ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆನಾನಾ ಬೇಡಿಕೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಟ್ರ್ಯಾಕ್ಟರ್ ಜಾಥಾದ ಮೂಲಕ ಪ್ರತಿಭಟಿಸಿದರು.
ಪ್ರತಿಭಟನಾ ಸ್ಥಳಕ್ಕೆ ತಹಸೀಲ್ದಾರ್ ತನ್ಮಯ್ ಹಾಗೂ ಅಧಿಕಾರಿಗಳು ಬರುವುದು ವಿಳಂಬವಾಗುವ ಮಾಹಿತಿ ಅರಿತ ಕಾರ್ಯಕರ್ತರು ಆಕ್ರೋಶ ಭರಿತರಾಗಿ ಹೆದ್ದಾರಿ ತಡೆದರು. ಅಲ್ಲದೆ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧವೂ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು.
ನಂತರ ಸ್ಥಳಕ್ಕಾಗಮಿಸಿದ ತಹಸೀಲ್ದಾರ್ ತನ್ಮಯ್ ರೈತರ ಸಮಸ್ಯೆ ಆಲಿಸಿದರು. ಇತರೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ರೈತರ ಸಮಸ್ಯೆ ಆಲಿಸುವ ಸಮಯದಲ್ಲಿ ಮಾತನಾಡಿದ ರೈತರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ಅರಣ್ಯದಂಚಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿದೆ ಮೊದಲು ನಾಡಿಗೆ ಬರದಂತೆ ತಡೆಯಬೇಕು ಎಂದು ಆಗ್ರಹಿಸಿದರು.ಕಂದಾಯ ಹಾಗೂ ಗೋಮಾಳದಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಬೇಕು. ರೈತರು ಜಮೀನಿಗೆ ತೆರಳಲಿ ಜಾಗ ನಿಗದಿಪಡಿಸಬೇಕು. ಕೆರೆಗಳಿಗೆ ನೀರು ತುಂಬಿಸಬೇಕು ಹಾಗೂ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ಕೈ ಬಿಡಬೇಕು ಎಂದು ಒತ್ತಾಯಿಸಿದರು.ರೈತರ ಬೇಡಿಕೆ ಕೂಡಲೇ ತಾಲೂಕು ಆಡಳಿತ ಬಗೆಹರಿಸಬೇಕು ಎಂದು ಅಧಿಕಾರಿಗಳು ಭರವಸೆ ನೀಡಬೇಕು ಎಂದು ಅಧಿಕಾರಿಗಳನ್ನು ಪಟ್ಟು ಹಿಡಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಬಸವಣ್ಣ, ನಾಗಪ್ಪ ಸೇರಿದಂತೆ ರೈತ ಸಂಘದ ಕಾರ್ಯಕರ್ತರು ಇದ್ದರು.
11ಜಿಪಿಟಿ3ಗುಂಡ್ಲುಪೇಟೆ ತಾಲೂಕು ಕಚೇರಿ ಬಳಿ ರೈತಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.