-ರೈತ ಸಂಘ ತಾಲೂಕು ಸಮಿತಿ ಹುಣಸಗಿ ತಹಸೀಲ್ದಾರ್ ಬಸವಲಿಂಗಪ್ಪ ನೈಕೋಡಿಗೆ ಮನವಿ
ಕನ್ನಡಪ್ರಭ ವಾರ್ತೆ ಹುಣಸಗಿ
ಭತ್ತ, ಹತ್ತಿ ಖರೀದಿ ಕೇಂದ್ರ ಸ್ಥಾಪಿಸಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ತಾಲೂಕು ಸಮಿತಿ ವತಿಯಿಂದ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಬಸವಲಿಂಗಪ್ಪ ನೈಕೋಡಿ ಅವರಿಗೆ ಸಲ್ಲಿಸಲಾಯಿತು.ಈ ವೇಳೆ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುದ್ದಣ್ಣ ಅಮ್ಮಾಪುರ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಮೆಣಸಿಕಾಯಿಗೆ ಸೂಕ್ತ ಧಾರಣೆ ಇಲ್ಲ. ರೈತರು ತೀವ್ರ ನಷ್ಟ ಅನುಭವಿಸಿದ್ದಾರೆ. ಮಳೆಗೆ ಹಾನಿಯಾದ ರೈತರಿಗೆ ಪರಿಹಾರ ವಿತರಿಸಬೇಕು. ಅಲ್ಲದೆ ಸದ್ಯ ಹತ್ತಿ ಹಾಗೂ ಭತ್ತ ಖರೀದಿ ಕೇಂದ್ರಗಳ ಆರಂಭಿಸಬೇಕು. ತೂಕದಲ್ಲಿ ರೈತರಿಗೆ ಮೋಸ ಆಗದಂತೆ ಮತ್ತು ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು. ಭತ್ತ ಕಟಾವು ಮಾಡುವ ಯಂತ್ರಕ್ಕೆ 2 ಸಾವಿರ ರು.ಗಳು ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.
ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಹಿಂಗಾರು ಬೆಳೆಗಳಿಗೆ ಎಡದಂಡೆ ಕಾಲುವೆಗೆ ನೀರು ಹರಿಸುವ ಕುರಿತು ಅತೀ ಶೀಘ್ರದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಕೈಗೊಂಡು ಎಲ್ಲಿಯವರೆಗೆ ನೀರು ಹರಿಸಲಾಗುತ್ತದೆಂಬದು ನಿರ್ಣಯಿಸಬೇಕು. ಒಂದು ವೇಳೆ ಬೇಡಿಕೆಗಳಿಗೆ ಸ್ಪಂದಿಸದೇ ಇದ್ದಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು. ಮಲ್ಲಣ್ಣ ಮೇಟಿ, ಸಾಹೇಬಲಾಲ ಕಕ್ಕಲದೊಡ್ಡಿ, ಸಿದ್ದಾರೂಢ ನೂಲಿನ, ಮಲ್ಲಣ್ಣ ಕಲ್ಯಾಣ , ಸಂಗಣ್ಣ ಪೂಜಾರಿ, ಕಾಶೀಮಸಾಬ ಮಾಳನೂರ, ಭೀಮಣ್ಣ ಶ್ರೀನಿವಾಸಪುರ, ಭೀಮಣ್ಣ ಹುಲಿಕೇರಿ ಇದ್ದರು.------
28ವೈಡಿಆರ್3: ಹತ್ತಿ, ಭತ್ತ ಖರೀದಿ ಕೇಂದ್ರ ಸ್ಥಾಪನೆಸುವಂತೆ ಆಗ್ರಹಿಸಿ ರೈತ ಸಂಘದ ವತಿಯಿಂದ ಹುಣಸಗಿ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ತಹಸೀಲ್ದಾರ್ ಬಸವಲಿಂಗಪ್ಪ ನೈಕೋಡಿ ಅವರಿಗೆ ಮನವಿ ಸಲ್ಲಿಸಲಾಯಿತು.