ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌

KannadaprabhaNewsNetwork |  
Published : Nov 08, 2025, 01:15 AM IST
7ಜಿಪಿಟಿ4ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ವೇಳೆಯಲ್ಲಿ ಹುಲಿ ಪೋಟೋ ತೆಗೆದಿರುವುದು.(ಸಂಗ್ರಹ ಚಿತ್ರ) | Kannada Prabha

ಸಾರಾಂಶ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಶುಕ್ರವಾರ ಹುಲಿ ದಾಳಿಗೆ ವ್ಯಕ್ತಿಯೋರ್ವ ಬಲಿಯಾದ ಹಿನ್ನೆಲೆ ನಾಗರಹೊಳೆ ಮತ್ತು ಬಂಡೀಪುರದ ಸಫಾರಿ ಹಾಗೂ ಮಾನವ-ವನ್ಯಜೀವಿ ಸಂಘರ್ಷದ ಪ್ರದೇಶದಲ್ಲಿ ಚಾರಣವನ್ನೂ ಶುಕ್ರವಾರದಿಂದಲೇ ಬಂದ್ ಮಾಡಲು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಆದೇಶ ಹೊರಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಶುಕ್ರವಾರ ಹುಲಿ ದಾಳಿಗೆ ವ್ಯಕ್ತಿಯೋರ್ವ ಬಲಿಯಾದ ಹಿನ್ನೆಲೆ ನಾಗರಹೊಳೆ ಮತ್ತು ಬಂಡೀಪುರದ ಸಫಾರಿ ಹಾಗೂ ಮಾನವ-ವನ್ಯಜೀವಿ ಸಂಘರ್ಷದ ಪ್ರದೇಶದಲ್ಲಿ ಚಾರಣವನ್ನೂ ಶುಕ್ರವಾರದಿಂದಲೇ ಬಂದ್ ಮಾಡಲು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಆದೇಶ ಹೊರಡಿಸಿದ್ದಾರೆ.

ಸಫಾರಿಯ ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತವಾಗಿ ಸೂಚನೆ ನೀಡಿದ್ದಾರೆ. ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಶುಕ್ರವಾರ ಬೆಳಗ್ಗೆ ಚೌಡಯ್ಯ ನಾಯ್ಕ (35) ಹುಲಿ ದಾಳಿಯಿಂದ ಮೃತಪಟ್ಟಿರುವುದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮುಂದಿನ ಆದೇಶದವರೆಗೆ ಬಂಡೀಪುರ ಹಾಗೂ ನಾಗರಹೊಳೆ(ಎರಡೂ ಕಡೆ) ಸಫಾರಿ ಬಂದ್ ಮಾಡಿ, ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯನ್ನು ಹುಲಿ ಸೆರೆ ಕಾರ್ಯಾಚರಣೆ ಬಳಸಿಕೊಳ್ಳುವಂತೆ ನಿರ್ದೇಶನವನ್ನೂ ನೀಡಿದ್ದಾರೆ. ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹುಲಿ ದಾಳಿಯಿಂದ ಮೂರು ಅಮೂಲ್ಯ ಜೀವ ಹಾನಿ ಆಗಿರುವುದು ಅತೀವ ನೋವು ತಂದಿದೆ ಎಂದು ತಿಳಿಸಿದ್ದಾರೆ.

ಹುಲಿ ದಾಳಿಯ ನಂತರ ಕಳೆದ 27 ರಂದು ಬಂಡೀಪುರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಹಾಗೂ ಕಳೆದ ನ.2 ರಂದು ಚಾಮರಾಜನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮತ್ತು ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಶಾಸಕರು ಸಮ್ಮುಖದಲ್ಲಿ ರೈತರು, ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಹುಲಿ ಸೆರೆಗೆ ಎಲ್ಲ ಸಾಧ್ಯ ಕ್ರಮ ಕೈಗೊಳ್ಳುವಂತೆ ಸೂಚಿಸುವುದರ ಜೊತೆಗೆ ಸಫಾರಿ ಬಂದ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರೂ ಮತ್ತೊಂದು ದಾರುಣ ಘಟನೆ ಸಂಭವಿಸಿರುವುದು ಆಘಾತ ತಂದಿದೆ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರಕ್ಕಿಂಗ್ (ಚಾರಣ) ಸ್ಥಗಿತಗೊಳಿಸಲು ಹಾಗೂ ಬಂಡೀಪುರ,ನಾಗರಹೊಳೆ ಸಫಾರಿಯ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಹಾಗೂ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪದೆ ಪದೇ ದಾಳಿ ಮಾಡುತ್ತಿರುವ ಹುಲಿ ಹಿಡಿಯಲು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.

PREV

Recommended Stories

ಬ್ರಾಹ್ಮಣ ಸಮುದಾಯಕ್ಕೆ ಸೌಲಭ್ಯ ನೀಡಲು ಬದ್ಧ : ಸಚಿವ ದಿನೇಶ್‌ ಗುಂಡೂರಾವ್‌
ಬೆಂಗಳೂರು ನಗರದ 6 ಆರ್‌ಟಿಒ ಕಚೇರಿ ಮೇಲೆ ದಾಳಿ: ಹಲವು ಅಕ್ರಮ ಪತ್ತೆ