ಕನ್ನಡಪ್ರಭ ವಾರ್ತೆ ಭಾರತೀನಗರ
ಭಾರತೀ ಎಜುಕೇಷನ್ ಟ್ರಸ್ಟ್‌ನ ಅಧ್ಯಕ್ಷ ಹಾಗೂ ಶಾಸಕ ಮಧು ಜಿ.ಮಾದೇಗೌಡ ಪ್ರೊ.ಎಸ್.ಜವರೇಗೌಡರನ್ನು ಅಭಿನಂದಿಸಿ ಮಾತನಾಡಿ, ತಮ್ಮ ಸೇವಾವಧಿಯನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಜವರೇಗೌಡರು ಕೆಲಸ ನಿರ್ವಹಿಸಿದ್ದಾರೆ. ಜೊತೆಗೆ ಈ ಸಂಸ್ಥೆಗೆ ಎಲ್ಲರಿಗೂ ಅಚ್ಚುಮೆಚ್ಚಿನ ಪ್ರಾಧ್ಯಾಪಕರಾಗಿದ್ದರು ಎಂದರು.
ಭಾರತೀ ಪದವಿ ಪೂರ್ವ ಕಾಲೇಜಿನಲ್ಲೂ ಪ್ರಾಂಶುಪಾಲರಾಗಿ ಕೆಲಸ ನಿರ್ವಹಿಸಿದ್ದಾರೆ. ನಂತರ ಪದವಿ ಕಾಲೇಜಿನಲ್ಲಿ ಉತ್ತಮ ಪ್ರಾಧ್ಯಾಪಕರೆಂದು ಕರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಆಶಿಸಿದರು.ಪ್ರೊ.ಎಸ್.ಜವರೇಗೌಡ ಮಾತನಾಡಿ, ನನ್ನ ಬದುಕನ್ನು ಕಟ್ಟಿಕೊಳ್ಳುವುದಕ್ಕೆ ದಿ.ಜಿ.ಮಾದೇಗೌಡರು ಕಾರಣೀಭೂತರಾಗಿದ್ದಾರೆ. ಅವರನ್ನು ನನ್ನ ಉಸಿರು ಇರುವವರೆಗೂ ಸ್ಮರಿಸುತ್ತೇನೆ. ಸಂಸ್ಥೆ ಅಧ್ಯಕ್ಷ ಮಧು ಜಿ.ಮಾದೇಗೌಡರು ಸಹ ಸಾಕಷ್ಟು ಬೆಂಬಲ, ಪ್ರೋತ್ಸಾಹವನ್ನು ನೀಡಿದರು ಎಂದರು.
ನಂತರ ನಿವೃತ್ತ ಪ್ರಾಂಶುಪಾಲರು, ಉಪನ್ಯಾಸಕರು, ಪ್ರಾಧ್ಯಾಪಕರು, ಕಾಲೇಜಿನ ಹಿರಿಯ ವಿದ್ಯಾರ್ಥಿಗಳು, ಅಧ್ಯಾಪಕರ -ಅಧ್ಯಾಪಕೇತರರು ಪ್ರೊ.ಎಸ್.ಜವರೇಗೌಡರನ್ನು ಅಭಿನಂದಿಸಿ ಗೌರವಿಸಿದರು.
ಮಂಡ್ಯ:ಮೈಸೂರು ರಂಗಾಯಣವು ರಂಗಶಿಕ್ಷಣ, ರಂಗತರಬೇತಿ. ನಾಟಕಗಳ ಸಿದ್ಧತೆ, ಪ್ರದರ್ಶನ, ರಂಗಶಿಬಿರಗಳು ಹೀಗೆ ಸಂಪೂರ್ಣ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಅಸಕ್ತ ಕಲಾವಿದರು ಅರ್ಜಿ ಸಲ್ಲಿಸಬಹುದು.
ಈ ಹಿಂದೆ ನೀಡಿದ ಪ್ರಕಟಣೆಯಲ್ಲಿ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಆಗಸ್ಟ್ 28ನ್ನು ನಿಗಧಿಗೊಳಿಸಲಾಗಿತ್ತು. ಪ್ರಸ್ತುತ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 5 ರವರೆಗೆ ವಿಸ್ತರಿಸಲಾಗಿದೆ.ಆಸಕ್ತರು ಅರ್ಜಿಯನ್ನು rangayanamysore.karnataka.gov.in pod ಮೂಲಕ ಸಲ್ಲಿಸಿ ಡೌನ್‌ಲೋಡ್ ಮಾಡಿದ ಪ್ರತಿಯನ್ನು ಮೈಸೂರು ರಂಗಾಯಣ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು ಹಾಗೂ ಸೆಪ್ಟೆಂಬರ್ 10 ರಂದು ಸಂದರ್ಶನ ನಡೆಸಲಾಗುವುದು ಎಂದು ಮಂಡ್ಯ ಜಿಲ್ಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.