ತುಮಕೂರು: ಸಾಲ ಬಾಧೆ ತಾಳಲಾರದೆ ಒಂದೇ ಕುಟುಂಬದ ಐದು ಮಂದಿ ಆತ್ಮಹತ್ಯೆಗೆ ಘಟನೆ ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ.
ಮೂಲತಃ ಶಿರಾ ತಾಲೂಕಿನ ಲಕ್ಕನಹಳ್ಳಿಯವರು.ಇವರು ಕಳೆದ ನಾಲ್ಕು ತಿಂಗಳ ಹಿಂದೆ ತುಮಕೂರು ನಗರದ ಸದಾಶಿವನಗರದ 3ನೇ ಕ್ರಾಸ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ 2 ಪುಟಗಳ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಸಾಯುವುದಕ್ಕೂ ಮುನ್ನ ವಿಡಿಯೋ ಮಾಡಿದ್ದಾರೆ.
ನಗರದ ಮೆಳೇಕೋಟೆಯಲ್ಲಿ ಇವರು ಕಬಾಬು ಅಂಗಡಿ ನಡೆಸುತ್ತಿದ್ದರು. ಸ್ಥಳಕ್ಕೆ ಎಸ್ಪಿ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು , ನಮಗೆ ರಾತ್ರಿ 7.30 ಕರೆ ಬಂದಿತ್ತು. ಒಂದೇ ಮನೆಯಲ್ಲಿ ಐವರು ನೇಣಿಗೆ ಶರಣಾಗಿದ್ದಾರೆಂದು ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ಬಂದಿದ್ದೆವು. ಇಬ್ಬರ ದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಇದ್ದವು. ಮೂವರ ಮಕ್ಕಳ ಮೃತ ದೇಹ ಹಾಸಿಗೆಯಲ್ಲಿತ್ತು ಎಂದರು.ಸಾಯುವ ಮುನ್ನ ಸಂಬಂಧಿಕರಿಗೆ ವಿಡಿಯೋ ಮೆಸೇಜ್ ಕಳುಹಿಸಲಾಗಿದೆ. ಅದರಲ್ಲಿರುವ ಮಾಹಿತಿಯನ್ನು ಪರಿಶೀಲನೆ ನಡೆಸುತ್ತಿದ್ದು ವಿಡಿಯೋ ಹಾಗೂ ಡೆತ್ ನೋಟ್ ಆಧಾರದ ಮೇಲೆ ದೂರು ದಾಖಲಿಸಿಕೊಳ್ಳುತ್ತಿದ್ದೇವೆ. ಕಳೆದ ಒಂದು ವರ್ಷದಿಂದ ಸದಾಶಿವನಗರದಲ್ಲಿ ವಾಸವಿದ್ದರು. ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೆ ಈಗ ಆತ್ಮಹತ್ಯೆ ಮಾಡಿಕೊಂಡ ಮನೆಗೆ ಬಾಡಿಗೆಗೆ ಬಂದಿದ್ದರು ಎನ್ನಲಾಗಿದೆ.
ಇಲ್ಲಿ ಸಾಲ ಕಟ್ಟೋದು ಹೆಚ್ಚಾಗಿದೆ. ಬಾಡಿಗೆ ಮನೆಗೆ ನಲವತ್ತೈದು ಸಾವಿರ ಅಡ್ವಾನ್ಸ್ ಕೊಟ್ಟಿದ್ದೀವಿ. ಮೂರು ತಿಂಗಳ ಬಾಡಿಗೆ ಕೊಡೋದು ಬಾಕಿಯಿದೆ. ಉಳಿದ ಹಣವನ್ನ ನಮ್ಮ ದೊಡ್ಡಮ್ಮನಿಗೆ ವಾಪಾಸ್ ಕೊಡಿ. ಮನೆ ವಸ್ತುಗಳನ್ನು ನೀವು ತಗೋಳಿ ಎಂದು ಪತ್ರ ಬರೆದಿದ್ದಾರೆ.
ಮತ್ತರ್ ಮಾಮನಿಗೆ ಕೊನೆಯ ನಮಸ್ಕಾರಗಳು. ನಮಗೆ ಊಟ ಅಕ್ಕಿ ಕೊಟ್ಟಿದ್ದೀರಾ, ಅದಕ್ಕೆ ನಿಮಗೇ ಮೆಳೇಕೋಟೆಯಲ್ಲಿರೋ ಅಂಗಡಿಯಲ್ಲಿರೋ ಸಾಮಾನುಗಳು, ಮತ್ತೆ ಅದರಲ್ಲಿ ಐದು ಸಾವಿರ ಇಟ್ಟಿದ್ದೀವಿ. ಒಂದು ತಿಂಗಳು ಬಾಡಿಗೆ 2 ಸಾವಿರ ರುಪಾಯಿ ಕೊಡಬೇಕು. ಸದಾಶಿವನಗರದ ಮೂರನೇ ಬಿ ಮುಖ್ಯರಸ್ತೆಯಲ್ಲಿರುವ, ನಾವು ವಾಸಿಸುವ ಮನೆಯ ಕೆಳಗಿನವರು ನಮಗೆ ತುಂಬಾ ಕಾಟ ಕೊಟ್ಟಿದ್ದೀರಾ. ನಮಗೆ ಯಾರಾದರೂ ಸಹಾಯ ಮಾಡಿದರೆ ಅವರಿಗೆ ಇಲ್ಲಸಲ್ಲದನ್ನ ಹೇಳುತ್ತಿದ್ದರು. ನಾವು ಅವರು ಹೇಳಿದಂತೆ ಕೇಳಬೇಕಿತ್ತು, ಇಲ್ಲವಾದರೆ ಅವರು ನಮ್ಮ ಜೊತೆ ಜಗಳ ಮಾಡುತ್ತಿದ್ದರು. ಶಬಾನಾ ನಮಗೆ ಏಳು ತಿಂಗಳ ಹಣ ಕೊಟ್ಟಿರಲಿಲ್ಲ. ಹಣ ಕೇಳಿದ್ದಕ್ಕೆ ನಮ್ಮ ಮೇಲೆ ವಿಷ ಕಾರುತ್ತಿದ್ದಾಳೆ. ನಮ್ಮ ಸಾವಿಗೆ ಐದು ಜನರೇ ಕಾರಣ. ನಮ್ಮ ಮನೆಯ ಕೆಳಗಿನ ಖಲಂದರ್, ಅವನ ಮಗಳು ಸಾನಿಯಾ, ಅವನ ಹಿರಿಯ ಮಗ, ಮಹಡಿ ಮನೆಯ ಶಬಾನಾ, ಮತ್ತು ಅವಳ ಮಗಳು ಸಾನಿಯಾ ಈ ಎಲ್ಲರೂ ನಮ್ಮ ಸಾವಿಗೆ ಕಾರಣ. ನಮ್ಮ ಸಾವಿಗೆ ಗೃಹ ಮಂತ್ರಿ ಸರ್ ಕಾನೂನು ರೀತಿ ಶಿಕ್ಷೆ ಕೊಡಬೇಕು ಎಂದು ಬೇಡಿಕೊಳ್ತೀನಿ.