ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಅದ್ಧೂರಿ ಸ್ವಾಗತಕನ್ನಡಪ್ರಭ ವಾರ್ತೆ ಚಳ್ಳಕೆರೆ
ಕಾರ್ಯಕರ್ತರ ಉತ್ಸಾಹ ಕಂಡು ಸ್ವಲ್ಪ ಸಮಯ ಕಾರ್ಯಕರ್ತರಿಗೆ ನಿರ್ದೇಶನ ನೀಡಿದ ಅವರು, ರಾಜಕೀಯ ಪಕ್ಷದಲ್ಲಿ ಸ್ಥಾನಮಾನ ಬಯಸುವುದು ಸ್ವಾಭಾವಿಕ ವಿಶೇಷವಾಗಿ ನಮ್ಮ ಸಮುದಾಯ ಯಾವುದೇ ಸೌಲಭ್ಯ ಪಡೆಯಲು ಮುಂದೆ ಬರುತ್ತಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಾಗಿ ವಿಪಕ್ಷಗಳು ಸುಳ್ಳು ಆರೋಪ ಮಾಡುತ್ತಾ ಬಂದಿವೆ. ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಗೆ ಚ್ಯುತಿ ಬಾರದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಹೇಳಿದರು.
ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಪ್ಪ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ, ನಗರಸಭೆ ಅಧ್ಯಕ್ಷೆ ಜೈತುಂಬಿ, ಸದಸ್ಯ ರಮೇಶ್‌ಗೌಡ, ಇಒ ಶಶಿಧರ, ಎಸ್‌ಪಿ ರಂಜಿತ್ ಕುಮಾರ್ ಬಂಡಾರು, ಪಕ್ಷದ ಮುಖಂಡರಾದ ದೊಣ್ಣಪ್ಪರೆಡ್ಡಿ, ಶೇಖರಪ್ಪ, ಪಾತಲಿಂಗಪ್ಪ ಮುಂತಾದವರು ಉಪಸ್ಥಿತರಿದ್ದರು.