ಅಸಲಿ ಗಾಂಧಿ ಹೆಸರಿನಲ್ಲಿ ನಕಲಿ ಕಾಂಗ್ರೆಸ್‌ ಸಮಾವೇಶ - ಸಂಸದ ಬಸವರಾಜ ಬೊಮ್ಮಾಯಿ ಟೀಕೆ

KannadaprabhaNewsNetwork |  
Published : Dec 27, 2024, 12:49 AM ISTUpdated : Dec 27, 2024, 10:35 AM IST
26ಎಚ್‌ವಿಆರ್3 | Kannada Prabha

ಸಾರಾಂಶ

ಮಹಾತ್ಮ ಗಾಂಧಿ ಕಾಂಗ್ರೆಸ್ಸಿಗೂ ಇಂದಿನ ಕಾಂಗ್ರೆಸ್ಸಿಗೂ ಬಹಳ ವ್ಯತ್ಯಾಸ ಇದೆ. ಅಸಲಿ ಕಾಂಗ್ರೆಸ್ಸಿಗೂ, ನಕಲಿ ಕಾಂಗ್ರೆಸ್ಸಿಗೂ ವ್ಯತ್ಯಾಸ ಇದೆ. ಮಹಾತ್ಮಾ ಗಾಂಧೀಜಿಯವರಿಗೆ ತದ್ವಿರುದ್ಧವಾಗಿ ಈಗಿನ ಕಾಂಗ್ರೆಸ್ಸಿನವರು ನಡೆದುಕೊಳ್ಳುತ್ತಿದಾರೆ. 

ಹಾವೇರಿ: ಮಹಾತ್ಮ ಗಾಂಧಿ ಕಾಂಗ್ರೆಸ್ಸಿಗೂ ಇಂದಿನ ಕಾಂಗ್ರೆಸ್ಸಿಗೂ ಬಹಳ ವ್ಯತ್ಯಾಸ ಇದೆ. ಅಸಲಿ ಕಾಂಗ್ರೆಸ್ಸಿಗೂ, ನಕಲಿ ಕಾಂಗ್ರೆಸ್ಸಿಗೂ ವ್ಯತ್ಯಾಸ ಇದೆ. ಮಹಾತ್ಮಾ ಗಾಂಧೀಜಿಯವರಿಗೆ ತದ್ವಿರುದ್ಧವಾಗಿ ಈಗಿನ ಕಾಂಗ್ರೆಸ್ಸಿನವರು ನಡೆದುಕೊಳ್ಳುತ್ತಿದಾರೆ. ಅಸಲಿ ಗಾಂಧಿ ಹೆಸರಿನಲ್ಲಿ ನಕಲಿ ಕಾಂಗ್ರೆಸ್‌ ಸಮಾವೇಶ ನಡೆಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಸಂಸದರ ಕಚೇರಿಯಲ್ಲಿ ಗುರುವಾರ ಸಾರ್ವಜನಿಕರ ಅಹವಾಲು ಆಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಗಾಂಧಿಯವರ ಸ್ವರಾಜ್ಯಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಅಧಿವೇಶನಕ್ಕೆ ಸರ್ಕಾರದ ಹಣ ಬಳಸುತ್ತಿರುವುದು ಎಷ್ಟು ಸರಿ? ಗಾಂಧೀಜಿಯವರನ್ನು ಮುಂದಿಟ್ಟುಕೊಂಡು ತಮ್ಮ ಬ್ಯಾನರ್ ಹಾಕಿಕೊಂಡು ಅಧಿವೇಶನ ಮಾಡುತ್ತಿದ್ದಾರೆ. 

ಅಸಲಿ ಗಾಂಧಿ ಹೆಸರಲ್ಲಿ ನಕಲಿ ಕಾಂಗ್ರೆಸ್ ಅಧಿವೇಶನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಪ್ರಜಾಪ್ರಭುತ್ವ ವಿರೋಧಿ:ವಿರೋಧ ಪಕ್ಷಗಳನ್ನು ದಮನ ಮಾಡಲು ಪ್ರಜಾಪ್ರಭುತ್ವ ವಿರೋಧಿ ಕ್ರಮ ಅನುಸರಿಸುತ್ತಿದ್ದಾರೆ. ಸರ್ಕಾರ ಪೊಲೀಸ್ ಸ್ಟೇಷನ್‌ಗಳಲ್ಲಿ ಡೀಲ್ ವ್ಯವಸ್ಥೆ ಮಾಡಿದೆ. ಗೃಹ ಸಚಿವರೇ ಏನೂ ನಡೆದಿಲ್ಲ, ಗೊತ್ತಿಲ್ಲ ಅಂತ ಮಾತಾಡುತ್ತಾರೆ.

 ಸಿಎಂ ಉಡಾಫೆ ಉತ್ತರ ಕೊಡುತ್ತಾರೆ. ಈ ಘಟನೆಗಳು ತುರ್ತು ಪರಿಸ್ಥಿತಿ ನೆನಪಿಸುತ್ತಿದೆ. ಶಾಸಕ ಮುನಿರತ್ನ ಮೇಲೆ ಆರೋಪ ಇದೆ, ಅದನ್ನು ಕೋರ್ಟ್ನಲ್ಲಿ ಅವರು ಎದುರಿಸುತ್ತಾರೆ. ಅವರ ಮೇಲೆ ಮೊಟ್ಟೆ ಒಗೆಯುತ್ತಾರೆ ಅಂದರೆ ಯಾವ ಮಟ್ಟಕ್ಕೆ ಸರ್ಕಾರ ಇಳಿದಿದೆ? ಜನ ಪ್ರತಿನಿಧಿಗಳು ನಿರ್ಭೀತಿ, ನಿರ್ಭಯದಿಂದ ಕೆಲಸ ಮಾಡಲು ಹೇಗೆ ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಮೇಲೆ ನಾವೇ ಮೊಟ್ಟೆ ಹಾಕಿಸಿಕೊಂಡು ಅವಮಾನ ಮಾಡಿಸಿಕೊಳ್ಳೋಕೆ ಆಗುತ್ತಾ? ಎಂದು ಕಾಂಗ್ರೆಸ್‌ ಆರೋಪಕ್ಕೆ ಮರು ಪ್ರಶ್ನಿಸಿದರು. 

ಸಿಟಿ ರವಿ ದೂರಿಗೆ ಕ್ರಮವಿಲ್ಲ: ದೇವರು ಮೇಲಿನ ನಂಬಿಕೆ ಅವರವರ ವಯಕ್ತಿಕ ವಿಚಾರ. ಸಿ.ಟಿ. ರವಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಇಬ್ಬರೂ ದೂರು ಕೊಟ್ಟಿದ್ದಾರೆ. ಒಂದು ಕಡೆ ಕಂಪ್ಲೇಂಟ್‌ಗೆ ಕೂಡಲೇ ಕ್ರಮ ಕೈಗೊಳ್ಳುತ್ತಾರೆ. ಆದರೆ, ಸಿ.ಟಿ.ರವಿ ದೂರು ಕೊಟ್ಟಿರುವುದನ್ನು ಎಫ್‌ಐ ಆರ್ ಮಾಡೇ ಇಲ್ಲ. ಹೈಕೋರ್ಟ್ ಮಧ್ಯಪ್ರವೇಶ ಮಾಡದಿದ್ದರೆ ಸಿ.ಟಿ. ರವಿ ಅವರ ಪರಿಸ್ಥಿತಿ ಏನು ಆಗ್ತಿತ್ತೋ ಗೊತ್ತಿಲ್ಲ ಎಂದು ಅಚ್ಚರಿ ವ್ಯಕ್ತಪಡಿಸಿದರು.. ಈ ವೇಳೆ ಮಾಜಿ ಶಾಸಕರಾದ ಶಿವರಾಜ ಸಜ್ಜನರ, ವಿರುಪಾಕ್ಷಪ್ಪ ಬಳ್ಳಾರಿ ಇದ್ದರು.

ದರ ಏರಿಕೆ ಪರ್ವ: ಈ ಸರ್ಕಾರದಿಂದ ಬೆಲೆ ಏರಿಕೆ ಪರ್ವ ನಡೆದಿದೆ. ಸ್ಟಾಂಪ್ ಡ್ಯೂಟಿ, ಅಬಕಾರಿ ತೆರಿಗೆ ಸೇರಿದಂತೆ ಎಲ್ಲದರ ತೆರಿಗೆ ಹೆಚ್ಚಿಸಿದ್ದಾರೆ. ₹ 15,000 ಕೋಟಿ ಹೊಸ ತೆರಿಗೆ ಹಾಕಿದ್ದಾರೆ. ಹಾಲಿನ ದರ, ನೀರಿನ ದರ ಎಲ್ಲದರಲ್ಲೂ ತೆರಿಗೆ ಹೆಚ್ಚಿಗೆ ಮಾಡಿದ್ದಾರೆ. ಜನ ಸಾಮಾನ್ಯರು ಬಳಕೆ ಮಾಡುವಂತ ಎಲ್ಲಾ ವಸ್ತುಗಳ ದರ ಹೆಚ್ಚಳ ಮಾಡಿದ್ದಾರೆ. ಮುಂಬರುವ ದಿನಗಳಲ್ಲಿ ಮರಳು, ಜಲ್ಲಿ ಕೂಡ ಇನ್ನಷ್ಟು ತುಟ್ಟಿ ಆಗಲಿದೆ. ಪ್ರತಿ ಆರ್ಥಿಕ ಚಟುವಟಿಕೆ ಮೇಲೆ ತೆರಿಗೆ ಹಾಕುತ್ತಿದ್ದಾರೆ. ಮುಂದೆ ಇವರು ಗಾಳಿಗೂ ತೆರಿಗೆ ಹಾಕುವ ಕಾಲ ದೂರ ಇಲ್ಲ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ
‘ಆತ್ಮನಿರ್ಭರ ಭಾರತ’ಕ್ಕೆ ಅಮೆಜಾನ್ ಪುಷ್ಟಿ