ರೈತರ ಕೃಷಿ ಸಾಲಮನ್ನಾ, ವಿವಿಧ ಹಕ್ಕೊತ್ತಾಯ

KannadaprabhaNewsNetwork |  
Published : Sep 29, 2026, 01:45 AM IST
ರೈತರ ಕೃಷಿಸಾಲ ಮನ್ನಾ ಸೇರಿದಂತೆ ವಿವಿಧ ಹಕ್ಕೋತ್ತಾಯಗಳ ಈಡೇರಿಕೆಗೆ ರೈತರ ಪ್ರತಿಭಟನೆ | Kannada Prabha

ಸಾರಾಂಶ

ರಾಜ್ಯದಲ್ಲಿ ಭೀಕರ ಬರ ಆವರಿಸಿರುವುದರಿಂದ ರೈತರ ಕೃಷಿ ಸಾಲ ಮನ್ನಾ ಆಗಬೇಕು, ಕೇಂದ್ರ ಮತ್ತು ರಾಜ್ಯ ಸರ್ಕಾರ ಶೇ. ೫೦ರ ಅನುಪಾತದಲ್ಲಿ ಸಾಲ ಮನ್ನಾ ಮಾಡಬೇಕು ಸೇರಿದಂತೆ ವಿವಿಧ ಹಕ್ಕೊತ್ತಾಯಗಳಿಗೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತಸಂಘದ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನಾ ಧರಣಿ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ರಾಜ್ಯದಲ್ಲಿ ಭೀಕರ ಬರ ಆವರಿಸಿರುವುದರಿಂದ ರೈತರ ಕೃಷಿ ಸಾಲ ಮನ್ನಾ ಆಗಬೇಕು, ಕೇಂದ್ರ ಮತ್ತು ರಾಜ್ಯ ಸರ್ಕಾರ ಶೇ. ೫೦ರ ಅನುಪಾತದಲ್ಲಿ ಸಾಲ ಮನ್ನಾ ಮಾಡಬೇಕು ಸೇರಿದಂತೆ ವಿವಿಧ ಹಕ್ಕೊತ್ತಾಯಗಳಿಗೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತಸಂಘದ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನಾ ಧರಣಿ ನಡೆಸಲಾಯಿತು.

ನಗರದ ಜಿಲ್ಲಾ ಸಂಘದ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಕೆಲಕಾಲ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ರಾಜ್ಯ ಸರ್ಕಾರವೇ ಹೇಳುವಂತೆ ಕಳೆದ ೧೪೦ ವರ್ಷದ ನಂತರ ಬೀಕರ ಬರಗಾಲ ರಾಜ್ಯದಲ್ಲಿ ಉದ್ಭವಿಸಿದೆ. ಕರೆ-ಕಟ್ಟೆ ಜಲಮೂಲಗಳು ಬತ್ತಿವೆ. ರೈತರ ಹಾಕಿದ್ದ ಫಸಲುಗಳು ಕರಕಲಾಗಿ ಸಂಪೂರ್ಣ ನಷ್ಟವಾಗಿವೆ. ಅಂತರ್ಜಲ ಬತ್ತಿಹೋಗಿ ತೋಟಗಾರಿಕೆ ಫಸಲು ಒಣಗಿವೆ. ಜಾನುವಾರುಗಳು ಮೇವು ಮತ್ತು ನೀರಿಲ್ಲದೆ ಬಡಕಲಾಗಿವೆ ಎಂದರು.

ಜನರು ಜೀವನೋಪಾಯಕ್ಕಾಗಿ ಉದ್ಯೋಗ ಅರಸಿ ಪಟ್ಟಣಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಇಷ್ಟೆಲ್ಲಾ ಸಂಕಷ್ಟಗಳು ಎದುರಾಗಿದ್ದರೂ ರಾಜ್ಯ ಸರ್ಕಾರ ೧೦೧ ತಾಲ್ಲೂಕುಗಳನ್ನು ಬರ ಎಂದು ಘೋಷಿಸಿ ಮತ್ತ? ತಾಲ್ಲೂಕುಗಳನ್ನು ಈ ಪಟ್ಟಿಗೆ ಸೇರಿಸುವುದಾಗಿ ಕಾಲ ನೂಕುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ತೋರಿ ಅಮಾನೀಯವಾಗಿ ನಡೆದುಕೊಳ್ಳುತ್ತಿವೆ ಎಂದು ಆರೋಪಿಸಿದರು.

ರೈತರ ಸಾಲ ವಸೂಲಾತಿಗೆ ಸರ್ಕಾರ ತಡೆ ಒಡ್ಡಬೇಕು, ಕೃಷಿಗೆ ಪ್ರಥಮ ಆಧ್ಯತೆ ನೀಡುವ ಮೂಲಕ ಸರ್ಕಾರ ಒಪ್ಪಿಕೊಂಡಿರುವಂತೆ ಕನಿಷ್ಟ ೭ ಗಂಟೆಗಳ ಕಾಲ ವಿದ್ಯುತ್ ಅನ್ನು ಕೃಷಿ ಪಂಪ್‌ಸೆಟ್‌ಗಳಿಗೆ ಸರಬರಾಜು ಮಾಡಬೇಕು, ಕೆರೆ ಕಟ್ಟೆಗಳಿಗೆ ಸಂಪೂರ್ಣವಾಗಿ ನೀರು ತುಂಬಿಸಬೇಕು ಎಂದರು.

ಬೆಳೆ ನಷ್ಟಕ್ಕೆ ವೈಜ್ಞಾನಿಕ ಪರಿಹಾರ ನೀಡಬೇಕು, ವಿಮಾ ಕಂಪನಿಗಳು ಸಂಪೂರ್ಣ ಬೆಳೆ ನಷ್ಟ ಪರಿಹಾರವನ್ನು ರೈತರ ಖಾತೆಗೆ ಜಮಾ ಮಾಡಬೇಕು, ವಿಶೇಷ ಅಧಿವೇಶನಲ್ಲಿ ಚರ್ಚೆ ಮಾಡಬೇಕು ಎಂದು ಆಗ್ರಹಿಸಿದರು.

ವಾಸಸ್ಥಳದ ಹತ್ತಿರದಲ್ಲೇ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು, ಕೃಷಿಕರಿಗೆ ಮಾರಕವಾಗಿರುವ ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು,

ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯಾಧ್ಯಕ್ಷ ಎ.ಎಂ. ಮಹೇಶ್‌ಪ್ರಭು, ರಾಜ್ಯ ವಿಭಾಗೀಯ ಕಾರ್ಯದರ್ಶಿ ಸಿ.ಸಿದ್ದರಾಜು, ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ,

ಯುವ ಘಟಕದ ಸಂಚಾಲಕ ಯಶವಂತ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಭಾಸ್ಕರ್, ಚಿನ್ನಸ್ವಾಮಿ ಗೌಂಡರ್, ಕನಕಮ್ಮ, ತಾಲ್ಲೂಕು ಅಧ್ಯಕ್ಷ ಮಲ್ಲಣ್ಣ, ಹನೂರು ತಾಲ್ಲೂಕು ಗೌರವಾಧ್ಯಕ್ಷ ವೇಲುಸ್ವಾಮಿ, ಕೊಳ್ಳೇಗಾಲ ತಾಲ್ಲೂಕು ಉಪಾಧ್ಯಕ್ಷ ಎನ್.ಬೆಟ್ಟೇಗೌಡ, ಗುಂಡ್ಲುಪೇಟೆ ತಾಲ್ಲೂಕು ಉಪಾಧ್ಯಕ್ಷ ಚಂದ್ರು, ಎಂ.ಕುಮಾರ್ ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಾವರಿ ಯೋಜನೆ ಜಾರಿಗೆ ಸರ್ಕಾರ ಬದ್ಧ
ಕೆರೆಗಳ ಸಂರಕ್ಷಣೆ, ಅಭಿವೃದ್ಧಿಗೆ ಅಗತ್ಯ ಕ್ರಮ