ಎರಡನೇ ದಿನಕ್ಕೆ ಕಾಲಿಟ್ಟ ರೈತ ಪ್ರತಿಭಟನೆ

KannadaprabhaNewsNetwork |  
Published : Nov 23, 2025, 01:15 AM IST
ಸಿಕೆಬಿ-4   ಕೈಗಾರಿಕಾ ಹೆಸರಿನಲ್ಲಿ ಭೂ ಸ್ವಾಧೀನ ಮಾಡಿಕೊಳ್ಳುವುದನ್ನು ವಿರೋಧಿಸಿ ಜಿಲ್ಲಾಡಳಿತ ಭವನ ಆವರಣದ ಮುಂದೆ ರೈತ ಸಂಘದಿಂದ ಅನಿರ್ಧಿಷ್ಟಾವಧಿ ಸತ್ಯಾಗ್ರಹ ಎರಡನೇ ದಿನವೂ ಮುಂದುವರೆದಿತ್ | Kannada Prabha

ಸಾರಾಂಶ

ಜಿಲ್ಲೆಯ ಜಂಗಮಕೋಟೆ ಹೋಬಳಿಯ ಫಲವತ್ತಾದ ಕೃಷಿಭೂಮಿಯನ್ನು ರೈತರಿಂದ ಕಿತ್ತುಕೊಂಡು, ಬಹುರಾಷ್ಟ್ರೀಯ ಕಂಪನಿಗಳಿಗೆ ಕೊಡುವ ಹುನ್ನಾರವನ್ನು ಕಳೆದ ಒಂದುವರೆ ವರ್ಷದಿಂದ ಖಂಡಿಸುತ್ತಲೇ ಬರಲಾಗಿದೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ರೈತರನ್ನು ಎದುರು ಹಾಕಿಕೊಂಡು ಯಾವ ಸರ್ಕಾರಗಳೂ ಇತಿಹಾಸದಲ್ಲಿ ಅಧಿಕಾರದಲ್ಲಿ ಮುಂದುವರೆದ ಉದಾಹರಣೆಗಳಿಲ್ಲ ಎಂಬುದನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಭೈರೇಗೌಡ ಕಿಡಿಕಾರಿದರು.ನಗರಹೊರವಲಯ ಜಿಲ್ಲಾಡಳಿತ ಭವನದ ಎದುರು ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಶುಕ್ರವಾರದಿಂದ ಪ್ರಾರಂಭವಾಗಿರುವ ಅನಿರ್ಧಿಷ್ಟಾವಧಿ ಸತ್ಯಾಗ್ರಹ ಧರಣಿಯ ಎರಡನೇ ದಿನವಾದ ಶನಿವಾರ ಮಾತನಾಡಿ, ಜಿಲ್ಲೆಯ ಜಂಗಮಕೋಟೆ ಹೋಬಳಿಯ ಫಲವತ್ತಾದ ಕೃಷಿಭೂಮಿಯನ್ನು ರೈತರಿಂದ ಕಿತ್ತುಕೊಂಡು, ಬಹುರಾಷ್ಟ್ರೀಯ ಕಂಪನಿಗಳಿಗೆ ಕೊಡುವ ಹುನ್ನಾರವನ್ನು ಕಳೆದ ಒಂದುವರೆ ವರ್ಷದಿಂದ ಖಂಡಿಸುತ್ತಲೇ ಬರಲಾಗಿದೆ. ಕೆಐಎಡಿಬಿ ಮೂಲಕ 2,800ಕ್ಕೂ ಅಧಿಕ ಎಕರೆ ಕೃಷಿಭೂಮಿಯನ್ನು ವಶಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದು, ಇದನ್ನು ಕೂಡಲೇ ವಾಪಸ್ಸು ಪಡೆಯಬೇಕು, ಬಂಜರು ಭೂಮಿಯಲ್ಲಿ ಕೈಗಾರಿಕೆ ಮಾಡಲಿ ಎಂದು ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದೇವೆ ಎಂದರು.ಶಿಡ್ಲಘಟ್ಟ ತಾಲೂಕಿನ ಅಮರಾವತಿಯಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ನಿರ್ಮಾಣ ಮಾಡಲು ಭೂಮಿ ಪಡೆಯಲಾಗಿದೆ. ಇದಕ್ಕಾಗಿ ಇಲ್ಲಿನ ರೈತರನ್ನು ಒಕ್ಕಲೆಬ್ಬಿಸಿ ಭೂಮಿ ವಶಪಡಿಸಿಕೊಂಡು ಮೂರ್ನಾಲ್ಕು ವರ್ಷ ಕಳೆದಿದೆ. ಇಲ್ಲಿ ಭೂಮಿ ಕಳೆದುಕೊಂಡವರಿಗೆ ಪರ್ಯಾವವಾಗಿ ಭೂಮಿ ಕೊಡುವ ಬಗ್ಗೆ ವಾಗ್ದಾನ ಮಾಡಲಾಗಿತ್ತು. ಪರಿಹಾರವನ್ನು ಕೂಡ ಸಕಾಲದಲ್ಲಿ ಕೊಡುವ ಮಾತಾಗಿತ್ತು.ಈಕೆಲಸ ಈವರೆಗೆ ಆಗಿಲ್ಲ.ಜಿಲ್ಲಾಡಳಿತ ಮತ್ತು ಸರಕಾರ ಕೂಡಲೇ ಈ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರೈತಸಂಘವು ಸಕಾಲದಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಪೆರೇಸಂದ್ರದ ಜೋಳದ ವ್ಯಾಪಾರಿ ಮತ್ತು ರೈತರಾಗಿರುವ ರಾಮಕೃಷ್ಣಪ್ಪ ಅವರಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಕಡೆಯವರಿಂದ ಆಗಿರುವ ಸುಮಾರು 2 ಕೋಟಿಗೂ ಹೆಚ್ಚು ಅನ್ಯಾಯ ಮಾಡಿದ್ದಾರೆ. ಕೂಡಲೇ ಜೋಳದ ಕಿಟ್ಟಣ್ಣ ಅವರಿಗೆ ಆಗಿರುವ ಮೋಸಕ್ಕೆ ನ್ಯಾಯ ಒದಗಿಸುವವರೆಗ ಹೋರಾಟವನ್ನು ಹಿಂದೆಪಡೆಯುವ ಮಾತೇಯಿಲ್ಲ ಎಂದರು.ಈ ವೇಳೆ ಜಿಲ್ಲಾಧ್ಯಕ್ಷ ಎಚ್.ವಿ. ರಾಮನಾಥ, ಜೋಳದ ಕಿಟ್ಟಣ್ಣ, ತಾದೂರು ಮಂಜುನಾಥ್, ವೇಣುಗೋಪಾಲ್, ಹಿತ್ತಲಹಳ್ಳಿ ರಮೇಶ್, ಬಸವಾಪಟ್ಟಣ ಭೈರೇಗೌಡ, ನಾಗೇಶ್,ರಾಮಾಂಜಿನಪ್ಪ, ಮತ್ತಿತರರು ಇದ್ದರು.ಸಿಕೆಬಿ-4 ಕೈಗಾರಿಕಾ ಹೆಸರಿನಲ್ಲಿ ಭೂ ಸ್ವಾಧೀನ ಮಾಡಿಕೊಳ್ಳುವುದನ್ನು ವಿರೋಧಿಸಿ ಜಿಲ್ಲಾಡಳಿತ ಭವನ ಆವರಣದ ಮುಂದೆ ರೈತ ಸಂಘದಿಂದ ಅನಿರ್ಧಿಷ್ಟಾವಧಿ ಸತ್ಯಾಗ್ರಹ ಎರಡನೇ ದಿನವೂ ಮುಂದುವರೆದಿತ್ತು

PREV

Recommended Stories

ತಂತ್ರಜ್ಞಾನವನ್ನು ಒಳ್ಳೆಯದಕ್ಕೆ ಬಳಸಿ: ಶಾಸಕ ಅಶೋಕ ಪಟ್ಟಣ
ಸೈಕ್ಲಿಂಗ್‌ ಪಟುಗಳಿಗೆ ಸಂವಿಧಾನ ಪಾಠ ಮಾಡಿದ ಸಚಿವ ಸಂತೋಷ ಲಾಡ್