ಧರ್ಮಸ್ಥಳ ಕುರಿತು ಅಪಪ್ರಚಾರ: ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

KannadaprabhaNewsNetwork |  
Published : Aug 24, 2025, 02:00 AM IST
23ಎಚ್‌ಪಿಟಿ1- ಶ್ರೀಕ್ಷೇತ್ರ ಧರ್ಮಸ್ಥಳ ಕುರಿತು ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಮಂಡಳ ವತಿಯಿಂದ ಹೊಸಪೇಟೆಯಲ್ಲಿ ಶನಿವಾರ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. | Kannada Prabha

ಸಾರಾಂಶ

ಧರ್ಮಸ್ಥಳ ಕುರಿತು ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಮಂಡಳ ವತಿಯಿಂದ ನಗರದಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಹೊಸಪೇಟೆ

ಧರ್ಮಸ್ಥಳ ಕುರಿತು ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಮಂಡಳ ವತಿಯಿಂದ ನಗರದಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ನಗರದ ಪಟೇಲ್ ನಗರದ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವುದರ ಮೂಲಕ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆಯಾಗಿ ಮಾರ್ಪಟ್ಟಿತು. ಈ ವೇಳೆ ಪ್ರತಿಭಟನಾಕಾರರು ಶ್ರೀಕ್ಷೇತ್ರ ಧರ್ಮಸ್ಥಳ ಕುರಿತು ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೆಲ ಪಟ್ಟಭದ್ರ ಹಿತಾಸಕ್ತಿಗಳು ಧರ್ಮಸ್ಥಳದ ಹೆಸರನ್ನು ಕೆಡಿಸಲು ಮತ್ತು ಹಿಂದೂ ಧರ್ಮವನ್ನು ತುಳಿಯಲು ಸಂಚು ಮಾಡಿದ್ದಾರೆ. ಈಗಾಗಲೇ ಉತ್ಖನನದಲ್ಲಿ ಮಾಸ್ಕ್ ಮ್ಯಾನ್ ತೋರಿಸಿದ ಜಾಗಗಳಲ್ಲಿ ಏನೂ ಸಿಗದೇ ಎಸ್ಐಟಿ ಕಡೆಯಿಂದ ಮಾಸ್ಕ್‌ ಮ್ಯಾನ್ ಅನ್ನು ಬಂಧಿಸಿ ವಿಚಾರಣೆ ನಡೆಸಲಾಯಿತು. ಈ ರೀತಿ ಸುಳ್ಳು ಅಪಪ್ರಚಾರ ಮಾಡುವವರನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಕೆಲವರು ಸಂಚು ರೂಪಿಸಿ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಕುರಿತು ಅಪಪ್ರಚಾರ ಮಾಡಿದ್ದಾರೆ. ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಲಾಗಿದೆ. ರಾಜ್ಯ ಸರ್ಕಾರ ಪುರಾವೆಯೇ ಇಲ್ಲದೇ ಯಾರೋ ಅನಾಮಿಕ ದಾಖಲೆ ರಹಿತ ಹೇಳಿಕೆ ನೀಡಿದರೂ ಎಸ್‌ಐಟಿ ರಚನೆ ಮಾಡಿದೆ. ರಾಜ್ಯದ ಕಾಂಗ್ರೆಸ್‌ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಆಗಿದೆ. ಹಿಂದೂಗಳ ಧಾರ್ಮಿಕ ಶ್ರದ್ಧಾಕೇಂದ್ರದ ಕುರಿತು ಷಡ್ಯಂತ್ರ ನಡೆಸಿದ ಕಾಣದ ಕೈಗಳು ಯಾರು? ಇವರ ಬಗ್ಗೆ ತನಿಖೆ ನಡೆಸಬೇಕು. ಧರ್ಮಸ್ಥಳ ಕುರಿತು ಷಡ್ಯಂತ್ರ ನಡೆಸಿದವರ ಬಗ್ಗೆ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತಹಸೀಲ್ದಾರ ಕಚೇರಿ ಮೂಲಕ ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ ಅವರಿಗೆ ಮನವಿ ರವಾನಿಸಲಾಯಿತು. ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್‌. ರಾಘವೇಂದ್ರ, ಮಂಡಳ ಅಧ್ಯಕ್ಷ ಶಂಕರ್ ಮೇಟಿ, ನಗರಸಭೆ ಅಧ್ಯಕ್ಷ ರೂಪೇಶ್‌ಕುಮಾರ, ಮುಖಂಡರಾದ ಅಶೋಕ್‌ ಜೀರೆ, ಕಿಚಿಡಿ ಕೊಟ್ರೇಶ್, ರೇವಣ ಸಿದ್ದಪ್ಪ, ಮಧುರ ಚನ್ನ ಶಾಸ್ತ್ರಿ, ನಟರಾಜ್, ಎ.ಎಂ. ಬಸವರಾಜ್, ರೂಪೇಶ್ ಕುಮಾರ್, ರಮೇಶ್ ಗುಪ್ತ, ಗೌಳಿ ಬಸವರಾಜ್, ಗೌಳಿ ರುದ್ರಪ್ಪ, ಉಮಾದೇವಿ, ಪೂರ್ಣಿಮಾ, ರೇಣುಕಮ್ಮ, ಅನುರಾಧ, ತಿರುಮಲ ಸೇರಿದಂತೆ ಆರ್‌ಎಸ್ಎಸ್ ಮುಖಂಡರು, ಹಿಂದೂಪರ ಸಂಘಟಕರು ಸೇರಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

PREV

Recommended Stories

ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!