ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್‌ಗೆ ಬೀಳ್ಕೊಡುಗೆ

KannadaprabhaNewsNetwork |  
Published : Mar 03, 2024, 01:36 AM IST
ಆರ್ಟಿಓ2 | Kannada Prabha

ಸಾರಾಂಶ

ಇದೇ ಸಂದರ್ಭದಲ್ಲಿ ಹೊನ್ನಾವರದ ಸ.ಪ್ರಾ.ಸಾ.ಅಧಿಕಾರಿ ಎಲ್. ಪಿ. ನಾಯಕ್ ಅವರು ಜಿಲ್ಲಾ ಪ್ರಾದೇಶಿಕ ಅಧಿಕಾರಿಯಾಗಿ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಂಡರು.

ನ್ನಡಪ್ರಭ ವಾರ್ತೆ ಉಡುಪಿ

ಸುಮಾರು 32 ವರ್ಷ ಸುದೀರ್ಘವಾಗಿ ಸಾರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್‌ ಪಿ. ಅವರ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಕಚೇರಿಯ ಆವರಣದಲ್ಲಿ ಸಾರಿಗೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಯಿತು.

ಬೀಳ್ಕೊಡುಗೆ ಗೌರವ ಸ್ವೀಕರಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರ ಜೀವನದಲ್ಲಿ ನಿವೃತ್ತಿಯು ಒಂದು ಅನಿವಾರ್ಯ ಕಾಲಘಟ್ಟ, ಯಾವುದೇ ಕಪ್ಪು ಚುಕ್ಕೆ ಇಲ್ಲದೆ ನಿವೃತ್ತಿ ಹೊಂದಿರುವುದು ಸಂತಸದ ವಿಚಾರವಾಗಿದೆ ಎಂದರು.

ಹಿರಿಯ ಅಧಿಕಾರಿಗಳ ಸೂಕ್ತ ಹಾಗೂ ಸಮಯೋಚಿತ ಮಾರ್ಗದರ್ಶನ, ನನ್ನ ಮೇಲೆ ಇಟ್ಟ ಪ್ರೀತಿ ಮತ್ತು ನಂಬಿಕೆಗಳು ಒಟ್ಟಾರೆ ಸಿಂಹಾವಲೋಕನ ಮಾಡಿದಾಗ ನಾನು ಸಾಗಿದ ಹಾದಿಯಲ್ಲಿ ತೃಪ್ತಿಯನ್ನು ಕಂಡುಕೊಂಡಿದ್ದೇನೆ. ನೆಮ್ಮದಿಯ ಬದುಕನ್ನು ಕಟ್ಟಿಕೊಂಡಿದ್ದೇನೆ ಎಂದ ಅವರು, ಸಹೋದ್ಯೋಗಿಗಳು ಸಹಕಾರದಿಂದಾಗಿ ಕೆಲಸವನ್ನು ಸುಗಮವಾಗಿ ನಿರ್ವಹಿಸಲು ಸಾಧ್ಯವಾಯಿತು ಎಂದರು.

ಶಿವಮೊಗ್ಗ ವಿಭಾಗ ಜಂಟಿ ಸಾರಿಗೆ ಆಯುಕ್ತ ಕೆ. ಟಿ. ಹಾಲಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಾ. ಕೃಷ್ಣಪ್ರಸಾದ, ಡಾ. ವಿಜಯೇಂದ್ರ, ಕಿಶನ್ ಹೆಗ್ಡೆ, ಮಂಗಳೂರು ಕಚೇರಿಯ ಮುಖ್ಯಸ್ಥ ಶ್ರೀಧರ ಮಲ್ಲಾಡ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ವಕೀಲ ಸಂತೋಷ ಐತಾಳ, ಪತ್ರಕರ್ತ ರಾಮಕೃಷ್ಣ ಹೇರಳೆ, ಟೂರಿಸ್ಟ್ ಟ್ಯಾಕ್ಸಿ ಮಾಲಕರ ಸಂಘದ ಅಧ್ಯಕ್ಷ ರಮೇಶ ಕೋಟ್ಯಾನ್, ಅಧೀಕ್ಷಕಿ ಪಮಿತಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸಂತೋಷ ಶೆಟ್ಟಿ, ಹಿಮೋವಾನಿ ಕಾರ್ಯಕ್ರಮ ನಿರೂಪಿಸಿದರು.ಇದೇ ಸಂದರ್ಭದಲ್ಲಿ ಹೊನ್ನಾವರದ ಸ.ಪ್ರಾ.ಸಾ.ಅಧಿಕಾರಿ ಎಲ್. ಪಿ. ನಾಯಕ್ ಅವರು ಜಿಲ್ಲಾ ಪ್ರಾದೇಶಿಕ ಅಧಿಕಾರಿಯಾಗಿ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಂಡರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ