ಬಳ್ಳಾರಿಯಲ್ಲಿ ನಕಲಿ ವೈದ್ಯರ ಕ್ಲಿನಿಕ್ ಸೀಜ್

KannadaprabhaNewsNetwork |  
Published : Jan 09, 2026, 02:15 AM IST
ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಬಳ್ಳಾರಿಯಲ್ಲಿ ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಿ ಸೀಜ್ ಮಾಡಿದರು.  | Kannada Prabha

ಸಾರಾಂಶ

ಬಳ್ಳಾರಿ ಜಿಲ್ಲೆಯ ವಿವಿಧೆಡೆ ವೈದ್ಯಕೀಯ ಪದವಿ ಪಡೆಯದೇ ತಾವು ವೈದ್ಯರೆಂದು ಬಿಂಬಿಸಿ ವೈದ್ಯ ವೃತ್ತಿ ಮಾಡುತ್ತಿದ್ದ ನಕಲಿ ವೈದ್ಯರ ಕ್ಲಿನಿಕ್ ಗಳ ಮೇಲೆ ದಾಳಿ ನಡೆಸಿ ಸೀಜ್ ಮಾಡಲಾಗಿದೆ

ಬಳ್ಳಾರಿ: ಜಿಲ್ಲೆಯ ವಿವಿಧೆಡೆ ವೈದ್ಯಕೀಯ ಪದವಿ ಪಡೆಯದೇ ತಾವು ವೈದ್ಯರೆಂದು ಬಿಂಬಿಸಿ ವೈದ್ಯ ವೃತ್ತಿ ಮಾಡುತ್ತಿದ್ದ ನಕಲಿ ವೈದ್ಯರ ಕ್ಲಿನಿಕ್ ಗಳ ಮೇಲೆ ದಾಳಿ ನಡೆಸಿ ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ತಿಳಿಸಿದ್ದಾರೆ.

ನಗರದ ಮುಲ್ಲಂಗಿ ಸಂಜೀವಪ್ಪ ಬೀದಿ, ಕೊಲ್ಮಿಚೌಕ್ ಹತ್ತಿರದಲ್ಲಿ ಬಿಸ್ವಾಸ್ ಎಂಬಾತ ಯಾವುದೇ ವೈದ್ಯಕೀಯ ಪದವಿ ಮಾನ್ಯತೆ ಪಡೆಯದೇ ನಕಲಿ ವೈದ್ಯನಾಗಿದ್ದು, ತಾನು ಪೈಲ್ಸ್ ವೈದ್ಯನೆಂದು ಸಾರ್ವಜನಿಕರಲ್ಲಿ ಸುಳ್ಳು ಹೇಳಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ. ಸಾರ್ವಜನಿಕರಿಂದ ದೂರು ಬಂದ ಮೇಲೆ ಕ್ಲಿನಿಕ್ ಮೇಲೆ ದಾಳಿ ಮಾಡಿ ಕ್ಲಿನಿಕ್ ಸೀಜ್ ಮಾಡಲಾಗಿದೆ.

ಕುಡುತಿನಿ ಗ್ರಾಮದಲ್ಲಿ ಮತ್ತೊಬ್ಬ ನಕಲಿ ವೈದ್ಯ ಎಂ.ಡಿ. ಗೌಸ್, ಸಾರ್ವಜನಿಕರಿಗೆ ವೈದ್ಯನೆಂದು ಬಿಂಬಿಸಿ ಯಾವುದೇ ವೈದ್ಯಕೀಯ ಪದವಿ ಪಡೆಯದೇ ಕೇವಲ 10ನೇ ತರಗತಿಯವರೆಗೆ ಓದಿ, ಔಷಧಿಗಳ ಬಗ್ಗೆ ಮಾಹಿತಿ ಪಡೆದುಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ಕ್ಲಿನಿಕ್ ಮೇಲೆ ದಾಳಿ ಮಾಡಿ ಕ್ಲಿನಿಕ್‌ನ್ನು ಸೀಜ್ ಮಾಡಲಾಗಿದೆ.ಅದೇ ರೀತಿ ಬಳ್ಳಾರಿ ತಾಲೂಕಿನ ಸಿರಿವಾರ ಗ್ರಾಮದಲ್ಲಿ ಡಾ.ಪ್ರಕಾಶ್ ಎಂಬುವವರು, ಬಿಎಎಂಎಸ್ ವಿದ್ಯಾರ್ಹತೆ ಪಡೆದು ಚಿಕಿತ್ಸೆ ನೀಡುತ್ತಿದ್ದು, ಕೆಪಿಎಂಇ ಕಾಯ್ದೆ ಕಾಯ್ದೆ ಉಲ್ಲಂಘನೆ ಮಾಡಿರುವುದು ಕಂಡುಬಂದಿದೆ. ಇವರ ಎಂಜಿ ಕ್ಲಿನಿಕ್ ಅನ್ನು ಸಹ ಸೀಜ್ ಮಾಡಲಾಗಿದೆ.

ಸಾರ್ವಜನಿಕರು ತಮ್ಮ ಆರೋಗ್ಯದ ದೃಷ್ಟಿಯಿಂದ ಅಧೀಕೃತ ವೈದ್ಯ ಪದವಿ ಪಡೆದ ವೈದ್ಯರ ಬಳಿ ತಪಾಸಣೆ ಮಾಡಿಸುವ ಮೂಲಕ ಚಿಕಿತ್ಸೆ ಪಡೆಯುವುದರಿಂದ ಆರೋಗ್ಯದ ಮೇಲೆ ಉಂಟಾಗಬಹುದಾದ ಗಂಭೀರ ಪರಿಣಾಮಗಳನ್ನು ತಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಹೇಳಿದ್ದಾರೆ.

ಗ್ರಾಮಗಳಲ್ಲಿ ವೈದ್ಯ ವೃತ್ತಿ ಮಾಡುತ್ತಿರುವವರು ಕಂಡುಬಂದಲ್ಲಿ ಸಾರ್ವಜನಿಕರು ಅವರ ವೈದ್ಯಕೀಯ ಪದವಿಯ ಮಾಹಿತಿಯನ್ನು ಪಡೆದುಕೊಂಡು ಚಿಕಿತ್ಸೆ ಪಡೆಯಬೇಕು. ಒಂದು ವೇಳೆ ನಕಲಿ ವೈದ್ಯರು ಎಂದು ಕಂಡುಬಂದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಾಲಯಕ್ಕೆ ದೂರು ನೀಡಿದರೆ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007ರ ಅಡಿಯಲ್ಲಿ ಕ್ರಮ ಜರುಗಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ದಾಳಿಯ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ಅಬ್ದುಲ್ಲಾ ಮತ್ತು ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಹನುಮಂತಪ್ಪ, ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಎಚ್. ಗೋಪಾಲ್, ಆರ್.ಬಿ.ಎಸ್.ಕೆ ಸಮಾಲೋಚಕ ಮನೋಹರ್ ಹಾಗೂ ವೈದ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ