ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಸೆಸ್ಕ್ ಉಪ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿ, ವಿದ್ಯುತ್ ತಂತಿ ಮರ, ಮನೆಗಳಿಗೆ ತಗಲುತ್ತಿದ್ದರೂ ಅಧಿಕಾರಿಗಳು ಸೂಕ್ತ ಕ್ರಮವಹಿಸಿಲ್ಲ. ಮನೆ ನೆಲಸಮಗೊಳಿಸಿದ್ದರೂ ನಮಗೆ ಎರಡೆರಡು ವಿದ್ಯುತ್ ಬಿಲ್‌ಗಳನ್ನು ಕಳಿಸಲಾಗುತ್ತಿದೆ. ಈ ಕುರಿತಂತೆ ಅರ್ಜಿ ನೀಡಿದರೂ ಅಧಿಕಾರಿಗಳಿಂದ ಯಾವುದೇ ಕ್ರಮ ಇಲ್ಲ. ಹೀಗಾಗಿ ಈ ಬಗ್ಗೆ ಕ್ರಮ ವಹಿಸುವಂತೆ ಆಗ್ರಹಿಸಿದರು.
ಟಿ.ಎಸ್.ಛತ್ರ ಗ್ರಾಮದ ರೈತ ನಿಂಗೇಗೌಡ ಅವರು, ತಮ್ಮ ಜಮೀನಿನಲ್ಲಿ ವಿದ್ಯುತ್ ತಂತಿ ಜೋತು ಬಿದ್ದು ಹಲವಾರು ತಿಂಗಳುಗಳೇ ಕಳೆದಿದ್ದರೂ ಸೆಸ್ಕ್ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿ ವರ್ಗದವರು ಯಾವುದೇ ಸೂಕ್ತ ಕ್ರಮ ವಹಿಸಿಲ್ಲ. ರೈತರ ಸಮಸ್ಯೆಗಳಿಗೆ ಸೆಸ್ಕ್ ಯಾವೊಬ್ಬ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.ಗ್ಯಾರಂಟಿ ಯೋಜನೆ ಅನುಷ್ಠಾನ ಮಾಜಿ ನಿರ್ದೇಶಕ ಎನ್.ಕೃಷ್ಣೇಗೌಡ ಮಾತನಾಡಿ, ವಿದ್ಯುತ್ ಬಿಲ್ ಪಾವತಿಸಿಲ್ಲ ಎಂಬ ನೆಪವೊಡ್ಡಿ ನಮ್ಮ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ನಂತರ ದೂರವಾಣಿ ಮೂಲಕ ತಿಳಿಸಿ ಎರಡು ಗಂಟೆ ಕಳೆದರೂ ಅಧಿಕಾರಿಗಳಾಗಲೀ, ಸಿಬ್ಬಂದಿ ಸರಿಪಡಿಸುವ ಗೋಜಿಗೆ ಹೋಗಲಿಲ್ಲ. ಕನಿಷ್ಠ ಸ್ಪಂದನೆ ಮಾಡಲಿಲ್ಲ. ಇನ್ನೂ ಸಾಮಾನ್ಯ ಜನರ ಸಮಸ್ಯೆ ಯಾವ ರೀತಿ ಸರಿಪಡಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಭೆಯಲ್ಲಿ ಸಾರ್ವಜನಿಕರು ಹಾಗೂ ರೈತರು ಚರ್ಚಿಸಿದ ಎಲ್ಲಾ ಸಮಸ್ಯೆಗಳನ್ನು ಆದಷ್ಟು ಶೀಘ್ರವೇ ಪರಿಹರಿಸಲು ಅಗತ್ಯ ಕ್ರಮ ವಹಿಸುವುದಾಗಿ ಸೆಸ್ಕ್ ಇಇ ವಿನುತಾ ಭರವಸೆ ನೀಡಿದರು. ಸಭೆಯಲ್ಲಿ ಸೆಸ್ಕ್ ಎಇಇ ರವಿಕುಮಾರ್, ಎಇಗಳಾದ ಸುಷ್ಮಾ, ಜೆಇಗಳಾದ ಭಾಗ್ಯಲಕ್ಷ್ಮಿ, ಎಂ.ಬಿ.ಚಲುವರಾಜು ಸೇರಿದಂತೆ ಇತರರಿದ್ದರು.