ತಪಾಸಣಾ ಅಧಿಕಾರಿಗಳ ಕಂಡು ಓಡಿದ ನಕಲಿ ಬೆಣ್ಣೆ ಮಾರಾಟಗಾರರು

KannadaprabhaNewsNetwork |  
Published : Sep 09, 2026, 01:45 AM IST
8ಎಚ್ಎಸ್ಎನ್13 :  | Kannada Prabha

ಸಾರಾಂಶ

ರೈತ ಮಹಿಳೆಯರ ಸೋಗಿನಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಪರಿಶೀಲನೆ ಕೈಗೊಂಡರು. ಅಧಿಕಾರಿಗಳು ತಪಾಸಣೆಗೆ ಬರುತ್ತಿದ್ದಂತೆ ಮಾರಾಟಕ್ಕೆ ತಂದಿದ್ದ ಬೆಣ್ಣೆ ಹಾಗೂ ವಾಹನಗಳನ್ನು ಅಲ್ಲೇ ಬಿಟ್ಟು ನಕಲಿ ಬೆಣ್ಣೆ ಮಾರಾಟಗಾರರು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ವೇಳೆ ಮಾರಾಟಕ್ಕೆ ಇಡಲಾಗಿದ್ದ ಬೆಣ್ಣೆಯ ಮಾದರಿಗಳನ್ನು ಸಂಗ್ರಹಿಸಿ ಗುಣಮಟ್ಟ ಪರೀಕ್ಷೆಗಾಗಿ ಹಾಸನದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಪಟ್ಟಣಕ್ಕೆ ಹೊರಗಿನಿಂದ ವಾಹನಗಳಲ್ಲಿ ಬೆಣ್ಣೆ ತಂದು ಮಾರಾಟ ಮಾಡಲಾಗುತ್ತಿದ್ದು, ಅದರ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಕಲಬೆರಕೆ ಹಾಗೂ ಕಳಪೆ ಗುಣಮಟ್ಟದ ಬೆಣ್ಣೆ ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಟಿ.ಎಚ್. ಹರೀಶ್ ನೇತೃತ್ವದ ಅಧಿಕಾರಿಗಳ ತಂಡ ಮಂಗಳವಾರ ಶ್ರವಣಬೆಳಗೊಳದ ವಿವಿಧೆಡೆ ತಪಾಸಣೆ ನಡೆಸಿತು.

ಮಾರುತಿ ವ್ಯಾನ್ ಹಾಗೂ ಆಪೆ ಆಟೋಗಳಲ್ಲಿ ಬೆಣ್ಣೆ ತಂದು, ರೈತ ಮಹಿಳೆಯರ ಸೋಗಿನಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಪರಿಶೀಲನೆ ಕೈಗೊಂಡರು. ಅಧಿಕಾರಿಗಳು ತಪಾಸಣೆಗೆ ಬರುತ್ತಿದ್ದಂತೆ ಮಾರಾಟಕ್ಕೆ ತಂದಿದ್ದ ಬೆಣ್ಣೆ ಹಾಗೂ ವಾಹನಗಳನ್ನು ಅಲ್ಲೇ ಬಿಟ್ಟು ನಕಲಿ ಬೆಣ್ಣೆ ಮಾರಾಟಗಾರರು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ವೇಳೆ ಮಾರಾಟಕ್ಕೆ ಇಡಲಾಗಿದ್ದ ಬೆಣ್ಣೆಯ ಮಾದರಿಗಳನ್ನು ಸಂಗ್ರಹಿಸಿ ಗುಣಮಟ್ಟ ಪರೀಕ್ಷೆಗಾಗಿ ಹಾಸನದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಪಟ್ಟಣಕ್ಕೆ ಹೊರಗಿನಿಂದ ವಾಹನಗಳಲ್ಲಿ ಬೆಣ್ಣೆ ತಂದು ಮಾರಾಟ ಮಾಡಲಾಗುತ್ತಿದ್ದು, ಅದರ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

ಬೆಣ್ಣೆಯ ಮಾದರಿಗಳ ಪರೀಕ್ಷಾ ವರದಿ ಬಂದ ಬಳಿಕ ಅದರ ಗುಣಮಟ್ಟದ ಕುರಿತು ಸ್ಪಷ್ಟತೆ ದೊರೆಯಲಿದೆ. ವರದಿಯಲ್ಲಿ ಕಳಪೆ ಗುಣಮಟ್ಟ ಅಥವಾ ಕಲಬೆರಕೆ ದೃಢಪಟ್ಟರೆ ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ತಪಾಸಣೆ ವೇಳೆ ಫುಡ್ ಆಫೀಸರ್‌ ಶರತ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮೋಹನ್, ಅಚಲ್ ಹಾಗೂ ಸ್ಥಳೀಯ ರೈತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೋಷಿತ ಸಮುದಾಯದ ನೌಕರರು ಸಂಘಟಿತರಾಗಬೇಕು: ಕೆ.ಶೇಷಾದ್ರಿ
ಹನೂರು: ಹಳ್ಳದ ದಂಡೆಯಲ್ಲೇ ಅಂತ್ಯಸಂಸ್ಕಾರ