ಭತ್ತ ಕಟಾವು ಯಂತ್ರ ಮಾಲೀಕರಿಂದ ರೈತರ ಸುಲಿಗೆ ಆರೋಪ

KannadaprabhaNewsNetwork |  
Published : Oct 11, 2024, 11:46 PM IST
ರೈತ8 | Kannada Prabha

ಸಾರಾಂಶ

ಜಿಲ್ಲೆಯಾದ್ಯಂತ ಭತ್ತದ ಬೆಳೆ ಕಟಾವಿಗೆ ಆರಂಭವಾಗಿದ್ದು ಭತ್ತದ ಕಟಾವು ಯಂತ್ರದ ಮಾಲೀಕರು ಹಾಗೂ ದಲ್ಲಾಳಿಗಳು, ನಿಯಮಬಾಹಿರವಾಗಿ ಪ್ರತಿ ಗಂಟೆಗೆ 2400 ರು.ಗೂ ಮಿಕ್ಕಿ ಹಣ ವಸೂಲಿ ಮಾಡಿ ರೈತರನ್ನು ಸುಲಿಗೆ ಮಾಡಲಾಗುತ್ತಿದ್ದಾರೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಆರೋಪಿಸಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ಜಿಲ್ಲೆಯಾದ್ಯಂತ ಭತ್ತದ ಬೆಳೆ ಕಟಾವಿಗೆ ಆರಂಭವಾಗಿದ್ದು ಭತ್ತದ ಕಟಾವು ಯಂತ್ರದ ಮಾಲೀಕರು ಹಾಗೂ ದಲ್ಲಾಳಿಗಳು, ನಿಯಮಬಾಹಿರವಾಗಿ ಪ್ರತಿ ಗಂಟೆಗೆ 2400 ರು.ಗೂ ಮಿಕ್ಕಿ ಹಣ ವಸೂಲಿ ಮಾಡಿ ರೈತರನ್ನು ಸುಲಿಗೆ ಮಾಡಲಾಗುತ್ತಿದ್ದಾರೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಆರೋಪಿಸಿದೆ.

ಈ ಬಗ್ಗೆ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಲನ ಸಮಿತಿ ನಿಯೋಗವು ಮಂಗಳವಾರ ಅಪರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ನೀಡಿತು.

ಕಷ್ಟದಲ್ಲಿ ಭತ್ತ ಬೆಳೆದ ರೈತರಿಗೆ ಜಿಲ್ಲೆಗಳಿಗೆ ಬರುವ ಕಟಾವು ಯಂತ್ರಗಳ ವಸೂಲಿಯಿಂದ ಸಂಕಷ್ಟಕ್ಕೀಡಾಗಿದ್ದಾರೆ. ಜಿಲ್ಲಾಧಿಕಾರಿ ನಿಗದಿತ ದರ ವಿಧಿಸಿ ಪ್ರಕಟಣೆ ಹೊರಡಿಸಬೇಕು. ಅಲ್ಲದೆ ರೈತರ ಹಾಗೂ ಕಟಾವು ಯಂತ್ರದ ಮಾಲಕರು ಹಾಗೂ ಕ್ರಷಿ ಇಲಾಖೆ ಜೊತೆ ಜಂಟಿ ಸಭೆ ನಡೆಸಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಮನವಿ ಮೂಲಕ ಒತ್ತಾಯಿಸಲಾಯಿತು.

ಖರೀದಿ ಕೇಂದ್ರಕ್ಕೆ ಆಗ್ರಹ:

ಬಹುತೇಕ ರೈತರಿಗೆ ಅನುಕೂಲವಾಗುವ ಭತ್ತದ ಖರೀದಿ ಕೇಂದ್ರಗಳನ್ನು ಅಕ್ಟೋಬರ್ ತಿಂಗಳಲ್ಲೇ ಬೆಂಬಲ ಬೆಲೆ ಘೋಷಿಸಿ ಆರಂಭಿಸಬೇಕು ಎಂದೂ ಮನವಿಯಲ್ಲಿ ಆಗ್ರಹಿಸಿದರು.

ನಿಯೋಗದಲ್ಲಿ ಜಿಲ್ಲಾ ಸಂಚಾಲಕ ಚಂದ್ರಶೇಖರ ವಿ., ರೈತರಾದ ಅನಿಲ್ ಬಾರ್ಕೂರು, ಗಣೇಶ್ ಪೂಜಾರಿ, ಜಲಂಧರ್, ಕಾರ್ಮಿಕ ಮುಖಂಡರಾದ ಸುರೇಶ್ ಕಲ್ಲಾಗರ, ಶಶಿಧರ ಗೊಲ್ಲ, ಕೃಷಿಕೂಲಿಕಾರ ಮುಖಂಡ ಕವಿರಾಜ್, ಎಸ್. ಮೋಹನ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ