ಇಂದು ಸಂಪೂರ್ಣ ಕರ್ನಾಟಕ ಬಂದ್‌ಗೆ ರೈತ ಸಂಘ ಕರೆ!

KannadaprabhaNewsNetwork |  
Published : Oct 31, 2026, 02:45 AM IST
30ಞವಚವ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಮುಗಳಖೋಡಅಕ್ಟೋಬರ್ 31ರ ಶನಿವಾರ ರಾಷ್ಟ್ರೀಯ ಹೆದ್ದಾರಿ-48ರ ಹತ್ತರಗಿ ಟೋಲ್ ಬಂದ್‌ಗೆ ಕರೆ ನೀಡಲಾಗಿತ್ತು. ಆದರೆ, ಜಿಲ್ಲಾಧಿಕಾರಿಗಳು ನಿರ್ಬಂಧಾಜ್ಞೆ ಹೊರಡಿಸಿದ ಹಿನ್ನೆಲೆಯಲ್ಲಿ ಹೋರಾಟದ ಸ್ವರೂಪ ಬದಲಿಸಿದ್ದು, ಅಂದು ಸಂಪೂರ್ಣ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಶಶಿಕಾಂತ ಪಡಸಲಗಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮುಗಳಖೋಡ

ಅಕ್ಟೋಬರ್ 31ರ ಶನಿವಾರ ರಾಷ್ಟ್ರೀಯ ಹೆದ್ದಾರಿ-48ರ ಹತ್ತರಗಿ ಟೋಲ್ ಬಂದ್‌ಗೆ ಕರೆ ನೀಡಲಾಗಿತ್ತು. ಆದರೆ, ಜಿಲ್ಲಾಧಿಕಾರಿಗಳು ನಿರ್ಬಂಧಾಜ್ಞೆ ಹೊರಡಿಸಿದ ಹಿನ್ನೆಲೆಯಲ್ಲಿ ಹೋರಾಟದ ಸ್ವರೂಪ ಬದಲಿಸಿದ್ದು, ಅಂದು ಸಂಪೂರ್ಣ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಶಶಿಕಾಂತ ಪಡಸಲಗಿ ತಿಳಿಸಿದ್ದಾರೆ.ರಾಜ್ಯದ ಎಲ್ಲಾ ಗ್ರಾಮಗಳು, ಪಟ್ಟಣಗಳು ಹಾಗೂ ನಗರಗಳಲ್ಲಿ ವ್ಯಾಪಾರಸ್ಥರು, ವಾಹನ ಮಾಲೀಕರು ಮತ್ತು ಚಾಲಕರ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ನ್ಯಾಯವಾದಿಗಳು, ತರಕಾರಿ ವ್ಯಾಪಾರಿಗಳು, ಬ್ಯಾಂಕ್‌ಗಳು, ಶಾಲೆ-ಕಾಲೇಜುಗಳು ಸೇರಿದಂತೆ ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡುವಂತೆ ಅವರು ಮನವಿ ಮಾಡಿದರು. ರಾಜ್ಯಾದ್ಯಂತ ಸಂಪೂರ್ಣ ಬಂದ್ ಹಾಗೂ ಸಂಚಾರ ಸ್ಥಗಿತಗೊಳಿಸುವ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶ ವ್ಯಕ್ತಪಡಿಸಲು ಕರೆ ನೀಡಿದರು.ಅಚಲೇರಿ ಮಠದ ಬಸವರಾಜೇಂದ್ರ ಮಹಾಸ್ವಾಮೀಜಿ ಮಾತನಾಡಿ, ಜಗತ್ತಿಗೆ ಅನ್ನ ನೀಡುವ ರೈತ ದೇಶದ ಬೆನ್ನೆಲುಬು. ಅಂತಹ ರೈತರ ಮನಸ್ಸಿಗೆ ನೋವುಂಟು ಮಾಡಿದವರು ಉಳಿಗಾಲವಿಲ್ಲ. ರೈತರು ಬೆಳೆದ ಕಬ್ಬಿಗೆ ಸೂಕ್ತ ಬೆಲೆ ನೀಡಬೇಕು. ರೈತರ ವಿವಿಧ ಬೇಡಿಕೆಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಬೇಕು. ರೈತರ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳುವ ಮೊದಲೇ ಬೇಡಿಕೆಗಳನ್ನು ಈಡೇರಿಸಬೇಕು. ರೈತರ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಸರ್ಕಾರಗಳಿಗೆ ಆಗ್ರಹಿಸಿದರು.ಈ ವೇಳೆ ರಾಜ್ಯ ರೈತ ಸಂಘದ ಅಧ್ಯಕ್ಷ ಚುನಪ್ಪ ಪೂಜೇರಿ, ಗೌರವಾಧ್ಯಕ್ಷ ಶಶಿಕಾಂತ ಪಡಸಲಗಿ ಗುರೂಜಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತ ಮುಖಂಡರು ಹಾಗೂ ಹೋರಾಟಗಾರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು: ಇಂದು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ
ತಡೆಯಾಜ್ಞೆ ಇದ್ದರೂ ಪೊಲೀಸರಿಂದ ಚಾರ್ಜ್‌ಶೀಟ್‌: ಹೈಕೋರ್ಟ್‌ ಗರಂ