ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಸಮೀಪದ ಕಾರ್ಕಹಳ್ಳಿ ಶ್ರೀಬಸವೇಶ್ವರ ದೇವಾಲಯದಲ್ಲಿ ಯುವ ಮುಖಂಡ ಕಾರ್ಕಹಳ್ಳಿ ಸ್ವರೂಪ್ ಬಸವೇಗೌಡ ಆಯೋಜಿಸಿದ್ದ ಪೂಜಾ ಕಾರ್ಯಕ್ರಮದಲ್ಲಿ ಸೇರಿದಂತೆ ಗ್ರಾಪಂ ಸದಸ್ಯರು ಹಾಗೂ ಮಧು ಜಿ.ಮಾದೇಗೌಡ ಅಭಿಮಾನಿಗಳು ಭಾಗವಹಿಸಿದ್ದರು.
ಈ ವೇಳೆ ತಾಪಂ ಮಾಜಿ ಸದಸ್ಯ ಬಿ.ಗಿರೀಶ್ ಮಾತನಾಡಿ, ಮಾಜಿ ಸಂಸದ ಜಿ.ಮಾದೇಗೌಡರು ಹಳ್ಳಿಗಾಡಿನ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಕೆ.ಎಂ.ದೊಡ್ಡಿಯ ಕುಗ್ರಾಮದಲ್ಲಿ ಶಿಕ್ಷಣ ಸಂಸ್ಥೆ ತೆರೆದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದು, ಅವರ ಹಾದಿಯಲ್ಲೆ ಮಧು ಜಿ.ಮಾದೇಗೌಡ ಅವರು ಸಾಗುತ್ತ ಸಾವಿರಾರು ಜನರಿಗೆ ಉದ್ಯೋಗ ಸೃಷ್ಟಿಸಿದ್ದಾರೆ ಎಂದರು.ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶಕ್ಕೆ ತೆರಳಿ ದುಬಾರಿ ಹಣ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ಅರಿತು ಹಲವು ಹೊಸ ಕೋರ್ಸ್‌ಗಳನ್ನು ಆರಂಭಿಸಿ ಶಿಕ್ಷಣ ನೀಡುತಿದ್ದಾರೆ. ಮುಂದಿನ ವರ್ಷದಲ್ಲಿ ಮೆಡಿಕಲ್ ಕಾಲೇಜು ಆರಂಭಿಸಲು ತಯಾರಿ ನಡೆಸಿದ್ದಾರೆ ಎಂದರು.
ಬಳಿಕ ಚಾಂಷುಗರ್ಸ್ ಕಾರ್ಖಾನೆ ಆವರಣದಲ್ಲಿರುವ ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ ಜಿ.ಮಾದೇಗೌಡ ತಾಂತ್ರಿಕ ಮಹಾ ವಿದ್ಯಾಲಯದ ಸಿಬ್ಬಂದಿ ಪ್ರಾಂಶುಪಾಲ ಡಾ.ಬಿ.ಆರ್. ಚಂದನ್ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಶ್ರೀವೆಂಕಟೇಶ್ವರ ದೇವಾಲದಲ್ಲಿ ಭಾರತಿ ಪದವಿ ಪೂರ್ವ ಕಾಲೇಜಿನ ಸಿಬ್ಬಂದಿ ಆಡಳಿತಾಧಿಕಾರಿ ಜವರೇಗೌಡ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಾಲಯ ಸೇವಾ ಸಮಿತಿ ಅಧ್ಯಕ್ಷ ಪೂಜೂರಿ ವೆಂಕಟೇಗೌಡ, ಕಾರ್ಯಾಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ನಾಗಪ್ಪ, ವೆಂಕಟೇಶ್ ಸೇರಿದಂತೆ ಮತ್ತಿತರಿದ್ದರು.
ಮಾಜಿ ಸಂಸದ ಜಿ.ಮಾದೇಗೌಡ ಸ್ಥಾಪಿಸಿದ ಹನುಮಂತನಗರದ ಶ್ರೀ ಆತ್ಮಲಿಂಗೇಶ್ವರ ದೇವಾಲಯದಲ್ಲೂ ಸಹ ಭಾರತೀ ವಸತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಿಬ್ಬಂದಿ ವಿಶೇಷ ಪೂಜೆ ಸಲ್ಲಿಸಿದರು.