ತಂಬಾಕಿಗೆ ಸೂಕ್ತ ಬೆಲೆ ಸಿಗದ ಕಾರಣ ಮನನೊಂದು ರೈತ ಆತ್ಮಹತ್ಯೆ

KannadaprabhaNewsNetwork |  
Published : May 13, 2026, 12:15 AM IST
53 | Kannada Prabha

ಸಾರಾಂಶ

ಈತ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಮೂರು ಲಕ್ಷ ಹಾಗೂ ಖಾಸಗಿಯಾಗಿ ಆರು ಲಕ್ಷ ಒಟ್ಟು ಒಂಬತ್ತು ಲಕ್ಷ ಸಾಲ

ಕನ್ನಡಪ್ರಭ ವಾರ್ತೆ ರಾವಂದೂರುತಂಬಾಕಿಗೆ ಸೂಕ್ತ ಬೆಲೆ ಸಿಗದ ಕಾರಣ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಪಿರಿಯಾಪಟ್ಟಣ ತಾಲೂಕು ತಮ್ಮಡಹಳ್ಳಿ ಗ್ರಾಮದ ರೈತ ನಾಗೇಗೌಡ (61) ಭಾನುವಾರ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದು, ತಕ್ಷಣ ಇವರನ್ನು ನೋಡಿದ ಮನೆಯವರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಒರ್ವ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.

ಈತ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಮೂರು ಲಕ್ಷ ಹಾಗೂ ಖಾಸಗಿಯಾಗಿ ಆರು ಲಕ್ಷ ಒಟ್ಟು ಒಂಬತ್ತು ಲಕ್ಷ ಸಾಲ ಮಾಡಿದ್ದು, ತಾನು ಬೆಳೆದ ತಂಬಾಕು ಬೆಳೆಗೆ ಸೂಕ್ತ ಬೆಲೆ ಸಿಗದ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ದೂರು ನೀಡಿದ್ದಾರೆ. ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಧನೆಯಷ್ಟೇ ಅಲ್ಲ, ಸಾರ್ಥಕ ಸೇವೆಯ ಸಮರ್ಪಣೆ
ಸಾಂಸ್ಕೃತಿಕ ಮನಸ್ಸು ಇಲ್ಲದಿರುವುದೇ ಯುದ್ಧಕ್ಕೆ ಕಾರಣ