ನೈರ್ಮಲ್ಯ ಸವಾಲುಗಳ ಬಗ್ಗೆ ಜಾಗೃತಿ ಅಗತ್ಯ-ಶ್ರೀಶೈಲಜಾ

KannadaprabhaNewsNetwork |  
Published : Mar 27, 2026, 02:00 AM IST
ಹಾವೇರಿ ತಾಲೂಕಿನ ಕಳ್ಳಿಹಾಳ ಗ್ರಾಮದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಸತಿಯುತ ಸರ್ಕಾರಿ ಪ್ರಥಮ ದರ್ಜೆ ವಿದ್ಯಾಲಯದಲ್ಲಿ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶರಾದ ಶ್ರೀಶೈಲಜಾ ಎಚ್.ವಿ. ಅವರು ಮಾತನಾಡಿದರು. | Kannada Prabha

ಸಾರಾಂಶ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಮಹತ್ವಾಕಾಂಕ್ಷಿ ಯೋಜನೆಗಳಾದ ನಮ್ಮೂರು ನಮ್ಮ ಕೆರೆ ಹಾಗೂ ವಾತ್ಸಲ್ಯ ಮನೆ ನಿರ್ಮಾಣದಿಂದ ಕೃಷಿಕರು ಹಾಗೂ ಬಡವರಿಗೆ ಉಪಯೋಗವಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಶಿವರಾಯಪ್ರಭು ಹೇಳಿದರು.

ಹಾವೇರಿ: ಇಂದು ಫ್ಲೋರೈಡ್‌ಯುಕ್ತ ನೀರು ಸೇವಿಸಿ ಅನೇಕ ಜನರು ಕಾಯಿಲೆಗೆ ತುತ್ತಾಗುತ್ತಿದ್ದು, ಸಿಹಿ ನೀರು ಮತ್ತು ನೈರ್ಮಲ್ಯ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಎಚ್.ವಿ. ಅವರು ಹೇಳಿದರು.

ತಾಲೂಕಿನ ಕಳ್ಳಿಹಾಳ ಗ್ರಾಮದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಸತಿಯುತ ಸರ್ಕಾರಿ ಪ್ರಥಮ ದರ್ಜೆ ವಿದ್ಯಾಲಯದಲ್ಲಿ ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಸತಿಯುತ ಸರ್ಕಾರಿ ಪ್ರಥಮ ದರ್ಜೆ ವಿದ್ಯಾಲಯ ಸಹಯೋಗದಲ್ಲಿ ವಿಶ್ವ ಜಲ ದಿನಾಚರಣೆ ಅಂಗವಾಗಿ ಪ್ರಾಣಿ, ಪಕ್ಷಿಗಳಿಗೆ ನೀರಿನ ಮಹತ್ವದ (ನೀರು ನೀಡಿ ಜೀವ ಉಳಿಸಿ ಅಭಿಯಾನದಲ್ಲಿ ತೊಡಗಿಸಿಕೊಳ್ಳಲು) ಕುರಿತು, ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಕಾಯ್ದೆ, ವರದಕ್ಷಿಣೆ ನಿಷೇಧ, ಮಾದಕ ವಸ್ತುಗಳ ಅಕ್ರಮ ಸಾಗಾಣಿಕೆ ಹಾಗೂ ಘರ ಘರ ಮೇ ನ್ಯಾಯ ಕೀ ಜಾಗೃತಿ ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಾಲ್ಯ ವಿವಾಹ ನಿಷೇಧಿಸಿದ್ದರೂ ಈಗಲೂ ಬಾಲ್ಯವಿವಾಹಗಳು ಕೆಲಕಡೆಗಳಲ್ಲಿ ನಡೆಯುತ್ತಿರುವುದು ವಿಷಾದಕರ ಸಂಗತಿ. ಈ ಕುರಿತು ಜಾಗೃತಿ ಮೂಡಿಸಬೇಕು ಹಾಗೂ ಬಾಲ್ಯವಿವಾಹ ನಿಷೇಧ, ಪೋಕ್ಸೋ ಕಾಯ್ದೆ, ವರದಕ್ಷಿಣೆ ನಿಷೇಧ ಕಾಯ್ದೆ ಹಾಗೂ ಶಿಕ್ಷೆ ಪ್ರಮಾಣ ತಿಳಿದುಕೊಳ್ಳಬೇಕು, ಇತರರಿಗೂ ತಿಳಿವಳಿಕೆ ನೀಡಬೇಕು. ಆಗ ಮಾತ್ರ ಇಂತಹ ಪ್ರಕರಣಗಳು ಕಡಿಮೆಯಾಗಲು ಸಾಧ್ಯ. ಹಾಗಾಗಿ ಮನೆ ಮನೆಯಲ್ಲೂ ನ್ಯಾಯದ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.

ಬೇಸಿಗೆಯ ತೀವ್ರ ಬಿಸಿಲಿನ ಹಿನ್ನೆಲೆಯಲ್ಲಿ ಪ್ರಾಣಿ-ಪಕ್ಷಗಳಿಗೆ ಮನೆಯ ತಾರಸಿ ಅಥವಾ ಮರದ ನೆರಳಿನಲ್ಲಿ ನೀರು ಹಾಗೂ ಕಾಳುಗಳನ್ನು ಇಡಬೇಕು ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯಕ ಕಾನೂನು ನೆರವು ಅಭಿರಕ್ಷಕ ಎನ್.ಎನ್. ಡಿಳ್ಳೆಪ್ಪನವರ ಅವರು ಬೇಸಿಗೆಯಲ್ಲಿ ಪ್ರಾಣಿ-ಪಕ್ಷಿಗಳಿಗೆ ನೀರಿನ ಮಹತ್ವ, ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಕಾಯ್ದೆ, ವರದಕ್ಷಿಣೆ ನಿಷೇಧ, ಮಾದಕ ವಸ್ತುಗಳ ಅಕ್ರಮ ಸಾಗಾಣೆ ಹಾಗೂ ಘರ ಘರ ಮೇ ನ್ಯಾಯ ಕೀ ಜಾಗೃತಿ ಕುರಿತು ಉಪನ್ಯಾಸ ನೀಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಸತಿಯುತ ಸರ್ಕಾರಿ ಪ್ರಥಮ ದರ್ಜೆ ವಿದ್ಯಾಲಯದ ಉಪನ್ಯಾಸಕ ಡಾ. ಡಿ.ಟಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಬಾಲ್ಯ ವಿವಾಹ, ಪೋಕ್ಸೋ ಪ್ರಕರಣಗಳು ಕಂಡುಬಂದಲ್ಲಿ ಅಥವಾ ಮಕ್ಕಳಿಗೆ ತೊಂದರೆಯಾದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098ಗೆ ಕರೆ ಮಾಡಬೇಕು. ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಹಾಗೂ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಶ್ರೀಶೈಲಜಾ ಎಚ್.ವಿ. ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಲ ಬಳಿಯುವ ಪದ್ಧತಿ ನಿಷೇಧ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಿ-ಜಿಲ್ಲಾಧಿಕಾರಿ
ಅಕ್ರಮ ಸಂಬಂಧವೇ ಮಾಜಿ ಶಾಸಕರ ಮಗನ ಕೊಲೆಗೆ ಕಾರಣ