ಸಾಲಬಾಧೆಯಿಂದ ರೈತ ದಂಪತಿ ಆತ್ಮಹತ್ಯೆ: ಕುಟುಂಬಕ್ಕೆ ನಟ ವಿನೋದ್ ರಾಜ್ ಸಾಂತ್ವನ

KannadaprabhaNewsNetwork |  
Published : Aug 04, 2026, 01:30 AM IST
3ಕೆಎಂಎನ್ ಡಿ23 | Kannada Prabha

ಸಾರಾಂಶ

ಈ ವೇಳೆ ನಟ ವಿನೋದ್ ರಾಜ್ ಅವರು, ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬಾರದು ಎಂದು ಧೈರ್ಯ ತುಂಬಿದರು. ಕುಟುಂಬದ ಆರ್ಥಿಕ ಹಾಗೂ ಸಾಮಾಜಿಕ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡ ನಟ ವಿನೋದ್ ರಾಜ್ ಅವರು ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದರು.

ಕನ್ನಡಪ್ರಭ ವಾರ್ತೆ ಮಂಡ್ಯ

ತಾಲೂಕಿನ ಬಿ.ಹಟ್ನ ಗ್ರಾಮದಲ್ಲಿ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ ರೈತ ದಂಪತಿಯ ಕುಟುಂಬಸ್ಥರಿಗೆ ನಟ ವಿನೋದ್ ರಾಜ್ ಸಾಂತ್ವನ ಹೇಳಿದರು.

ಗ್ರಾಮದ ನಿವಾಸಿಗಳಾದ ಮೀಸೆ ಪುಟ್ಟಸ್ವಾಮಿ (58) ಹಾಗೂ ಪತ್ನಿ ನಾಗಮ್ಮ (55) ಸಾಲದ ಹೊರೆ ಮತ್ತು ಕುಟುಂಬದ ಸಂಕಷ್ಟದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದರು. ಈ ಹಿನ್ನೆಲೆಯಲ್ಲಿ ನಟ ವಿನೋದ್ ರಾಜ್ ಅವರು ಮೃತರ ನಿವಾಸಕ್ಕೆ ತೆರಳಿ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಅವರ ದುಃಖದಲ್ಲಿ ಭಾಗಿಯಾದರು.

ಈ ವೇಳೆ ನಟ ವಿನೋದ್ ರಾಜ್ ಅವರು, ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬಾರದು ಎಂದು ಧೈರ್ಯ ತುಂಬಿದರು. ಕುಟುಂಬದ ಆರ್ಥಿಕ ಹಾಗೂ ಸಾಮಾಜಿಕ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡ ನಟ ವಿನೋದ್ ರಾಜ್ ಅವರು ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದರು.

ಕುಟುಂಬದವರನ್ನು ಕಳೆದುಕೊಳ್ಳುವ ನೋವು ಎಷ್ಟು ದೊಡ್ಡದು ಎಂಬುದು ನನಗೆ ಗೊತ್ತಿದೆ. ನನ್ನ ತಾಯಿಯನ್ನು ಕಳೆದುಕೊಂಡ ನಾನು ಆ ನೋವನ್ನು ಅನುಭವಿಸಿದ್ದೇನೆ. ಅಂತಹ ದುಃಖ ಮತ್ತೊಂದು ಕುಟುಂಬಕ್ಕೆ ಬರಬಾರದು ಎಂದು ಭಾವುಕರಾದರು.

ಸಂಕಷ್ಟ ಬಂದಾಗ ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುವುದು ಎಂದಿಗೂ ಸರಿಯಲ್ಲ. ಎಷ್ಟೇ ಕಷ್ಟ ಬಂದರೂ ನಿಮ್ಮ ಕುಟುಂಬವನ್ನು ಬಿಟ್ಟು ಹೋಗಬೇಡಿ ಎಂದು ಸಲಹೆ ನೀಡಿದರು. ಸಂಕಷ್ಟದಲ್ಲಿರುವ ರೈತ ಕುಟುಂಬಗಳಿಗೆ ಸಮಾಜವೂ ಹಾಗೂ ಸರ್ಕಾರವೂ ನೆರವಾಗಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಬಳಿಕ ಜಿಲ್ಲಾಧಿಕಾರಿ ಡಾ.ಕುಮಾರ ಅವರನ್ನು ಭೇಟಿ ಮಾಡಿ, ಮೃತ ರೈತ ದಂಪತಿ ಕುಟುಂಬಕ್ಕೆ ಸರ್ಕಾರದಿಂದ ದೊರೆಯಬೇಕಾದ ಪರಿಹಾರ ಮತ್ತು ಇತರೆ ಸೌಲಭ್ಯಗಳನ್ನು ಶೀಘ್ರಗತಿಯಲ್ಲಿ ಮಂಜೂರು ಮಾಡುವಂತೆ ಮನವಿ ಮಾಡಿದರು. ಅಗತ್ಯ ನೆರವು ತ್ವರಿತವಾಗಿ ಕುಟುಂಬಕ್ಕೆ ತಲುಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಕಾಂಗ್ರೆಸ್ ಮುಖಂಡ ದೀಪು, ಅಲ್ಪಸಂಖ್ಯಾತರ ಮುಖಂಡ ಸಮೀರ್, ನಾಗೇಂದ್ರ, ರಾಜೇಶ್ ಹಾಗೂ ಗ್ರಾಮದ ಪ್ರಮುಖ ಮುಖಂಡರು ಸಹ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೆಲುವನಾರಾಯಣಸ್ವಾಮಿಗೆ ಶ್ರೀಕೃಷ್ಣರಾಜಮುಡಿ ಕಿರೀಟಧಾರಣ ಮಹೋತ್ಸವ
ಚಲುವರಾಯಸ್ವಾಮಿ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ, ಸಂಭ್ರಮ, ಸಡಗರ, ವಿಜಯೋತ್ಸವMinisterial post for Chaluvarayaswamy once again; celebration, jubilation, and victory festivities.