ಕಾಂಗ್ರೆಸ್‌ನಿಂದ ಬಿಜೆಪಿ ಮೇಲೆ ಸುಳ್ಳು ಪ್ರಚಾರ

KannadaprabhaNewsNetwork |  
Published : Apr 13, 2024, 01:02 AM ISTUpdated : Apr 13, 2024, 01:03 AM IST
ಸ್ಪಷ್ಟ ನಾಯಕತ್ವವಿಲ್ಲದ ಕಾಂಗ್ರೇಸ್‌ನಿಂದ ಬಿಜೆಪಿ ಮೇಲೆ ಸುಳ್ಳು ಪ್ರಚಾರ-ನೂರೊಂದುಶೆಟ್ಟಿ | Kannada Prabha

ಸಾರಾಂಶ

ಇನ್ನು ವಿಧಾನಸಭಾ ಚುನಾವಣಾ ಗುಂಗಿನಿಂದ ಹೊರ ಬರದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಪ್ರಧಾನಿ ಮೋದಿ ಮೇಲೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಡಿ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರಇನ್ನು ವಿಧಾನಸಭಾ ಚುನಾವಣಾ ಗುಂಗಿನಿಂದ ಹೊರ ಬರದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಪ್ರಧಾನಿ ಮೋದಿ ಮೇಲೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಡಿ ಆರೋಪಿಸಿದರು.ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿಯಾ ಕೂಟದಲ್ಲಿ ನಾಯಕತ್ವದ ಸ್ಪಷ್ಟತೆಯೇ ಇಲ್ಲ, ರಾಹುಲ್‌ಗಾಂಧಿ ನಾಯಕತ್ವ ಸಂಪೂರ್ಣ ವಿಫಲವಾಗಿದೆ, ಆದ್ದರಿಂದ ರಾಜ್ಯ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಪ್ರಧಾನಿ ಮೋದಿ ಮೇಲೆ ಇಲ್ಲಸಲ್ಲದ ಸುಳ್ಳು ಪ್ರಚಾರ ಮಾಡಿ, ಕೇಂದ್ರ ಸರ್ಕಾರದ ಅನುದಾನದ ಬಗ್ಗೆ ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸಿ, ಬೆಂಬಲ ಗಳಿಸಬಹುದೆಂಬ ಭ್ರಮೆಯಲ್ಲಿ ಇದ್ದಾರೆ ಎಂದರು.ಪ್ರಧಾನಿ ಮೋದಿಯವರ ೧೦ ವರ್ಷದ ಆಡಳಿತ ಮತ್ತು ವಿಕಸಿತ ಭಾರತದ ಆಧಾರದ ಮೇಲೆ ಈ ಬಾರಿ ಎನ್‌ಡಿಎ ಚುನಾವಣೆ ಎದುರಿಸುತ್ತಿದ್ದರೆ, ಭ್ರಷ್ಟರ ಕೂಟವಾದ ಇಂಡಿಯಾ ಕೂಟ ಸುಳ್ಳಿನ ಆಧಾರದ ಮೇಲೆ ಚುನಾವಣೆ ಎದುರಿಸುತ್ತಿದೆ. ಮತದಾರರು ಪ್ರಬುದ್ಧರಿದ್ದು, ಮೂರನೇ ಬಾರಿ ಮೋದಿಯವರನ್ನು ಪ್ರಧಾನಿ ಮಾಡಲು ತಯಾರಿಯಾಗಿದ್ದಾರೆ, ಇದನ್ನು ಮನಗಂಡು ಹತಾಶರಾಗಿರುವ ಕಾಂಗ್ರೆಸ್ ನಾಯಕರು ಬರೀ ಸುಳ್ಳುಗಳನ್ನು ಹೇಳುತ್ತಾ ಪ್ರಚಾರ ಮಾಡುತ್ತಿದ್ದಾರೆ ಎಂದರು.ಬಿಜೆಪಿ ಸಂವಿಧಾನ ಬದಲಾಯಿಸುತ್ತಾರೆ, ಪ್ರಜಾಪ್ರಭುತ್ವಕ್ಕೆ ಅಪಾಯ ಎಂದೆಲ್ಲಾ ಸುಳ್ಳು ಹೇಳುತ್ತಿರುವ ಕಾಂಗ್ರೆಸ್ ನಾಯಕರಿಗೆ ಕಳೆದ ೧೦ ವರ್ಷದಲ್ಲಿ ಸಂವಿಧಾನಡಿಯಲ್ಲಿ ಕೆಲಸ ನಿರ್ವಹಿಸಿ, ಜಗತ್ತು ಮೆಚ್ಚುವಂತಹ ಆಡಳಿತವನ್ನು ಮೋದಿ ಮಾಡಿದ್ದಾರೆ ಎಂದರು.ಮೋದಿ ಅವರು ಭ್ರಷ್ಟಾಚಾರಿಗಳನ್ನು ಬಗ್ಗು ಬಡಿಯುತ್ತಿದ್ದಾರೆ. ಕಾಂಗ್ರೆಸ್‌ನವರು ಸ್ವಾರ್ಥಕ್ಕಾಗಿ ದೇಶ ವಿಭಜನೆ ಮನಸ್ಥಿತಿಗೆ ಹೋಗಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ ಯಶಸ್ವಿಯಾಗುತ್ತದೆ. ಮತದಾರರು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಿಗೆ ಮರುಳಾಗಿ ಮತ ಹಾಕಿದರೆ ದೇಶ ಅಧೋಗತಿಗೆ ಹೋಗಲಿದೆ ಎಂದರು.೧೫ ಲಕ್ಷ ಪ್ರತಿಯೊಬ್ಬರ ಖಾತೆಗೆ ಹಾಕುತ್ತೇವೆ ಅಂತ ಮೋದಿಯವರು ಎಲ್ಲೂ ಹೇಳಿಲ್ಲ, ಯಾವುದೆ ವಿಡಿಯೋ ತುಣುಕು ಇದ್ದರೆ ಕೊಡಲಿ, ಪದೇ ಪದೇ ಅದೇ ಸುಳ್ಳನ್ನು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಕಳೆದ ೧೦ ವರ್ಷಗಳ ಅವಧಿಯಲ್ಲಿ ದೇಶದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳಾಗಿವೆ. ಸದೃಢ ಭಾರತಕ್ಕೆ, ಆರ್ಥಿಕ ಪ್ರಗತಿಗೆ ಹಾಗೂ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.ಬಿಜೆಪಿ ಜಿಲ್ಲಾ ವಕ್ತಾರ ಕಾಡಹಳ್ಳಿ ಶಿವರುದ್ರಸ್ವಾಮಿ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳು ಬಡವರ, ರೈತರ, ಮಹಿಳೆಯುರ, ಯುವಕರ ಪರವಾಗಿದ್ದು ಯಾವುದೇ ಜಾತಿಬೇಧ, ಧರ್ಮಬೇಧವಿಲ್ಲದೆ ಲಕ್ಷಾಂತರ ಮಂದಿ ಯೋಜನೆಗಳ ಫಲಾನುಭವಿಯಾಗಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಹ ವಕ್ತಾರ ಎನ್. ಮಂಜುನಾಥ್, ಮಾಧ್ಯಮ ಸಹ ಸಂಚಾಲಕ ಅಶ್ವಿನ್ ಇದ್ದರು.

PREV

Recommended Stories

ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''