ಅಂಬೇಡ್ಕರ್ ಮತ್ತು ದಲಿತರಿಗೆ ಅನ್ಯಾಯ ಮಾಡಿದವರು ಕಾಂಗ್ರೆಸ್ ಪಕ್ಷದವರು ಇಂದು ಡಾ.ಬಿ.ಆರ್.ಅಂಬೇಡ್ಕರ್ ಫೋಟೊವಿಟ್ಟುಕೊಂಡು ಬಿಜೆಪಿ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿರುವುದು ನಾಚಿಕೆಗೇಡ ಸಂಗತಿ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.
ಕನ್ನಡಪ್ರಭ ವಾರ್ತೆ ರಾಯಬಾಗ
ಅಂಬೇಡ್ಕರ್ ಮತ್ತು ದಲಿತರಿಗೆ ಅನ್ಯಾಯ ಮಾಡಿದವರು ಕಾಂಗ್ರೆಸ್ ಪಕ್ಷದವರು ಇಂದು ಡಾ.ಬಿ.ಆರ್.ಅಂಬೇಡ್ಕರ್ ಫೋಟೊವಿಟ್ಟುಕೊಂಡು ಬಿಜೆಪಿ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿರುವುದು ನಾಚಿಕೆಗೇಡ ಸಂಗತಿ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.ಪಟ್ಟಣದ ಶಾಸಕರ ಗೃಹಕಚೇರಿಯಲ್ಲಿ ಬಿಜೆಪಿ ಪಕ್ಷದಿಂದ ಸಂವಿಧಾನ ಗೌರವ ಅಭಿಯಾನ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಭೀಮ ಸಂಗಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಬಾಸಾಹೇಬ ಅಂಬೇಡ್ಕರ್ ಅವರು ಅಂದು ಚುನಾವಣೆಯಲ್ಲಿ ಪರಾಭವಗೊಳ್ಳಲು ಇದೇ ಕಾಂಗ್ರೆಸ್ ಪಕ್ಷದವರು ಕಾರಣರಾಗಿದ್ದಾರೆ. ಅಷ್ಟೇ ಅಲ್ಲದೇ ಅವರು ನಿಧನರಾದಾಗ ದೆಹಲಿಯಲ್ಲಿ ಶವಸಂಸ್ಕಾರಕ್ಕೆ ಸ್ಥಳ ನೀಡದೇ ಅಪಮಾನ ಮಾಡಿದವರು ಕೂಡ ಕಾಂಗ್ರೆಸ್ ಪಕ್ಷದವರೇ. ಇಂದು ಅಂಬೇಡ್ಕರ್ ಅವರ ಫೋಟೊ ಇಟ್ಟುಕೊಂಡು ದಲಿತರ ಮತಕ್ಕಾಗಿ ಬಿಜೆಪಿ ಪಕ್ಷದ ವಿರುದ್ಧ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಚಿಕ್ಕೋಡಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ ಕುಲಕರ್ಣಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್‌ರವರು ಮಹಿಳೆಯರಿಗೆ ಪುರುಷರಷ್ಟೆ ಸಮಾನ ಹಕ್ಕು ಕಲ್ಪಿಸುವ ಹಿಂದೂ ಬಿಲ್ ಕೋಡ್ ಸಂಸತನಲ್ಲಿ ಮಂಡಿಸಲು ವಿರೋಧಿಸಿದವರು ಕಾಂಗ್ರೆಸ್ ಪಕ್ಷದವರು. ಅಂದು ನೆಹರೂ ಅವರ ನಡೆಯನ್ನು ಖಂಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಇಂದು ಕಾಂಗ್ರೆಸ್ ಪಕ್ಷದವರು ಅಂಬೇಡ್ಕರ್ ಅವರ ಹೆಸರನ್ನು ಹೇಳುತ್ತ ದಲಿತರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಕಾಂಗ್ರೆಸ್‌ದವರ ಸುಳ್ಳು ಪ್ರಚಾರಕ್ಕೆಯಾರೂ ಕೂಡ ಮರಳಾಗಬಾರದು ಎಂದು ಮನವಿ ಮಾಡಿದರು.
ಅಂಬೇಡ್ಕರ್ ವ್ಯಕ್ತಿತ್ವ ಮತ್ತು ಅವರ ಜೀವನದ ಬಗ್ಗೆ ಪ್ರತಿಯೊಬ್ಬ ಭಾರತೀಯನು ಅರಿತುಕೊಳ್ಳಬೇಕು. ಅಂಬೇಡ್ಕರ್ ಅವರ ಬಗ್ಗೆ ಎಲ್ಲ ಸಮಾಜದವರಿಗೆ ತಿಳಿಸಲು ಬಿಜೆಪಿ ಪಕ್ಷದಎಲ್ಲ ಶಾಸಕರ ಗೃಹ ಕಚೇರಿಗಳಲ್ಲಿ ಭೀಮ ಸಂಗಮ ಎಂಬ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಿ ಸಂವಾದ ಮತ್ತು ಸಹಭೋಜನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ರಾಯಬಾಗ ಮಂಡಲ ಅಧ್ಯಕ್ಷ ಪೃಥ್ವಿರಾಜಜಾಧವ, ಸದಾನಂದ ಹಳಿಂಗಳಿ, ಸದಾಶಿವ ಘೋರ್ಪಡೆ, ಅಣ್ಣಾಸಾಹೇಬ ಖೆಮಲಾಪೂರೆ, ರಾಜಶೇಖರ ಖನದಾಳೆ, ಬಸವರಾಜ ಡೊಣವಾಡೆ, ಅಪ್ಪಾಸಾಬ್ ಬ್ಯಾಕೂಡೆ, ವಿಜಯ ಕೋಟಿವಾಲೆ, ಅರುಣ ಐಹೊಳೆ, ಶಿವಾನಂದ ಐಹೊಳೆ, ಮಹೇಶ ಕರಮಡಿ, ಮಹಾದೇವ ಕೋಳಿ ಸೇರಿ ಅನೇಕರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.