆಧರಿಸಿ ಈ ಆದೇಶ ಹೊರಡಿಸಲಾಗಿದ್ದು, ನಿವೃತ್ತ ನ್ಯಾಯಾಧೀಶ ಎಚ್.ಜಿ.ನಾಗರತ್ನ ತನಿಖೆ ನಡೆಸಲಿದ್ದಾರೆ.

ಹಿಂದಿನ ಉಪನಿರ್ದೇಶಕ ಆರ್‌. ನಾಗರಾಜ ಮತ್ತು ಪ್ರಥಮ ದರ್ಜೆ ಸಹಾಯಕ ವಿಕ್ರಮ, ಎಂಎಸ್‌ಪಿಸಿಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಮೇಲೆ ಪ್ರಭಾವ ಬೀರಿ, ಅಧಿಕಾರ ದುರ್ಬಳಕೆ ಮಾಡಿ ಬೆಳಗಾವಿ ಗ್ರಾಮೀಣ, ನಗರ, ಬೈಲಹೊಂಗಲ, ರಾಮದುರ್ಗ ಮತ್ತು ಸವದತ್ತಿ ತಾಲೂಕುಗಳ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದಡಿ ಅಕ್ರಮ ಹಾಗೂ ಕಾನೂನು ಬಾಹಿರ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ₹2 ಕೋಟಿಗಳಷ್ಟು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!