ಸಂಸದ ಬಿ.ವೈ. ರಾಘವೇಂದ್ರ ಅವರ ಜನ್ಮದಿನದ ಅಂಗವಾಗಿ ಭಾನುವಾರ ನಗರದ ರವೀಂದ್ರನಗರದಲ್ಲಿರುವ ಶ್ರೀ ಪ್ರಸನ್ನ ಗಣಪತಿ (ಬಲಮುರಿ) ದೇವಸ್ಥಾನದಲ್ಲಿ ಅವರ ಅಭಿಮಾನಿಗಳು, ಹಿತೈಷಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಸಂಸದ ಬಿ.ವೈ. ರಾಘವೇಂದ್ರ ಅವರ ಜನ್ಮದಿನದ ಅಂಗವಾಗಿ ಭಾನುವಾರ ನಗರದ ರವೀಂದ್ರನಗರದಲ್ಲಿರುವ ಶ್ರೀ ಪ್ರಸನ್ನ ಗಣಪತಿ (ಬಲಮುರಿ) ದೇವಸ್ಥಾನದಲ್ಲಿ ಅವರ ಅಭಿಮಾನಿಗಳು, ಹಿತೈಷಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ನೆರವೇರಿಸಿದರು. ಮುಂದಿನ ದಿನಗಳಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಸಚಿವರಾಗಿ ಜವಾಬ್ದಾರಿ ವಹಿಸಿಕೊಳ್ಳಬೇಕು. ಅವರು ಸಾರ್ವಜನಿಕ ಜೀವನದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಇನ್ನಷ್ಟು ಕೊಡುಗೆ ನೀಡುವ ಶಕ್ತಿ ಹಾಗೂ ಅವಕಾಶ ದೊರೆಯಬೇಕು ಎಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸಿದರು.
ದೇಶ ಮತ್ತು ರಾಜ್ಯದ ಅಭಿವೃದ್ಧಿಯಲ್ಲಿ ಅವರು ಮತ್ತಷ್ಟು ಪ್ರಮುಖ ಪಾತ್ರ ವಹಿಸಬೇಕು. ಶಿವಮೊಗ್ಗ ಜಿಲ್ಲೆಗೆ ಹೆಚ್ಚಿನ ಅನುದಾನ, ಕೈಗಾರಿಕೆ, ಉದ್ಯೋಗ, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಜಿಲ್ಲೆಯ ಸಮಗ್ರ ಪ್ರಗತಿಗೆ ಶ್ರಮಿಸಬೇಕು ಎಂದು ಆಶಿಸಿದರು.
ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಸದ ಬಿ.ವೈ. ರಾಘವೇಂದ್ರ ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ರಾಜಕೀಯ ಜೀವನದಲ್ಲಿ ಮತ್ತಷ್ಟು ಯಶಸ್ಸು ದೊರೆಯಲಿ ಎಂದು ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಕೆ ಜಗದೀಶ್, ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಪ್ರಮುಖರಾದ ಎಸ್ ದತ್ತಾತ್ರಿ, ಸಂತೋಷ್ ಬಳ್ಳೆಕೆರೆ, ಅಣ್ಣಪ್ಪ, ಹರಿಕೃಷ್ಣ ಸೇರಿದಂತೆ ಹಲವರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.