ಕನ್ನಡಪ್ರಭವಾರ್ತೆ ಬಸವನಬಾಗೇವಾಡಿಜಗತ್ತಿಗೆ ಅನ್ನ ನೀಡುವ ರೈತ, ಗಡಿ ಕಾಯುವ ಸೈನಿಕ ಎರಡು ಕಣ್ಣುಗಳಿದ್ದಂತೆ. ಇವರು ಇಲ್ಲದಿದ್ದರೆ ಜನರು ನೆಮ್ಮದಿಯಿಂದಿರಲು ಸಾಧ್ಯವಿಲ್ಲ ಎಂದು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಸೈನಿಕರ ತ್ಯಾಗ, ಬಲಿದಾನ ದೇಶದ ಜನರು ಮರೆಯುವಂತಿಲ್ಲ. ಈ ಯುದ್ಧದಲ್ಲಿ ಅನೇಕ ಸೈನಿಕರು ಹುತಾತ್ಮರಾಗಿದ್ದಾರೆ. ಇವರ ಸೇವೆ ಸ್ಮರಣೀಯ. ರಜತಮಹೋತ್ಸವ ಆಚರಣೆ ಮಾಡಿರುವುದು ಶ್ಲಾಘನೀಯ. ಇಲ್ಲಿನ ಸಂಘವು ಸಲ್ಲಿಸಿದ ಬೇಡಿಕೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.ನಂದಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಸತ್ಯಜೀತ ಪಾಟೀಲ ಮಾತನಾಡಿ, ಕಾರ್ಗಿಲ್ ಯುದ್ಧದ ಸ್ಮರಣೆ ಮಾಡಿಕೊಂಡರೆ ಪ್ರತಿಯೊಬ್ಬರಲ್ಲಿ ದೇಶಾಭಿಮಾನದ ಸ್ಪೂರ್ತಿ ಮೂಡುತ್ತದೆ. ಇದಕ್ಕಾಗಿ ನಾವು ಸೈನಿಕರಿಗೆ ಅತ್ಯಾಧುನಿಕ ಶಸ್ತ್ರಾಸ್ತಗಳನ್ನು ನೀಡುವುದು ಅಗತ್ಯವಿದೆ. ಸೈನಿಕರ ಸೇವೆಗೆ ಎಲ್ಲರೂ ಗೌರವಿಸಬೇಕೆಂದರು.ತಳೇವಾಡ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಸಂಗಮೇಶ ಪೂಜಾರಿ, ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಮಾಜಿ ಸೈನಿಕರ ಹಾಗೂ ಅರೆಸೈನಿಕರ ಸಂಘದ ಅಧ್ಯಕ್ಷ ಬಿ.ಜಿ.ಬಿರಾದಾರ,ಬಿ.ಕೆ.ಕಲ್ಲೂರ, ಸಂಗನಗೌಡ ಚಿಕ್ಕೊಂಡ ಮಾತನಾಡಿದರು.ರಾಜ್ಯ ಸಹಕಾರಿ ಮಹಾಮಂಡಳ ನಿರ್ದೇಶಕ ಐ.ಸಿ.ಪಟ್ಟಣಶೆಟ್ಟಿ,ಲೋಕನಾಥ ಅಗರವಾಲ, ಬಸಣ್ಣ ದೇಸಾಯಿ, ಶಿವಾನಂದ ಮಂಗಾನವರ, ಎಂ.ಜಿ.ಆದಿಗೊಂಡ, ಎಸ್.ಕೆ.ಸೋಮನಕಟ್ಟಿ, ಎಫ್.ಡಿ.ಮೇಟಿ, ಮುರಗೇಶ ನಾಯ್ಕೋಡಿ, ಶಿವಾನಂದ ಇಂಡಿ, ಪ್ರಕಾಶ ಡೆಂಗಿ, ಸಿದ್ರಾಮ ಶೇಗುಣಸಿ, ಅಶೋಕ ಚಲವಾದಿ ಇತರರು ಇದ್ದರು. ಎಸ್.ಐ.ಬಿರಾದಾರ ಪ್ರಾಸ್ತವಿಕವಾಗಿ ಮಾತನಾಡಿದರು. ಎಚ್.ಬಿ.ಬಾರಿಕಾಯಿ ಸ್ವಾಗತಿಸಿದರು. ಎಸ್.ಪಿ.ಮಡಿಕೇಶ್ವರ, ಕೊಟ್ರೇಶ ಹೆಗ್ಡಾಳ, ಬಿ.ವ್ಹಿ.ಚಕ್ರಮನಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸೈನಿಕರನ್ನು ಸನ್ಮಾನಿಸಲಾಯಿತು.