ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ನಕಲಿ ವೀಡಿಯೋ: ಪೊಲೀಸ್ ದೂರು

KannadaprabhaNewsNetwork |  
Published : Aug 18, 2026, 02:45 AM IST
17ಎಚ್ಎಸ್ಎನ್16 :  | Kannada Prabha

ಸಾರಾಂಶ

ಪುರಾಣ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲು ಯತ್ನಿಸುತ್ತಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ವಿರುದ್ಧ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿದೆ.

ಸುಬ್ರಹ್ಮಣ್ಯ: ಪುರಾಣ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲು ಯತ್ನಿಸುತ್ತಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ವಿರುದ್ಧ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸ್ ಠಾಣೆಗೆ ದೂರು ನೀಡಿದೆ.ನಾಗರ ಪಂಚಮಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ₹750 ಮುಂಗಡ ಹಣ ಪಾವತಿಸಿದರೆ ದೇವಸ್ಥಾನದ ಸೇವೆಗಳನ್ನು ನೆರವೇರಿಸಿ ಪ್ರಸಾದವನ್ನು ಕಳುಹಿಸಿಕೊಡಲಾಗುವುದು ಎಂಬ ಸಂದೇಶವನ್ನು ವಿಡಿಯೋದಲ್ಲಿ ನೀಡಲಾಗಿದೆ. ಇದರಿಂದ ಭಕ್ತರು ಮೋಸ ಹೋಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿರುವುದು ಗಮನಕ್ಕೆ ಬರುತ್ತಿದ್ದಂತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಕೂಡಲೇ ಕಾರ್ಯಪ್ರವೃತ್ತರಾಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೇವಸ್ಥಾನದ ಅಧಿಕೃತ ಸೇವೆಗಳು ಹಾಗೂ ಪ್ರಸಾದಕ್ಕೆ ಸಂಬಂಧಿಸಿದ ಹಣ ಪಾವತಿ ಮಾಡುವ ಮುನ್ನ ಭಕ್ತರು ಯಾವುದೇ ಅಪರಿಚಿತ ವ್ಯಕ್ತಿಗಳ ಸಾಮಾಜಿಕ ಜಾಲತಾಣದ ಲಿಂಕ್, ಮೊಬೈಲ್ ಸಂಖ್ಯೆ ಅಥವಾ ಖಾತೆಗೆ ಹಣ ವರ್ಗಾಯಿಸದೆ, ದೇವಸ್ಥಾನದ ಅಧಿಕೃತ ಮೂಲಗಳಿಂದ ಮಾಹಿತಿ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸುಂಟಿಕೊಪ್ಪ: ಕಾಡಾನೆ ಹಾವಳಿ, ಬೆಳೆ ನಷ್ಟ
ಕಾಡಾನೆ ದಾಳಿ: ಕಾರ್ಮಿಕ ಸಾವು, ಮತ್ತೋರ್ವ ಗಂಭೀರ