ಕನ್ನಡಪ್ರಭ ವಾರ್ತೆ ಅರಕಲಗೂಡು
ಮೃತ ಕೇಶವಯ್ಯ ಅವರ ಮನೆಗೆ ಬುಧವಾರ ತೆರಳಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಮಾತನಾಡಿ, ತಾಲೂಕಿನಲ್ಲಿ ಇದು ಎರಡನೇ ಪ್ರಕರಣವಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕಿರುಕುಳ ನೀಡುವುದು ನಿಂತಿಲ್ಲ, ರೈತರು ಮರ್ಯಾದೆಗೆ ಅಂಜಿ ಸಾವಿಗೆ ಶರಣಾಗುವ ದುಸ್ಥಿತಿ ಎದುರಾಗಿದೆ ಎಂದು ಅರೋಪಿಸಿದರು.
ಮೃತ ಕೇಶವಯ್ಯ ಅವರು ಬ್ಯಾಂಕ್ ಮತ್ತು ಮೈಕ್ರೋ ಫೈನಾನ್ಸ್ ಕಂಪನಿಗಳಲ್ಲಿ ಮಾಡಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು, ತಪ್ಪಿತಸ್ಥರ ವಿರುದ್ದ ಪ್ರಕರಣ ದಾಖಲಿಸಿ ಕಾನೂನುಕ್ರಮ ಕೈಗೊಳ್ಳಬೇಕು, ಫೈನಾನ್ಸ್‌ನವರು ಕಿರುಕುಳ ನೀಡುವುದನ್ನು ತಡೆಗಟ್ಟಲು ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ರೈತ ಸಂಘ ಉಗ್ರ ಹೋರಾಟಕ್ಕೆ ಮುಂದಾಗಲಿದೆ. ಕಿರುಕುಳಕ್ಕೆ ಒಳಗಾದವರು ದೂರು ನೀಡಿದರೆ ರೈತ ಸಂಘ ಅವರ ರಕ್ಷಣೆಗೆ ನಿಲ್ಲಲಿದೆ ಎಂದರು. ಮುಖಂಡ ಹೊಂಬೆಗೌಡ ಇತರರು ಇದ್ದರು.