ಲಕ್ಷ್ಮೇಶ್ವರದ ರೈತರ ಹೋರಾಟಕ್ಕೆ ಫಕೀರ ಸಿದ್ದರಾಮ ಶ್ರೀ ಬೆಂಬಲ

KannadaprabhaNewsNetwork |  
Published : Nov 26, 2025, 02:30 AM IST
ಹೋರಾಟ ವೇದಿಕೆಯಲ್ಲಿ ಶಿರಹಟ್ಟಿಯ ಫಕೀರ ಸಿದ್ದರಾಮ ಶ್ರೀ ಮಾತನಾಡಿದರು. | Kannada Prabha

ಸಾರಾಂಶ

ಹೋರಾಟ ನಡೆಯುತ್ತಿರುವ ಸ್ಥಳಕ್ಕೆ ಶಿರಹಟ್ಟಿಯ ಫಕೀರ ಸಿದ್ದರಾಮ ಸ್ವಾಮಿಗಳು ಭೇಟಿ ನೀಡಿ ಮಾತನಾಡಿ, ರೈತಪರ ಹೋರಾಟಗಾರರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅಗತ್ಯವಾಗಿದೆ ಎಂದರು.

ಲಕ್ಷ್ಮೇಶ್ವರ: ಗೋವಿನ ಜೋಳ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ಪಟ್ಟಣದ ಶಿಗ್ಲಿ ಕ್ರಾಸ್ ಹತ್ತಿರ ನಡೆಸುತ್ತಿರುವ ರೈತಪರ ಹೋರಾಟಗಾರರು ನಡೆಸುತ್ತಿರುವ ಹೋರಾಟ 12ನೇ ದಿನಕ್ಕೆ ಕಾಲಿಟ್ಟಿದೆ.

ಮಂಗಳವಾರ ರೈತಪರ ಹೋರಾಟ ನಡೆಸುತ್ತಿರುವ ಮುಖಂಡರ ಆರೋಗ್ಯ ತಪಾಸಣೆ ಶಿಬಿರವನ್ನು ಗದಗ ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯ ಪ್ರಕಾಶ ಹೊಸಮನಿ ಹಾಗೂ ಅವರ ತಂಡದ ಸದಸ್ಯರು ನಡೆಸಿದರು.

ಈ ವೇಳೆ ಹೋರಾಟ ನಡೆಯುತ್ತಿರುವ ಸ್ಥಳಕ್ಕೆ ಶಿರಹಟ್ಟಿಯ ಫಕೀರ ಸಿದ್ದರಾಮ ಸ್ವಾಮಿಗಳು ಭೇಟಿ ನೀಡಿ ಮಾತನಾಡಿ, ರೈತಪರ ಹೋರಾಟಗಾರರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅಗತ್ಯವಾಗಿದೆ. ಹೋರಾಟದ ವೇಳೆ ಆರೋಗ್ಯದಲ್ಲಿ ಏರುಪೇರಾಗುವುದು ಸಾಮಾನ್ಯ. ಆದ್ದರಿಂದ ವೈದ್ಯರಿಂದ ಸೂಕ್ತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯದ ಕಾಳಜಿ ವಹಿಸಬೇಕು. ಸರ್ಕಾರ ಶೀಘ್ರದಲ್ಲಿ ರೈತರ ನ್ಯಾಯುತ ಬೇಡಿಕೆಗೆ ಸ್ಪಂಧಿಸಿ ಬೆಂಬಲ ಬಲೆ ಖರೀದಿ ಕೇಂದ್ರ ಆರಂಭಿಸಿ ರೈತರ ಹೋರಾಟಕ್ಕೆ ನ್ಯಾಯ ಒದಗಿಸುವ ಕಾರ್ಯ ಮಾಡಬೇಕು ಎಂದರು.

ಈ ವೇಳೆ ಆದ್ರಳ್ಳಿಯ ಗವಿಮಠದ ಡಾ. ಕುಮಾರ ಮಹಾರಾಜ ಸ್ವಾಮಿಗಳು, ಕುಂದಗೋಳದ ಬಸವಣ್ಣ ಸ್ವಾಮಿಗಳು, ಮಂಜುನಾಥ ಮಾಗರಿ, ನಾಗರಾಜ ಚಿಂಚಲಿ, ಶರಣು ಗೋಡಿ, ಮಹೇಶ ಹೊಗೆಸೊಪ್ಪಿನ, ಟಾಕಪ್ಪ ಸಾತಪೂತೆ, ಮುದಕಣ್ಣ ಗದ್ದಿ, ನೀಲಪ್ಪ ಶೆರಸೂರಿ, ಸುರೇಶ ಹಟ್ಟಿ, ವಿರುಪಾಕ್ಷಪ್ಪ ಮುದಕಣ್ಣವರ, ಪೂರ್ಣಾಜಿ ಕರಾಟೆ, ಚನ್ನಪ್ಪ ಷಣ್ಮುಖಿ ಸೇರಿದಂತೆ ಅನೇಕರು ಇದ್ದರು. ಇಂದು ಸಂವಿಧಾನ ಬಚಾವೋ ದಿವಸ್ ಆಚರಣೆ

ಗದಗ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಬಚಾವೋ ದಿವಸ್ ಆಚರಣೆ ಕಾರ್ಯಕ್ರಮ ನ. 26ರಂದು ಬೆಳಗ್ಗೆ 11ಕ್ಕೆ ನಗರದ ದಿ. ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಗದಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಾರ್ಯಕ್ರಮದಲ್ಲಿ ರೋಣ ಶಾಸಕ ಜಿ.ಎಸ್. ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹಾಗೂ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್. ಪಾಟೀಲ ಭಾಗವಹಿಸುವರು.

ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ, ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ ಸೇರಿದಂತೆ ಪಕ್ಷದ ಹಿರಿಯರು, ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಪಾಲ್ಗೊಳ್ಳುವರು ಎಂದು ತಿಳಿಸಿದ್ದಾರೆ.

PREV

Recommended Stories

ವಾಟರ್‌ ಬಾಟಲ್‌ ತಯಾರಿಸಲು ಬೆಂಗಳೂರು ಜಲಮಂಡಳಿ ಸಿದ್ಧತೆ: ಶೀಘ್ರ ಮಾರುಕಟ್ಟೆಗೆ ಲಭ್ಯ
ತಾಯಿಯಿಂದಲೇ 3 ದಿನದ ಶಿಶು ಉಸಿರುಗಟ್ಟಿಸಿ ಕೊಲೆ